AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳಿಗೆ ಕಾಲಿಡಲಿರುವ ಜಾನ್ಹವಿ ಕಪೂರ್, ಮೊದಲ ಬಾರಿ ಗ್ಲಾಮರ್ ರಹಿತ ಪಾತ್ರ

Janhvi Kapoor: ಎರಡು ತೆಲುಗು ಸಿನಿಮಾಗಳಲ್ಲಿ ನಟಿಸಿರುವ ಜಾನ್ಹವಿ ಕಪೂರ್, ಎರಡೂ ಸಿನಿಮಾಗಳಲ್ಲಿ ಕೇವಲ ಗ್ಲಾಮರ್ ಗೊಂಬೆಯಾಗಿ ಅಷ್ಟೆ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ಅವರ ನಟನೆಯ ‘ಪೆದ್ದಿ’ ಸಿನಿಮಾನಲ್ಲಿ ಅವರನ್ನು ಅತಿಯಾಗಿ ಗ್ಲಾಮರಸ್ ಆಗಿ ತೋರಿಸಲಾಗಿರುವುದು ವಿವಾದಕ್ಕೆ ಸಹ ಕಾರಣವಾಗಿತ್ತು. ಇದೀಗ ಜಾನ್ಹವಿ ಕಪೂರ್ ತಮಿಳು ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಈ ಬಾರಿ ಮೊದಲ ಬಾರಿ ದಕ್ಷಿಣದಲ್ಲಿ ಗ್ಲಾಮರ್ ರಹಿತ ಪಾತ್ರದಲ್ಲಿ ಅವರು ನಟಿಸಲಿದ್ದಾರೆ.

ತಮಿಳಿಗೆ ಕಾಲಿಡಲಿರುವ ಜಾನ್ಹವಿ ಕಪೂರ್, ಮೊದಲ ಬಾರಿ ಗ್ಲಾಮರ್ ರಹಿತ ಪಾತ್ರ
Janhvi Kapoor
ಮಂಜುನಾಥ ಸಿ.
|

Updated on: Jul 01, 2026 | 7:47 AM

Share

ಬಾಲಿವುಡ್​​ನ ಸ್ಟಾರ್ ಯುವನಟಿ ಜಾನ್ಹವಿ ಕಪೂರ್ (Janhvi Kapoor), ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಜಾನ್ಹವಿ ಕಪೂರ್​​ ಅವರನ್ನು ಸಾಮಾನ್ಯವಾಗಿ ಗ್ಲಾಮರ್​ಗಾಗಿಯೇ ಸಿನಿಮಾಗಳಿಗೆ ಹಾಕಿಕೊಳ್ಳಲಾಗುತ್ತದೆ. ಜಾನ್ಹವಿ ಸಹ ಗ್ಲಾಮರಸ್ ಆಗಿ ಕಾಣಿಸಿಕೊಳ್ಳಲು ಹಿಂಜರಿಯುವುದಿಲ್ಲ. ಎರಡು ತೆಲುಗು ಸಿನಿಮಾಗಳಲ್ಲಿ ನಟಿಸಿರುವ ಜಾನ್ಹವಿ ಕಪೂರ್, ಎರಡೂ ಸಿನಿಮಾಗಳಲ್ಲಿ ಕೇವಲ ಗ್ಲಾಮರ್ ಗೊಂಬೆಯಾಗಿ ಅಷ್ಟೆ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ಅವರ ನಟನೆಯ ‘ಪೆದ್ದಿ’ ಸಿನಿಮಾನಲ್ಲಿ ಅವರನ್ನು ಅತಿಯಾಗಿ ಗ್ಲಾಮರಸ್ ಆಗಿ ತೋರಿಸಲಾಗಿರುವುದು ವಿವಾದಕ್ಕೆ ಸಹ ಕಾರಣವಾಗಿತ್ತು. ಇದೀಗ ಜಾನ್ಹವಿ ಕಪೂರ್ ತಮಿಳು ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಈ ಬಾರಿ ಮೊದಲ ಬಾರಿ ದಕ್ಷಿಣದಲ್ಲಿ ಗ್ಲಾಮರ್ ರಹಿತ ಪಾತ್ರದಲ್ಲಿ ಅವರು ನಟಿಸಲಿದ್ದಾರೆ.

ಜಾನ್ಹವಿ ಕಪೂರ್ ಅವರು ತಮಿಳು ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದು, ತಮಿಳಿನ ಪ್ರತಿಭಾವಂತ ನಿರ್ದೇಶಕರೊಬ್ಬರ ಸಿನಿಮಾನಲ್ಲಿ ನಟಿಸಲಿದ್ದಾರೆ. ಶೋಷಿತ ವರ್ಗಗಗಳ ಪರ ಸಿನಿಮಾ ಮಾಡುವ, ಸಮಾಜದ ವರ್ಗ ಭೇದ, ಜಾತಿ ಬೇಧಗಳನ್ನು ತಮ್ಮ ಸಿನಿಮಾಗಳಲ್ಲಿ ತೋರಿಸುತ್ತಾ ಬಂದಿರುವ ನಿರ್ದೇಶಕ ಪಾ ರಂಜಿತ್ ಅವರ ಹೊಸ ಸಿನಿಮಾನಲ್ಲಿ ಜಾನ್ಹವಿ ಕಪೂರ್ ಅವರು ನಾಯಕಿಯಾಗಿ ನಟಿಸಲಿದ್ದಾರೆ.

ಪಾ ರಂಜಿತ್ ಅವರು ನೈಜ ಕತೆಯೊಂದನ್ನು ಆಧರಿಸಿದ ಸಿನಿಮಾ ಮಾಡುತ್ತಿದ್ದು, ಸಿನಿಮಾನಲ್ಲಿ ಜಾನ್ಹವಿ ಕಪೂರ್ ನಾಯಕಿ. ಇದು ಅವರ ಮೊದಲ ಗ್ಲಾಮರ್ ರಹಿತ ಪಾತ್ರ ಆಗಲಿದೆ. ಬಾಲಿವುಡ್​​ನಲ್ಲಿ ‘ಮಿಲಿ’, ‘ಗುಡ್ ಲಕ್ ಜೆರ್ರಿ’, ‘ಗುಂಜನ್ ಸಕ್ಸೇನಾ’, ‘ಹೋಮ್​​ಬೌಂಡ್’ ಅಂಥಹಾ ಸಿನಿಮಾಗಳಲ್ಲಿ ಅವರು ಗ್ಲಾಮರ್ ರಹಿತ ಪಾತ್ರಗಳಲ್ಲಿ ನಟಿಸಿದ್ದರು. ಇದೀಗ ದಕ್ಷಿಣ ಭಾರತ ಚಿತ್ರರಂಗದಲ್ಲಿ ಮೊದಲ ಬಾರಿಗೆ ಗ್ಲಾಮರ್ ರಹಿತ ಸಿನಿಮಾನಲ್ಲಿ ನಟಿಸಲು ಸಜ್ಜಾಗಿದ್ದಾರೆ.

ಇದನ್ನೂ ಓದಿ:ದಕ್ಷಿಣದ ಚಿತ್ರರಂಗದಿಂದ ದೂರಾಗಲಿದ್ದಾರೆಯೇ ನಟಿ ಜಾನ್ಹವಿ ಕಪೂರ್

ಪಾ ರಂಜಿತ್ ಅವರು ನೈಜ ಕತೆಯೊಂದನ್ನು ಆಧರಿಸಿದ ಸಿನಿಮಾ ಮಾಡಲು ಮುಂದಾಗಿದ್ದಾರೆ. ವಿಶೇಷವೆಂದರೆ ಇದು ಮಹಿಳಾ ಪ್ರಧಾನ ಸಿನಿಮಾ ಆಗಿರಲಿದೆ ಎನ್ನಲಾಗುತ್ತಿದ್ದು, ಜಾನ್ಹವಿ ಅವರೇ ಈ ಸಿನಿಮಾದ ಪ್ರಧಾನ ಪಾತ್ರದಲ್ಲಿ ನಟಿಸಲಿದ್ದಾರೆ. ‘ಕಾಲಾ’, ‘ಕಬಾಲಿ’, ‘ಸರ್ಪಟ್ಟ ಪರಂಬರೈ’, ‘ತಂಗಾಲನ್’ ಅಂಥಹಾ ಸಿನಿಮಾಗಳನ್ನು ನಿರ್ದೇಶಿಸಿರುವ ಪಾ ರಂಜಿತ್ ಇದೀಗ ಜಾನ್ಹವಿ ಅವರೊಟ್ಟಿಗೆ ಹೊಸ ಸಿನಿಮಾ ಮಾಡುತ್ತಿದ್ದಾರೆ. ಜಾನ್ಹವಿ ಕಪೂರ್ ಪ್ರಸ್ತುತ ‘ಲಗ್ ಜಾ ಗಲೆ’ ಹೆಸರಿನ ರೊಮ್ಯಾಂಟಿಕ್ ಹಿಂದಿ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಬಳಿಕ ತಮಿಳು ಸಿನಿಮಾ ಸೆಟ್​ ಸೇರಿಕೊಳ್ಳಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ