AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೂವರೆ ಲಕ್ಷ ಬೆಲೆಯ ಗೌನ್ ಧರಿಸಿ ಕಾನ್ ಸಿನಿಮೋತ್ಸವದಲ್ಲಿ ಮಿಂಚಿದ ಜಾನ್ವಿ ಕಪೂರ್

ಜಾನ್ವಿ ಕಪೂರ್ ಅವರು ಕಾನ್ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದಾರೆ. ಅವರು ಧರಿಸಿದ 3.4 ಲಕ್ಷ ರೂಪಾಯಿ ಮೌಲ್ಯದ ದುಬಾರಿ ಗೌನ್ ಎಲ್ಲರ ಗಮನ ಸೆಳೆದಿದೆ. ಈ ಗೌನ್ ಶ್ರೀದೇವಿಯ ಉಡುಪನ್ನು ಹೋಲುತ್ತಿದ್ದು, ತಾಯಿಗೆ ಗೌರವ ಸಲ್ಲಿಸಲು ಅವರು ಈ ರೀತಿ ಮಾಡಿದ್ದಾರೆ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಮೂರೂವರೆ ಲಕ್ಷ ಬೆಲೆಯ ಗೌನ್ ಧರಿಸಿ ಕಾನ್ ಸಿನಿಮೋತ್ಸವದಲ್ಲಿ ಮಿಂಚಿದ ಜಾನ್ವಿ ಕಪೂರ್
ಜಾನ್ವಿ
ರಾಜೇಶ್ ದುಗ್ಗುಮನೆ
|

Updated on:May 21, 2025 | 2:54 PM

Share

ಜಾನ್ವಿ ಕಪೂರ್ (Jahnvi Kapoor) ಅವರು ‘ಕಾನ್ ಸಿನಿಮೋತ್ಸವ 2025’ರಲ್ಲಿ ಭಾಗವಹಿಸಿದ್ದಾರೆ. ಮಂಗಳವಾರ (ಮೇ 21) ಜಾನ್ವಿ ಕಪೂರ್ ಅವರು ಕೆಂಪು ಹಾಸಿನ ಮೇಲೆ ದುಬಾರಿ ಗೌನ್ ಧರಿಸಿ ನಡೆದಿದ್ದಾರೆ. ಇದೇ ಮಾದರಿಯ ಡ್ರೆಸ್​ನ ಶ್ರೀದೇವಿ ಈ ಮೊದಲು ಧರಿಸಿದ್ದರು. ಹೀಗಾಗಿ, ಇದು ಅವರು ತಾಯಿಗೆ ನೀಡುತ್ತಿರುವ ಗೌರವ ಇರಬಹುದು ಎಂದು ಅನೇಕರು ಭಾವಿಸಿದ್ದಾರೆ. ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ.

ಮೇ 13ರಿಂದ ಕಾನ್ ಚಿತ್ರೋತ್ಸವ ಫ್ರಾನ್ಸ್​ನಲ್ಲಿ ಆರಂಭ ಆಗಿದೆ. ಕನ್ನಡದ ಕಿರುತೆರೆ ನಟಿ ದಿಶಾ ಮದನ್ ಸೇರಿದಂತೆ ಭಾರತ ಚಿತ್ರರಂಗದ ಅನೇಕರು ಇದರಲ್ಲಿ ಭಾಗಿ ಆಗಿದ್ದಾರೆ. ಜಾನ್ವಿ ಜೊತೆ ಅವರು ನಟಿಸಿದ ‘ಹೋಮ್​ಬೌಂಡ್’ ಚಿತ್ರದ ಸಹ ಕಲಾವಿದರಾದ ಇಶಾನ್ ಖಟ್ಟರ್, ವಿಶಾಲ್ ಜೆತ್ವಾ ಕೂಡ ಇದ್ದರು. ನಿರ್ದೇಶಕ ನೀರಜ್ ಘಯ್ವಾನ್, ನಿರ್ಮಾಪಕ ಕರಣ್ ಜೋಹರ್ ಕೂಡ ಕೆಂಪು ಹಾಸಿನ ಮೇಲೆ ನಡೆದು ಕ್ಯಾಮೆರಾಗಳಿಗೆ ಪೋಸ್ ಕೊಟ್ಟರು.

ಇದನ್ನೂ ಓದಿ
Image
ಜೂನಿಯರ್ ಎನ್​ಟಿಆರ್​ಗೆ 9999 ಮೇಲೆ ಇದೆ ವಿಶೇಷ ಪ್ರೀತಿ; ಕಾರಣ ಏನು?
Image
ರಶ್ಮಿಕಾ ಬಗ್ಗೆ ಕಂಡ ಕನಸಿನ ಬಗ್ಗೆ ಓಪನ್ ಆಗಿ ಹೇಳಿದ ವಿಜಯ್ ದೇವರಕೊಂಡ
Image
ಸುಭಾಷ್ ಚಂದ್ರ ಬೋಸ್ ನನ್ನ ಬಳಿ ಬಂದು ಆ ಒಂದು ಮಾತು ಹೇಳಿದ್ದರು; ಅಜಿತ್
Image
ಶಿವಣ್ಣ-ಗೀತಾ ದಂಪತಿಗೆ ವಿವಾಹ ವಾರ್ಷಿಕೋತ್ಸವ; ಇಲ್ಲಿದೆ ಅಪರೂಪದ ಚಿತ್ರಗಳು

ಜಾನ್ವಿ ಕಪೂರ್ ಉಡುಗೆ ನೆಲಕ್ಕೂ ತಾಗುತ್ತಾ ಇತ್ತು. ಈ ಕಾರಣದಿಂದಲೇ ಅವರ ಸಿನಿಮಾ ನಿರ್ದೇಶಕ ನೀರಜ್ ಅವರು ಡ್ರೆಸ್​​ನ ಹಿಡಿದುಕೊಂಡು ಸಹಾಯ ಮಾಡುತ್ತಿದ್ದರು. ಸದ್ಯ ಜಾನ್ವಿ ಎಂಟ್ರಿ ಸೋಶಿಯಲ್ ಮೀಡಿಯಾದಲ್ಲಿ ಹಲ್​ಚಲ್ ಎಬ್ಬಿಸಿದೆ. ಎಲ್ಲರೂ ಇದಕ್ಕೆ ವಿವಿಧ ರೀತಿ ಕಮೆಂಟ್ ಮಾಡಿದ್ದಾರೆ. ನೀರಜ್ ಸಹಾಯವನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ.

ನೀರಜ್ ಘಯ್ವಾನ್ ನಿರ್ದೇಶನದ ‘ಹೋಮ್​ಬೌಂಡ್’ ಸಿನಿಮಾದಲ್ಲಿ ಜಾನ್ವಿ, ಇಶಾನ್ ಹಾಗೂ ವಿಶಾಲ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಕಾನ್ ಸಿನಿಮೋತ್ಸವದಲ್ಲಿ ಪ್ರಸಾರ ಕಂಡಿದೆ. ಮಾರ್ಟಿನ್ ಸ್ಕೋರ್ಸಸ್ ಅವರು ಈ ಚಿತ್ರದ ನಿರ್ಮಾಪಕರು. ಹೀಗಾಗಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿನಿಮಾ ಸದ್ದು ಮಾಡುತ್ತಿದೆ.

ಇದನ್ನೂ ಓದಿ: ಜಾನ್ವಿ ಕಪೂರ್ ಬಾಯ್​ಫ್ರೆಂಡ್​ಗೆ ದಲಿತ ಎಂದು ಮೂದಲಿಸಿದ ಅಭಿಮಾನಿ: ಸಿಕ್ತು ಖಡಕ್ ಉತ್ತರ

ಈ ಗೌನ್​ನ ಬೆಲೆ ಕೂಡ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಗೌನ್​ಗೆ ಜಾನ್ವಿ ಕಪೂರ್ 3.4 ಲಕ್ಷ ರೂಪಾಯಿ ನೀಡಿದ್ದಾರೆ ಹೇಳಲಾಗುತ್ತಿದೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ಗೌನ್ ಬೆಲೆ ಅನೇಕರಿಗೆ ಅಚ್ಚರಿ ತಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:03 am, Wed, 21 May 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ