ಅತ್ಯಾಚಾರ ಆರೋಪಿ ಜಾನಿ ಮಾಸ್ಟರ್​ಗೆ ತಾತ್ಕಾಲಿಕ ಜಾಮೀನು

Jani Master: ಅತ್ಯಾಚಾರ ಆರೋಪ, ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ಜಾನಿ ಮಾಸ್ಟರ್​ಗೆ ಐದು ದಿನಗಳ ತಾತ್ಕಾಲಿಕ ಜಾಮೀನನ್ನು ನ್ಯಾಯಾಲಯ ಮಂಜೂರು ಮಾಡಿದೆ.

ಅತ್ಯಾಚಾರ ಆರೋಪಿ ಜಾನಿ ಮಾಸ್ಟರ್​ಗೆ ತಾತ್ಕಾಲಿಕ ಜಾಮೀನು
Follow us
ಮಂಜುನಾಥ ಸಿ.
|

Updated on: Oct 03, 2024 | 12:43 PM

ರಾಷ್ಟ್ರಪ್ರಶಸ್ತಿ ವಿಜೇತ ಡ್ಯಾನ್ಸ್ ಕೊರಿಯೋಗ್ರಾಫರ್ ಜಾನಿ ಮಾಸ್ಟರ್​ಗೆ ಷರತ್ತುಬದ್ಧ ತಾತ್ಕಾಲಿಕ ಜಾಮೀನು ಮಂಜೂರಾಗಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಜಾನಿ ಮಾಸ್ಟರ್ ಅನ್ನು ಕೆ ವಾರದ ಹಿಂದೆ ತೆಲಂಗಾಣ ಪೊಲೀಸರು ಬಂಧಿಸಿದ್ದರು. ಇದೀಗ ಜಾನಿ ಮಾಸ್ಟರ್​ಗೆ ಐದು ದಿನಗಳ ತಾತ್ಕಾಲಿಕ ಜಾಮೀನು ನೀಡಲಾಗಿದ್ದು, ರಾಷ್ಟ್ರಪ್ರಶಸ್ತಿಯನ್ನು ಸ್ವೀಕರಿಸಲೆಂದು ಈ ಜಾಮೀನನ್ನು ನೀಡಲಾಗಿದೆ ಎನ್ನಲಾಗುತ್ತಿದೆ.

ಜಾನಿ ಮಾಸ್ಟರ್ ಅನ್ನು ಅತ್ಯಾಚಾರ ಆರೋಪದಡಿ ಕಳೆದ ತಿಂಗಳು 21ರಂದು ತೆಲಂಗಾಣ ಪೊಲೀಸರು ಬಂಧಿಸಿದ್ದರು. 21 ವರ್ಷದ ಡ್ಯಾನ್ಸರ್ ಒಬ್ಬರು ಜಾನಿ ಮಾಸ್ಟರ್ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದರು, ಯುವತಿಯ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಜಾನಿ ಮಾಸ್ಟರ್ ವಿರುದ್ಧ ಪೋಕ್ಸೋ ಪ್ರಕರಣ ಸಹ ದಾಖಲು ಮಾಡಿದ್ದರು. ಯುವತಿ ನೀಡಿದ್ದ ದೂರಿನಂತೆ ಜಾನಿ ಮಾಸ್ಟರ್ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಾಗ ಆಕೆಗೆ ವಯಸ್ಸು 16 ಆಗಿತ್ತಂತೆ. ಇದೇ ಕಾರಣಕ್ಕೆ ಜಾನಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿತ್ತು.

ಇದೀಗ ನ್ಯಾಯಾಲಯವು ಐದು ದಿನಗಳ ಜಾಮೀನನ್ನು ಜಾನಿ ಮಾಸ್ಟರ್​ಗೆ ನೀಡಿದೆ. ಜಾನಿ ಮಾಸ್ಟರ್​ಗೆ ಇತ್ತೀಚೆಗಷ್ಟೆ ರಾಷ್ಟ್ರಪ್ರಶಸ್ತಿ ದೊರೆತಿದ್ದು, ರಾಷ್ಟ್ರಪ್ರಶಸ್ತಿಯನ್ನು ಸ್ವೀಕರಿಸಲು ಮಾತ್ರವೇ ಈ ಜಾಮೀನು ನೀಡಲಾಗಿದೆ. ಅಕ್ಟೋಬರ್ 06 ರಿಂದ 10ರವರೆಗೆ ಜಾನಿ ಮಾಸ್ಟರ್​ಗೆ ಜಾಮೀನು ನೀಡಲಾಗಿದೆ. ಕಳೆದ ವರ್ಷ ಬಿಡುಗಡೆ ಆಗಿದ್ದ ತಮಿಳಿನ ‘ತಿರುಚಿತ್ರಬಲಂ’ ಸಿನಿಮಾದ ಕೊರಿಯೋಗ್ರಫಿಗೆ ಜಾನಿ ಮಾಸ್ಟರ್​ಗೆ ರಾಷ್ಟ್ರಪ್ರಶಸ್ತಿ ನೀಡಲಾಗಿದೆ. ರಾಷ್ಟ್ರಪ್ರಶಸ್ತಿ ವಿತರಣೆ ಸಮಾರಂಭ ಕೆಲವೇ ದಿನಗಳಲ್ಲಿ ನಡೆಯಲಿದ್ದು, ಅದಕ್ಕೆಂದು ಇದೀಗ ಜಾನಿ ಮಾಸ್ಟರ್​ಗೆ ಜಾಮೀನು ನೀಡಲಾಗಿದೆ.

ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಎಸಗುವಾಗ ಆಕೆಗಿನ್ನೂ 16 ವರ್ಷ; ಜಾನಿ ಮಾಸ್ಟರ್ ರಿಮಾಂಡ್ ರಿಪೋರ್ಟ್

ಜಾನಿ ಮಾಸ್ಟರ್​ನ ಪತ್ನಿ ಆಯೆಷಾ, ತನ್ನ ಪತಿ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವ ಯುವತಿ ವಿರುದ್ಧ ದೂರು ದಾಖಲಿಸಿದ್ದು, ಆಕೆ, ಹಣಕ್ಕಾಗಿ ಶ್ರೀಮಂತರನ್ನು, ಸೆಲೆಬ್ರಿಟಿಗಳನ್ನು ಪ್ರೀತಿ ಹೆಸರಲ್ಲಿ ಬುಟ್ಟಿಗೆ ಹಾಕಿಕೊಳ್ಳುವ ಕಾರ್ಯ ಮಾಡುತ್ತಾಳೆ. ನನ್ನ ಪತಿಗೆ ಆಕೆ ಮಾನಸಿಕ ಹಿಂಸೆ ನೀಡಿದ್ದಾಳೆ. ನನ್ನ ಪತಿಯನ್ನು ಆಕೆ ತನ್ನ ವಶದಲ್ಲಿ ಇಟ್ಟುಕೊಂಡಿದ್ದಳು, ಹಣ ಕೊಡದೇ ಇದ್ದರೆ ದೂರು ನೀಡುವುದಾಗಿ ಹೆದರಿಸಿದ್ದಳು, ತನ್ನ ಮನೆಗೆ ಸಹ ಬರಲು ಆಕೆ ಬಿಡುತ್ತಿರಲಿಲ್ಲ ಎಂದು ದೂರು ನೀಡಿದ್ದು, ಅದಕ್ಕೆ ಸಂಬಂಧಿಸಿದ ಸಾಕ್ಷಿಗಳನ್ನು ಸಹ ಸಲ್ಲಿಸಿದ್ದಾರೆ.

ತನಗೆ ಆ ಯುವತಿ ಮಾನಸಿಕ ಹಿಂಸೆ ನೀಡುತ್ತಿರುವ ವಿಷಯವನ್ನು ಜಾನಿ ಮಾಸ್ಟರ್ ತಮ್ಮ ಬಳಿ ಅಲ್ಲದೆ, ‘ಪುಷ್ಪ’ ಸಿನಿಮಾದ ನಿರ್ದೇಶಕ ಸುಕುಮಾರ್ ಬಳಿಯೂ ಹೇಳಿಕೊಂಡಿದ್ದರು ಎಂದು ಆಯೆಷಾ ಹೇಳಿದ್ದಾರೆ. ಇದೀಗ ತೆಲುಗು ಫಿಲಂ ಚೇಂಬರ್ ಆಫ್ ಕಾಮರ್ಸ್, ಆಯೆಷಾ ನೀಡಿರುವ ದೂರನ್ನು ಸ್ವೀಕರಿಸಿದ್ದು, ಯುವತಿಯ ವಿರುದ್ಧ ತನಿಖೆ ನೀಡುವ ಭರವಸೆ ನೀಡಿದೆ. ಪೊಲೀಸರಿಗೂ ಸಹ ಆಯೆಷಾ ಯುವತಿ ವಿರುದ್ಧ ದೂರು ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಕ್ಕಳ ಮೇಲೆ ಗ್ರಹಗಳ ಪ್ರಭಾವ ಹೇಗಿರುತ್ತೆ ? ವಿಡಿಯೋ ನೋಡಿ
ಮಕ್ಕಳ ಮೇಲೆ ಗ್ರಹಗಳ ಪ್ರಭಾವ ಹೇಗಿರುತ್ತೆ ? ವಿಡಿಯೋ ನೋಡಿ
Daily Horoscope: ಈ ರಾಶಿಯವರಿಗೆ ಇಂದು ಹೆಚ್ಚಿನ ಧನ ಪ್ರಾಪ್ತಿಯಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಹೆಚ್ಚಿನ ಧನ ಪ್ರಾಪ್ತಿಯಾಗಲಿದೆ
ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ದತ್ತಜಯಂತಿ: ಶೋಭಾಯಾತ್ರೆಯ ಮನಮೋಹಕ ದೃಶ್ಯ ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ದತ್ತಜಯಂತಿ: ಶೋಭಾಯಾತ್ರೆಯ ಮನಮೋಹಕ ದೃಶ್ಯ ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್