AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ಜೊತೆ ನಟಿಸಿದ ಕಲಾವಿದ ಈಗ ಹೋಟೆಲ್ ಸಪ್ಲೈಯರ್? ಪ್ರತಿಕ್ರಿಯಿಸಿದ ನಟ

ವಿಜಯ್ ಮತ್ತು ಅಜಿತ್ ಜೊತೆ ನಟಿಸಿದ್ದ ಖ್ಯಾತ ನಟ ಜಪಾನ್ ಕುಮಾರ್ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ನಟನಿಗೆ ಇಂತಹ ಪರಿಸ್ಥಿತಿ ಬಂದಿದೆಯೇ ಎಂದು ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸಿದ್ದರು. ಆದರೆ, ಅವರ ಪತ್ನಿ ಜ್ಯೋತಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅದು ಜಪಾನ್ ಕುಮಾರ್ ಅವರ ಸಹೋದರನ ಹೋಟೆಲ್ ಆಗಿದ್ದು, ಅವರು ಚಿತ್ರೀಕರಣ ಇಲ್ಲದ ಸಮಯದಲ್ಲಿ ಸಹಾಯ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ. ವೈರಲ್ ವಿಡಿಯೋ ಬಗ್ಗೆ ತಪ್ಪು ಮಾಹಿತಿ ಹರಡಿದೆ.

ವಿಜಯ್ ಜೊತೆ ನಟಿಸಿದ ಕಲಾವಿದ ಈಗ ಹೋಟೆಲ್ ಸಪ್ಲೈಯರ್? ಪ್ರತಿಕ್ರಿಯಿಸಿದ ನಟ
ವಿಜಯ್
ರಾಜೇಶ್ ದುಗ್ಗುಮನೆ
|

Updated on: May 09, 2026 | 1:16 PM

Share

ತಮಿಳು ಚಿತ್ರರಂಗದ ಖ್ಯಾತ ಪೋಷಕ ನಟ ಮತ್ತು ಡ್ಯಾನ್ಸರ್ ‘ಜಪಾನ್ ಕುಮಾರ್’ ಅವರು ರಸ್ತೆ ಬದಿಯ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿರುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ವಿಜಯ್ ಮತ್ತು ಅಜಿತ್ ಅವರಂತಹ ಸ್ಟಾರ್ ನಟರ ಜೊತೆ ನಟಿಸಿದ್ದ ಕಲಾವಿದನಿಗೆ ಇಂತಹ ಪರಿಸ್ಥಿತಿ ಬಂದಿದೆಯೇ ಎಂದು ಹಲವರು ಅಚ್ಚರಿ ಮತ್ತು ವಿಷಾದ ವ್ಯಕ್ತಪಡಿಸಿದ್ದರು. ಆದರೆ, ಈ ಕುರಿತು ಜಪಾನ್ ಕುಮಾರ್ ಅವರ ಪತ್ನಿ ಜ್ಯೋತಿ ಅವರು ಸ್ಪಷ್ಟನೆ ನೀಡುವ ಮೂಲಕ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಚೆನ್ನೈನ ವಡಪಳನಿಯಲ್ಲಿರುವ ‘ಶಕ್ತಿ ಹೋಮ್ ಫುಡ್ಸ್’ ಎಂಬ ಹೋಟೆಲ್‌ನಲ್ಲಿ ಜಪಾನ್ ಕುಮಾರ್ ಅವರು ಗ್ರಾಹಕರಿಗೆ ಊಟ ಬಡಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದನ್ನು ನೋಡಿ ನೆಟ್ಟಿಗರು ‘ಸಿನಿಮಾ ರಂಗ ಎಷ್ಟು ಕ್ರೂರ, ಅವಕಾಶಗಳಿಲ್ಲದೆ ನಟ ಇಂದು ಹೋಟೆಲ್ ನಡೆಸುತ್ತಿದ್ದಾರೆ’ ಎಂದು ಮರುಕ ಪಟ್ಟಿದ್ದರು. ಇನ್ನು ಕೆಲವರು ‘ಯಾವುದೇ ಕೆಲಸ ಮಾಡಿದರೂ ಅದು ಗೌರವಯುತವಾದುದು’ ಎಂದು ಬೆಂಬಲಿಸಿದ್ದರು.

ವೈರಲ್ ವಿಡಿಯೋದ ಅಸಲಿಯತ್ತೇನು?

ಈ ಬಗ್ಗೆ ಮಾತನಾಡಿದ ಜ್ಯೋತಿ ಕುಮಾರ್ ಅವರು, ‘ಆ ಹೋಟೆಲ್ ಜಪಾನ್ ಕುಮಾರ್ ಅವರಿಗೆ ಸೇರಿದ್ದಲ್ಲ. ಅದು ಅವರ ಸಹೋದರನ ಹೋಟೆಲ್. ಚಿತ್ರೀಕರಣ ಇಲ್ಲದ ಸಮಯದಲ್ಲಿ ಅಥವಾ ಊರಿನಲ್ಲಿ ಫ್ರೀ ಇದ್ದಾಗ ಅವರು ಸುಮ್ಮನೆ ಕುಳಿತುಕೊಳ್ಳದೆ ಅಣ್ಣನಿಗೆ ಸಹಾಯ ಮಾಡಲು ಹೋಗುತ್ತಾರೆ. ಯಾರೋ ಅವರು ಕೆಲಸ ಮಾಡುತ್ತಿದ್ದಾಗ ವಿಡಿಯೋ ಮಾಡಿ ತಪ್ಪು ಮಾಹಿತಿಯೊಂದಿಗೆ ಹರಿಬಿಟ್ಟಿದ್ದಾರೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ‘ಮಾನಸಿಕ ನೆಮ್ಮದಿ ನೀಡಿದ್ದು ವಿಜಯ್’; ರಶ್ಮಿಕಾ ಮಂದಣ್ಣ ಮನದಾಳದ ಮಾತು

90ರ ದಶಕ ಹಾಗೂ 2000ರ ಆರಂಭದಲ್ಲಿ ಜಪಾನ್ ಕುಮಾರ್ ಅವರು ತಮ್ಮ ಅದ್ಭುತ ನೃತ್ಯ ಮತ್ತು ಕಾಮಿಡಿ ಟೈಮಿಂಗ್ ಮೂಲಕ ಗುರುತಿಸಿಕೊಂಡಿದ್ದರು. ‘ಸಾಮಿ’, ‘ಪೋಕಿರಿ’, ‘ವರಲಾರು’ ನಂತಹ ಹಿಟ್ ಚಿತ್ರಗಳಲ್ಲಿ ನಟಿಸಿರುವ ಇವರು ಪ್ರಭುದೇವ, ರಾಘವ ಲಾರೆನ್ಸ್ ಅವರಂತಹ ದಿಗ್ಗಜ ಕೊರಿಯೋಗ್ರಾಫರ್‌ಗಳ ಜೊತೆ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್