AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀರೋ ಆಗಲಿರುವ ವಿಜಯ್ ಪುತ್ರ ಜೇಸನ್ ಸಂಜಯ್; ಅಟ್ಲಿ ನಿರ್ಮಾಣ ಸಾಧ್ಯತೆ

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ನಟಿಸಲಿರುವ ಮೊದಲ ಸಿನಿಮಾ ಬಗ್ಗೆ ಇಂಟರೆಸ್ಟಿಂಗ್ ವಿಷಯ ಕೇಳಿಬರುತ್ತಿದೆ. ನಿರ್ದೇಶನದಲ್ಲಿ ಕೈ ಸುಟ್ಟುಕೊಂಡಿರುವ ಜೇಸನ್ ಅವರು ಈಗ ಹೀರೋ ಆಗಲು ಹೊರಟಿದ್ದಾರೆ. ಅವರ ಸಿನಿಮಾಗೆ ಅಟ್ಲಿ ಅವರು ಬಂಡವಾಳ ಹೂಡುವ ಸಾಧ್ಯತೆ ಇದೆ.

ಹೀರೋ ಆಗಲಿರುವ ವಿಜಯ್ ಪುತ್ರ ಜೇಸನ್ ಸಂಜಯ್; ಅಟ್ಲಿ ನಿರ್ಮಾಣ ಸಾಧ್ಯತೆ
Jason SanjayImage Credit source: Instagram/jason.sanjay_official
ಮದನ್​ ಕುಮಾರ್​
|

Updated on: Oct 29, 2026 | 10:05 PM

Share

ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ಅವರು ತಮ್ಮ ವೃತ್ತಿಜೀವನದಲ್ಲಿ ದೊಡ್ಡ ಬದಲಾವಣೆಗೆ ಮುಂದಾಗಿದ್ದಾರೆ. ನಿರ್ದೇಶನದಿಂದ ನಟನೆಯತ್ತ ಹೆಜ್ಜೆ ಇಡಲು ಸಜ್ಜಾಗಿರುವ ಅವರಿಗೆ ಖ್ಯಾತ ನಿರ್ದೇಶಕ ಅಟ್ಲಿ ಹಾಗೂ ‘ಡ್ಯೂಡ್’ ಖ್ಯಾತಿಯ ಕೀರ್ತೀಶ್ವರನ್ ಸಾಥ್ ನೀಡಲಿದ್ದಾರೆ ಎನ್ನಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ನಿರ್ದೇಶಕ ಕೀರ್ತೀಶ್ವರನ್ ಅವರು ಜೇಸನ್ ಸಂಜಯ್‌ಗಾಗಿ ಆಕರ್ಷಕ ಕಥೆಯೊಂದನ್ನು ಸಿದ್ಧಪಡಿಸಿದ್ದಾರೆ. ಕೀರ್ತೀಶ್ವರನ್ ಮತ್ತು ಸಂಜಯ್ ನಡುವೆ ಈಗಾಗಲೇ ಕಥೆಯ ಕುರಿತು ಮಾತುಕತೆಗಳು ನಡೆದಿವೆ ಎಂದು ಹೇಳಲಾಗುತ್ತಿದೆ.

ಜೇಸನ್ ಸಂಜಯ್ ಇತ್ತೀಚೆಗಷ್ಟೇ ‘ಸಿಗ್ಮಾ’ ಚಿತ್ರದ ಮೂಲಕ ನಿರ್ದೇಶಕನಾಗಿ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಸಂದೀಪ್ ಕಿಶನ್ ನಾಯಕರಾಗಿ ನಟಿಸಿದ್ದ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ಬಾಕ್ಸ್ ಆಫೀಸ್‌ನಲ್ಲಿ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಮಾಡದೆ ಪ್ರೇಕ್ಷಕರನ್ನು ನಿರಾಶೆಗೊಳಿಸಿತು.

ಈ ಹಿನ್ನೆಲೆಯಲ್ಲಿ ಜೇಸನ್ ಸಂಜಯ್ ಅವರು ತಮ್ಮ ಗಮನವನ್ನು ಬದಲಾಯಿಸಿಕೊಂಡಿದ್ದು, ಕ್ಯಾಮೆರಾ ಹಿಂದಿನಿಂದ ಕ್ಯಾಮೆರಾ ಮುಂದೆ ಬರಲು ನಿರ್ಧರಿಸಿದ್ದಾರೆ. ಅಂದರೆ, ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಂಪೂರ್ಣ ಸಿದ್ಧತೆ ನಡೆಸುತ್ತಿದ್ದಾರೆ.

ಅತ್ಯಂತ ಕುತೂಹಲಕಾರಿ ಸಂಗತಿಯೆಂದರೆ, ದಳಪತಿ ವಿಜಯ್ ಅವರ ಆಪ್ತ ಮಿತ್ರ ಹಾಗೂ ಭಾರತೀಯ ಚಿತ್ರರಂಗದ ಪ್ರಸಿದ್ಧ ನಿರ್ದೇಶಕ ಅಟ್ಲಿ ಅವರು ಈ ಚಿತ್ರವನ್ನು ನಿರ್ಮಿಸಲು ಮುಂದೆ ಬಂದಿದ್ದಾರೆ. ಇತ್ತೀಚೆಗಷ್ಟೇ ನಿರ್ಮಾಪಕನಾಗಿ ಯಶಸ್ಸನ್ನು ಅನುಭವಿಸಿರುವ ಅಟ್ಲಿ ಅವರು ಸಂಜಯ್ ಅವರನ್ನು ಕಾಲಿವುಡ್‌ನ ಮುಂದಿನ ಸೂಪರ್‌ಸ್ಟಾರ್ ಆಗಿ ರೂಪಿಸಲು ವೈಯಕ್ತಿಕವಾಗಿ ಆಸಕ್ತಿ ವಹಿಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಅಪರೂಪದ ಅವಕಾಶ ಮಿಸ್ ಮಾಡಿಕೊಂಡ ದಳಪತಿ ವಿಜಯ್; ಕಾರಣವೇನು?

ಜೇಸನ್ ಸಂಜಯ್ ಅವರ ನಿರ್ದೇಶನದ ಚೊಚ್ಚಲ ಚಿತ್ರವನ್ನು ನಿರ್ಮಿಸಿದ್ದ ‘ಲೈಕಾ ಪ್ರೊಡಕ್ಷನ್ಸ್’ ಸಂಸ್ಥೆಯೇ ಅವರ ನಟನೆಯ ಚೊಚ್ಚಲ ಚಿತ್ರವನ್ನೂ ನಿರ್ಮಾಣ ಮಾಡಲಿದೆ ಎಂದು ಆರಂಭದಲ್ಲಿ ವರದಿಯಾಗಿತ್ತು. ಆದರೆ ‘ಸಿಗ್ಮಾ’ ಚಿತ್ರದ ಫಲಿತಾಂಶದ ನಂತರ ಯೋಜನೆಯಲ್ಲಿ ಬದಲಾವಣೆಯಾಗಿದೆ ಎನ್ನಲಾಗುತ್ತಿದೆ. ವಿಜಯ್ ಅವರ ಪುತ್ರನ ನಟನೆಯ ಎಂಟ್ರಿ ಕುರಿತು ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸಿಎಂ ಫಡ್ನವೀಸ್ ನೇತೃತ್ವದಲ್ಲಿ ಲೋಕತಂತ್ರ ಬಚಾವೋ, ಅರಾಜಕತಾ ಹಠಾವೋ ರ್‍ಯಾಲಿ
ಸಿಎಂ ಫಡ್ನವೀಸ್ ನೇತೃತ್ವದಲ್ಲಿ ಲೋಕತಂತ್ರ ಬಚಾವೋ, ಅರಾಜಕತಾ ಹಠಾವೋ ರ್‍ಯಾಲಿ
ಬಾಗಲಕೋಟೆಯಲ್ಲಿ ಬಡವರ ಸ್ವಂತ ಮನೆಯ ಕನಸು ಭಗ್ನ
ಬಾಗಲಕೋಟೆಯಲ್ಲಿ ಬಡವರ ಸ್ವಂತ ಮನೆಯ ಕನಸು ಭಗ್ನ
ತಾಲೂಕು, ಜಿಲ್ಲಾ ಪಂಚಾಯ್ತಿ ಎಲೆಕ್ಷನ್: ಗೊಂದಲಕ್ಕೆ ಸಿಲುಕಿದ ರಾಜ್ಯ ಸರ್ಕಾರ!
ತಾಲೂಕು, ಜಿಲ್ಲಾ ಪಂಚಾಯ್ತಿ ಎಲೆಕ್ಷನ್: ಗೊಂದಲಕ್ಕೆ ಸಿಲುಕಿದ ರಾಜ್ಯ ಸರ್ಕಾರ!
ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟ ವಾಪಸ್: 3,600 ದರಕ್ಕೆ ತೃಪ್ತಿಪಟ್ಟ ರೈತರು
ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟ ವಾಪಸ್: 3,600 ದರಕ್ಕೆ ತೃಪ್ತಿಪಟ್ಟ ರೈತರು
ಚಿಕ್ಕಮಗಳೂರು: ನಕಲಿ ಜೇನುತುಪ್ಪ ತಯಾರಿಸುತ್ತಿದ್ದ ಅಸ್ಸಾಂ ಗ್ಯಾಂಗ್ ಲಾಕ್
ಚಿಕ್ಕಮಗಳೂರು: ನಕಲಿ ಜೇನುತುಪ್ಪ ತಯಾರಿಸುತ್ತಿದ್ದ ಅಸ್ಸಾಂ ಗ್ಯಾಂಗ್ ಲಾಕ್
ಹುಬ್ಬಳ್ಳಿ-ಧಾರವಾಡ ಪೊಲೀಸರ ಬಿಗ್ ಆಪರೇಷನ್
ಹುಬ್ಬಳ್ಳಿ-ಧಾರವಾಡ ಪೊಲೀಸರ ಬಿಗ್ ಆಪರೇಷನ್
'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ'
'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ'
ಬಿಗ್ ಬಾಸ್ ಕನ್ನಡ 13: ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ ಸ್ಪರ್ಧಿಗಳು ಯಾರು?
ಬಿಗ್ ಬಾಸ್ ಕನ್ನಡ 13: ಕ್ಯಾಪ್ಟನ್ ಆಗಲು ಯೋಗ್ಯತೆ ಇಲ್ಲದ ಸ್ಪರ್ಧಿಗಳು ಯಾರು?
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್