AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಜೊತೆ ಹಾಲಿವುಡ್ ಸಿನಿಮಾ ಮಾಡಬೇಕು; ಆಸೆ ಬಿಚ್ಚಿಟ್ಟ ವಿಜಯ್ ಮಗ ಜೇಸನ್

ತಮಿಳು ಸೂಪರ್‌ಸ್ಟಾರ್ ದಳಪತಿ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ಚಿತ್ರ ನಿರ್ದೇಶನಕ್ಕೆ ಇಳಿದಿದ್ದಾರೆ. ತಮ್ಮ ಚೊಚ್ಚಲ ಸಿನಿಮಾ 'ಸಿಗ್ಮಾ' ಬಿಡುಗಡೆಗೂ ಮುನ್ನ ಅವರು ಸಂದರ್ಶನ ಒಂದನ್ನು ನೀಡಿದ್ದಾರೆ. ಇದರಲ್ಲಿ ಅವರು ಹಾಲಿವುಡ್ ಆಕ್ಷನ್ ಸ್ಟಾರ್ ಜೇಸನ್ ಸ್ಟೇಥಮ್ ಜೊತೆಗೆ ತಮ್ಮ ತಂದೆ ವಿಜಯ್ ಅವರನ್ನು ನಟಿಸುವಂತೆ ಮಾಡುವ ದೊಡ್ಡ ಆಸೆಯನ್ನು ಹಂಚಿಕೊಂಡಿದ್ದಾರೆ.

ತಂದೆ ಜೊತೆ ಹಾಲಿವುಡ್ ಸಿನಿಮಾ ಮಾಡಬೇಕು; ಆಸೆ ಬಿಚ್ಚಿಟ್ಟ ವಿಜಯ್ ಮಗ ಜೇಸನ್
ವಿಜಯ್-ಜೇಸನ್
ರಾಜೇಶ್ ದುಗ್ಗುಮನೆ
|

Updated on: Aug 01, 2026 | 9:31 AM

Share

ಮುಖ್ಯಾಂಶಗಳು

  • ಹಾಲಿವುಡ್‌ ಸ್ಟಾರ್ ಜೇಸನ್ ಸ್ಟೇಥಮ್ ಜೊತೆ ತಂದೆ ವಿಜಯ್ ಸಿನಿಮಾ
  • ಸಿನಿಮಾ ನಿರ್ದೇಶನವನ್ನೇ ದಳಪತಿ ವಿಜಯ್ ಪುತ್ರ ಆಯ್ಕೆ ಮಾಡಿಕೊಂಡಿದ್ದೇಕೆ?
  • ಕೆನಡಾದಲ್ಲಿ ಸಿನಿಮಾ ಕೋರ್ಸ್ ಮುಗಿಸಿ 'ಸಿಗ್ಮಾ' ಚಿತ್ರದ ಡೈರೆಕ್ಟರ್ ಆದ ಜೇಸನ್ ಸಂಜಯ್

ತಮಿಳುನಾಡು ಸಿಎಂ, ನಟ ದಳಪತಿ ವಿಜಯ್ ಅವರ ಮಗ ಜೇಸನ್ ಸಂಜಯ್ ಈಗ ಚಿತ್ರರಂಗಕ್ಕೆ ಎಂಟ್ರಿ ಕೊಡಲು ರೆಡಿಯಾಗಿದ್ದಾರೆ. ಅವರು ನಿರ್ದೇಶಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸುತ್ತಿದ್ದಾರೆ. ಸುದೀಪ್ ಕಿಶನ್ ನಾಯಕನಾಗಿ ನಟಿಸುತ್ತಿರುವ ‘ಸಿಗ್ಮಾ’ ಚಿತ್ರದ ಮೂಲಕ ಅವರು ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರದ ಪ್ರಚಾರದ ಸಂದರ್ಭದಲ್ಲಿ ಜೇಸನ್ ಸಂಜಯ್ ತಮ್ಮ ಮೊದಲ ಸಂದರ್ಶನ ನೀಡಿದ್ದಾರೆ. ಈ ವೇಳೆ ಅವರು ತಮ್ಮ ತಂದೆಯ ಬಗ್ಗೆ ಒಂದು ದೊಡ್ಡ ಆಸೆಯನ್ನು ಹಂಚಿಕೊಂಡಿದ್ದಾರೆ.

ಹಾಲಿವುಡ್ ನಟ ಜೇಸನ್ ಸ್ಟೇಥಮ್ ಮತ್ತು ವಿಜಯ್ ಕಾಂಬಿನೇಷನ್

ಸಂದರ್ಶನದಲ್ಲಿ ಜೇಸನ್ ಸಂಜಯ್ ಅವರಿಗೆ ಒಂದು ಆಸಕ್ತಿದಾಯಕ ಪ್ರಶ್ನೆ ಕೇಳಲಾಗಿತ್ತು. ಹಾಲಿವುಡ್‌ನ ಖ್ಯಾತ ಆಕ್ಷನ್ ನಟ ಜೇಸನ್ ಸ್ಟೇಥಮ್ ಜೊತೆ ಸಿನಿಮಾ ಮಾಡುವ ಅವಕಾಶ ಸಿಕ್ಕರೆ ತಮಿಳು ಚಿತ್ರರಂಗದ ಯಾವ ನಟನನ್ನು ಆಯ್ಕೆ ಮಾಡುತ್ತೀರಿ ಎಂದು ಕೇಳಲಾಗಿತ್ತು. ಇದಕ್ಕೆ ಜೇಸನ್ ಸಂಜಯ್ ತಕ್ಷಣವೇ ನನ್ನ ತಂದೆ ವಿಜಯ್ ಅವರನ್ನು ಆಯ್ಕೆ ಮಾಡುತ್ತೇನೆ ಎಂದು ಉತ್ತರಿಸಿದ್ದಾರೆ. ಇವರಿಬ್ಬರ ಕಾಂಬಿನೇಷನ್ ಅದ್ಭುತವಾಗಿರುತ್ತದೆ ಎಂದು ಅವರು ಹೇಳಿದ್ದಾರೆ. ಆದರೆ ಈ ಉತ್ತರ ಕೇಳಿ ಜನರು ಸೋಶಿಯಲ್ ಮೀಡಿಯಾದಲ್ಲಿ ಮೀಮ್ಸ್ ಮಾಡಬಹುದು ಎಂದು ಅವರು ತಮಾಷೆಯಾಗಿ ನಕ್ಕಿದ್ದಾರೆ.

ನಟನೆಯ ಬದಲು ನಿರ್ದೇಶನ ಆಯ್ಕೆ ಮಾಡಿದ್ದೇಕೆ?

ದಳಪತಿ ವಿಜಯ್ ಅವರಂತಹ ಬಿಗ್ ಸ್ಟಾರ್ ಮಗನಾಗಿದ್ದರೂ ಜೇಸನ್ ನಟನೆಯನ್ನು ಆಯ್ಕೆ ಮಾಡಿಕೊಳ್ಳಲಿಲ್ಲ. ಇದಕ್ಕೆ ಕಾರಣ ಅವರ ಬಾಲ್ಯದ ದಿನಗಳು ಎಂದು ಅವರು ವಿವರಿಸಿದ್ದಾರೆ. ಜೇಸನ್ ಅವರಿಗೆ ಚಿಕ್ಕ ವಯಸ್ಸಿನಿಂದಲೇ ಶೂಟಿಂಗ್ ಸೆಟ್‌ಗಳಿಗೆ ಹೋಗುವ ಅವಕಾಶ ಇತ್ತು. ಅಲ್ಲಿನ ವಾತಾವರಣ ನೋಡಿ ಅವರಿಗೆ ಸಿನಿಮಾದ ಮೇಲೆ ಆಸಕ್ತಿ ಮೂಡಿತು. ಆದರೆ ಆರಂಭದಲ್ಲಿ ಅವರಿಗೆ ಪೈಲಟ್ ಅಥವಾ ಕ್ರಿಕೆಟರ್ ಆಗಬೇಕು ಎಂಬ ಆಸೆ ಇತ್ತು. 11 ಮತ್ತು 12 ನೇ ತರಗತಿಯಲ್ಲಿದ್ದಾಗ ಅವರಿಗೆ ಚಿತ್ರಕಥೆ ಬರೆಯುವ ಹವ್ಯಾಸ ಶುರುವಾಯಿತು. ಆ ಬಳಿಕ ಅವರು ಕೆನಡಾಕ್ಕೆ ಹೋಗಿ ಸಿನಿಮಾ ನಿರ್ದೇಶನ ಕೋರ್ಸ್ ಮುಗಿಸಿದರು.

ಇದನ್ನೂ ಓದಿ: ಚಿತ್ರರಂಗದಲ್ಲಿ ನಾಯಕನಾಗಿ ಹತ್ತು ವರ್ಷ; ವಿಜಯ್ ದೇವರಕೊಂಡ ಭಾವುಕ ಪೋಸ್ಟ್ ವೈರಲ್

ಕೆನಡಾದಲ್ಲಿ ಕಲಿತ ಸಿನಿಮಾ ಪಾಠಗಳು

ಕೆನಡಾದಲ್ಲಿ ಓದುತ್ತಿದ್ದಾಗ ಜೇಸನ್ ಸಂಜಯ್ ಅವರಿಗೆ ಸಾಕಷ್ಟು ಅನುಭವ ಸಿಕ್ಕಿತು. ಅಲ್ಲಿನ ಪ್ರೊಫೆಸರ್‌ಗಳು ಇವರನ್ನು ಜಾಹೀರಾತು ಏಜೆನ್ಸಿಗಳಿಗೆ ಕಳುಹಿಸುತ್ತಿದ್ದರು. ಅಲ್ಲಿ ಸ್ಟಾರ್ಟಪ್ ಕಂಪನಿಗಳಿಗೆ ಆಡ್ ಶೂಟ್ ಮಾಡುವ ಮೂಲಕ ಜೇಸನ್ ಆತ್ಮವಿಶ್ವಾಸ ಗಳಿಸಿಕೊಂಡರು. ಇದರ ಜೊತೆಗೆ ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಾಲಂಟಿಯರ್ ಆಗಿ ಕೆಲಸ ಮಾಡಿದ್ದರು. ಅಲ್ಲಿ ಜಗತ್ತಿನ ಬೇರೆ ಬೇರೆ ಭಾಷೆಯ ಸಿನಿಮಾಗಳನ್ನು ನೋಡುವ ಸುವರ್ಣ ಅವಕಾಶ ಸಿಕ್ಕಿತು. ಇದೇ ಸಮಯದಲ್ಲಿ ಅವರು ಮಲಯಾಳಂ ನಟ ನಿವಿನ್ ಪೌಲಿ ಅವರನ್ನು ಭೇಟಿಯಾಗಿದ್ದನ್ನು ನೆನಪಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ