AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಿತ್ರರಂಗದ ಬಗ್ಗೆ ಕರುಣೆ ತೋರಿಸಿ, ಅದನ್ನು ಕೊಲ್ಲಬೇಡಿ’; ರಾಜ್ಯಸಭೆಯಲ್ಲಿ ಬೇಡಿಕೊಂಡ ಜಯಾ ಬಚ್ಚನ್

ರಾಜ್ಯಸಭೆಯಲ್ಲಿ ಮಾತನಾಡಿದ ಜಯಾ ಬಚ್ಚನ್ ಅವರು ಕೇಂದ್ರ ಬಜೆಟ್ 2025ರಲ್ಲಿ ಚಿತ್ರರಂಗವನ್ನು ನಿರ್ಲಕ್ಷಿಸಲಾಗಿದೆ ಎಂದು ಆಕ್ಷೇಪಿಸಿದ್ದಾರೆ. ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳ ಮುಚ್ಚುವಿಕೆ ಮತ್ತು ಚಲನಚಿತ್ರ ವೀಕ್ಷಣೆಯ ವೆಚ್ಚ ಹೆಚ್ಚಳದ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಭಾರತೀಯ ಚಿತ್ರರಂಗದ ಪರವಾಗಿ ಸರ್ಕಾರದಿಂದ ಹೆಚ್ಚಿನ ಬೆಂಬಲವನ್ನು ಅವರು ಒತ್ತಾಯಿಸಿದ್ದಾರೆ.

‘ಚಿತ್ರರಂಗದ ಬಗ್ಗೆ ಕರುಣೆ ತೋರಿಸಿ, ಅದನ್ನು ಕೊಲ್ಲಬೇಡಿ’; ರಾಜ್ಯಸಭೆಯಲ್ಲಿ ಬೇಡಿಕೊಂಡ ಜಯಾ ಬಚ್ಚನ್
ಜಯಾ ಬಚ್ಚನ್
ರಾಜೇಶ್ ದುಗ್ಗುಮನೆ
|

Updated on: Feb 12, 2025 | 8:54 AM

Share

ನಟಿ ಜಯಾ ಬಚ್ಚನ್ ಚಿತ್ರರಂಗದ ಜೊತೆ ನಂಟು ಹೊಂದಿದ್ದವರು. ಈಗ ಅವರು ರಾಜಕಾರಣಿಯಲ್ಲಿ ಬ್ಯುಸಿ ಇದ್ದಾರೆ. ಸಮಾಜಾವಾದಿ ಪಕ್ಷದಲ್ಲಿ ಅವರು ಗುರುತಿಸಿಕೊಂಡಿದ್ದಾರೆ. ಈಗ ಅವರು ರಾಜ್ಯ ಸಭೆಯಲ್ಲಿ ಮಾತನಾಡಿದ್ದು, ಚಿತ್ರರಂಗದ ಪರವಾಗಿ ಧ್ವನಿ ಎತ್ತಿದ್ದಾರೆ. ಇತ್ತಿಚೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ ಬಜೆಟ್ ಬಗ್ಗೆ ಮಾತನಾಡಿದ್ದಾರೆ. ಇದರಲ್ಲಿ ಚಿತ್ರರಂಗವನ್ನು ನಿರ್ಲಕ್ಷಿಸಲಾಗಿದೆ ಎಂದು ಹೇಳಿದ್ದಾರೆ.

ಸರ್ಕಾರ ಚಿತ್ರರಂಗವನ್ನು ನಿರ್ಲಕ್ಷಿಸುತ್ತಿದೆ ಎಂದು ಜಯಾ ಬಚ್ಚನ್ ಹೇಳಿದ್ದಾರೆ. ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳನ್ನು ಮುಚ್ಚಲಾಗುತ್ತಿದೆ ಎಂದು ಅವರು ವಿಷಾದ ಹೊರಹಾಕಿದರು. ‘ಚಿತ್ರರಂಗವನ್ನು ನೀವು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದೀರಿ ಮತ್ತು ಇತರ ಸರ್ಕಾರಗಳು ಸಹ ಅದೇ ಕೆಲಸವನ್ನು ಮಾಡುತ್ತಿವೆ. ನೀವು ಈಗ ಇದನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗಿದ್ದೀರಿ. ನೀವು ಸಿನಿಮಾ ರಂಗವನ್ನು ನಿಮ್ಮ ಸ್ವಂತ ಉದ್ದೇಶಕ್ಕಾಗಿ ಮಾತ್ರ ಬಳಸುತ್ತಿದ್ದೀರಿ’ ಎಂದು ಜಯಾ ಬಚ್ಚನ್ ಹೇಳಿದ್ದಾರೆ.

‘ಸಿಂಗಲ್ ಸ್ಕ್ರೀನ್ ಥಿಯೇಟರ್​ಗಳು ಮುಚ್ಚುತ್ತಿವೆ. ಜನರು ಸಿನಿಮಾ ನೋಡಲು ಹೋಗುತ್ತಿಲ್ಲ ಏಕೆಂದರೆ ಅದು ತುಂಬಾನೇ ದುಬಾರಿ ಆಗಿದೆ. ಬಹುಶಃ ನೀವು ಈ ಉದ್ಯಮವನ್ನು ಸಂಪೂರ್ಣವಾಗಿ ನಾಶಮಾಡಲು ಬಯಸುತ್ತಿದ್ದೀರಿ. ಇಡೀ ಜಗತ್ತನ್ನು ಭಾರತಕ್ಕೆ ಸಂಪರ್ಕಿಸುವ ಏಕೈಕ ಉದ್ಯಮ ಇದಾಗಿದೆ’ ಜಯಾ ಬಚ್ಚನ್ ಹೇಳಿದರು.

‘ನಾನು ನನ್ನ ಚಿತ್ರರಂಗದ ಪರವಾಗಿ ಮಾತನಾಡುತ್ತಿದ್ದೇನೆ. ಈ ಉದ್ಯಮದ ಪರವಾಗಿ ಈ ಸದನಕ್ಕೆ ಮನವಿ ಮಾಡುತ್ತಿದ್ದೇನೆ, ದಯವಿಟ್ಟು ಅವರನ್ನು ಬಿಟ್ಟುಬಿಡಿ. ದಯವಿಟ್ಟು ಅವರ ಮೇಲೆ ಸ್ವಲ್ಪ ಕರುಣೆ ತೋರಿ. ನೀವು ಈ ಉದ್ಯಮವನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದೀರಿ. ದಯವಿಟ್ಟು ಅದನ್ನು ಮಾಡಬೇಡಿ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾಕುಂಭದ ಕಾಲ್ತುಳಿತದಲ್ಲಿ ಸತ್ತವರ ಶವವನ್ನು ನದಿಗೆ ಎಸೆಯಲಾಗಿದೆ; ಜಯಾ ಬಚ್ಚನ್ ಆರೋಪ

ಜಯಾ ಬಚ್ಚನ್ ಅವರು ಇತ್ತೀಚೆಗೆ ಸಿನಿಮಾ ಮಾಡೋದು ಕಡಿಮೆ ಆಗಿದೆ. ಅವರು ‘ದಿಲ್ ಕಾ ದರ್ವಾಜಾ ಖೋಲ್​ ನ ಡಾರ್ಲಿಂಗ್’ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿದ್ಧಾಂತ್ ಚತುರ್ವೇದಿ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು