ಮಾಜಿ ಪತ್ನಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ಜಯಂ ರವಿ

ತಮಿಳಿನ ಜನಪ್ರಿಯ ನಟ ಜಯಂ ರವಿಯ ಖಾಸಗಿ ಜೀವನ ಈಗ ಸುದ್ದಿಗೆ ಗ್ರಾಸವಾಗಿದೆ. ಮಾಜಿ ಪತ್ನಿ ಆರತಿ ವಿರುದ್ಧ ಜಯಂ ರವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಪತ್ನಿ ತಮ್ಮನ್ನು ತಮ್ಮ ಮನೆಯಿಂದಲೇ ಹೊರಗೆ ಹಾಕಿದ್ದಾರೆ ಎಂದು ಜಯಂ ರವಿ ಆರೋಪಿಸಿದ್ದಾರೆ.

ಮಾಜಿ ಪತ್ನಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ಜಯಂ ರವಿ
Follow us
|

Updated on: Sep 25, 2024 | 12:19 PM

ತಮಿಳು ನಟ ಜಯಂ ರವಿ ಖಾಸಗಿ ಜೀವನ ಈಗ ಸುದ್ದಿಗೆ ಗ್ರಾಸವಾಗಿದೆ. ಕೆಲವು ದಿನಗಳ ಹಿಂದಷ್ಟೆ ನಟ ಜಯಂ ರವಿ, ತಾವು ತಮ್ಮ ಪತ್ನಿ ಆರತಿ ದೂರಾಗುತ್ತಿರುವ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು. ಆದರೆ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಜಯಂ ರವಿ ಪತ್ನಿ ಆರತಿ, ನನ್ನ ಒಪ್ಪಿಗೆ ಇಲ್ಲದೆ ಜಯಂ ರವಿ ವಿಚ್ಛೇದನ ಪ್ರಕಟಿಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ ಅದಾದ ಬಳಿಕ ಜಯಂ ರವಿ ಹಾಗೂ ಆರತಿ ನಡುವೆ ಕಾನೂನು ಹೋರಾಟ ಪ್ರಾರಂಭವಾಗಿದೆ.

ಜಯಂ ರವಿಯ ಇನ್​ಸ್ಟಾಗ್ರಾಂ ಖಾತೆಯನ್ನು ಆರತಿ ‘ಹೈಜಾಕ್’ ಮಾಡಿದ್ದರು. ಈ ವಿಷಯವನ್ನು ಹೇಳಿಕೊಂಡಿದ್ದ ಜಯಂ ರವಿ ಬಳಿಕ ತಮ್ಮ ಇನ್​ಸ್ಟಾಗ್ರಾಂ ಖಾತೆಯನ್ನು ತಮ್ಮ ಸುಪರ್ಧಿಗೆ ಪಡೆದು ಮಾಜಿ ಪತ್ನಿಯ ಚಿತ್ರಗಳನ್ನು ಡಿಲೀಟ್ ಮಾಡಿದರು. ಆ ಬಳಿಕ ನೀಡಿದ್ದ ಹೇಳಿಕೆಯಲ್ಲಿ ತಮ್ಮ ಇಬ್ಬರು ಮಕ್ಕಳನ್ನು ತಮ್ಮ ವಶಕ್ಕೆ ಪಡೆಯಲು ಕಾನೂನು ಹೋರಾಟ ನಡೆಸುವುದಾಗಿ ಹೇಳಿದ್ದರು. ಎಷ್ಟೇ ವರ್ಷಗಳಾದರೂ ಸಹ ನಾನು ಮಕ್ಕಳಿಗಾಗಿ ಹೋರಾಟ ಮಾಡುವೆ ಎಂದಿದ್ದರು.

ಇದೀಗ ಜಯಂ ರವಿ ತಮ್ಮ ಮಾಜಿ ಪತ್ನಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ. ಆರತಿ, ಜಯಂ ರವಿ ಅವರನ್ನು ಅವರದ್ದೇ ಮನೆಯಿಂದ ಹೊರಗೆ ಹಾಕಿದ್ದು, ಮನೆಗೆ ಪ್ರವೇಶ ಮಾಡಲು ಅವಕಾಶ ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿ ಅಡ್ಯಾರ್ ಪೊಲೀಸ್ ಠಾಣೆಯಲ್ಲಿ ಜಯಂ ರವಿ ದೂರು ದಾಖಲಿಸಿದ್ದಾರೆ. ಚೆನ್ನೈನ ಇಸಿಆರ್ ರಸ್ತೆಯಲ್ಲಿ ಜಯಂ ರವಿಯ ಮನೆಯಿದ್ದು ಮನೆ ಹಾಗೂ ಅಲ್ಲಿರುವ ತಮ್ಮ ವಸ್ತುಗಳನ್ನು ತಮ್ಮ ವಶಕ್ಕೆ ಪಡೆಯಲು ಅವರು ಪೊಲೀಸರ ನೆರವು ಕೋರಿದ್ದಾರೆ.

ಇದನ್ನೂ ಓದಿ:‘ನನ್ನ ಗಮನಕ್ಕೆ ತರದೇ ವಿಚ್ಛೇದನ ಘೋಷಿಸಿದ್ದಾರೆ’; ಜಯಂ ರವಿ ವಿರುದ್ಧ ಪತ್ನಿಯ ಆರೋಪ

ಜಯಂ ರವಿಗೆ ಗಾಯಕಿಯೊಬ್ಬರೊಟ್ಟಿಗೆ ಸಂಬಂಧ ಇದ್ದು ಅದೇ ಕಾರಣಕ್ಕೆ ಈ ದಂಪತಿಗಳ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎನ್ನಲಾಗುತ್ತಿದೆ. ಜಯಂ ರವಿ ಮತ್ತು ಆರತಿ ಪ್ರೀತಿಸಿ ಮದುವೆಯಾಗಿದ್ದರು. ಹಲವು ವರ್ಷ ಜೊತೆಗಿದ್ದ ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಈಗ ಈ ಜೋಡಿ ವಿಚ್ಛೇದನಕ್ಕೆ ಮುಂದಾಗಿದೆ. ಇಬ್ಬರ ವಿಚ್ಛೇದನ ಈಗ ಪೊಲೀಸ್ ಠಾಣೆ ಮೆಟ್ಟಿಲು ಸಹ ಏರಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಕ್ಷಣಾರ್ಧದಲ್ಲೇ ಜಲ ಸಮಾಧಿಯಾದ ಎರಡಂತಸ್ತಿನ ಮನೆ
ಕ್ಷಣಾರ್ಧದಲ್ಲೇ ಜಲ ಸಮಾಧಿಯಾದ ಎರಡಂತಸ್ತಿನ ಮನೆ
ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ, ಸ್ಥಳೀಯರಿಗೆ ಆತಂಕ
ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ, ಸ್ಥಳೀಯರಿಗೆ ಆತಂಕ
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್