AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಜಯಂ ರವಿ, ನಾಯಕಿ ಯಾರು ಗೊತ್ತೆ?

Pan India: ಪೊನ್ನಿಯಿನ್ ಸೆಲ್ವನ್ ಮೂಲಕ ಪ್ಯಾನ್ ಇಂಡಿಯಾ ನಟ ಎನಿಸಿಕೊಂಡಿರುವ ಜಯಂ ರವಿ ಇದೀಗ ಮತ್ತೊಂದು ಪ್ಯಾನ್ ಇಂಡಿಯಾ ಸಾಹಸಕ್ಕೆ ಕೈ ಹಾಕಿದ್ದಾರೆ. ಅದಕ್ಕೆ ತಕ್ಕುದಾದ ನಟಿಯನ್ನೇ ನಾಯಕಿಯನ್ನಾಗಿ ಆರಿಸಿಕೊಂಡಿದ್ದಾರೆ.

ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಜಯಂ ರವಿ, ನಾಯಕಿ ಯಾರು ಗೊತ್ತೆ?
ಜಯಂ ರವಿ-ನಯನತಾರಾ
Follow us
ಮಂಜುನಾಥ ಸಿ.
|

Updated on: Jun 10, 2023 | 8:25 AM

ಒಂದು ಪ್ಯಾನ್ ಇಂಡಿಯಾ (Pan India) ಸಿನಿಮಾ ಮಾಡಿದ ಯಶಸ್ಸು ಕಂಡವರು ಮತ್ತೆ ಪ್ಯಾನ್ ಇಂಡಿಯಾ ಸಿನಿಮಾವನ್ನೇ ಮಾಡಲು ಯತ್ನಿಸುತ್ತಾರೆ. ಈ ಹಿಂದಿನ ಸಿನಿಮಾಕ್ಕಿಂತಲೂ ದೊಡ್ಡದಾಗಿ ಸಿನಿಮಾ ಮಾಡಲು ಪ್ರಯತ್ನಿಸುತ್ತಾರೆ. ತಮಿಳಿನ ನಟ ಜಯಂ ರವಿ (Jayam Ravi) ತಮಿಳು ಚಿತ್ರರಂಗದಲ್ಲಿ ಸರಾಸರಿ ನಾಯಕ ನಟರಾಗಿದ್ದರು. ವಿಜಯ್ (Vijay), ಸೂರ್ಯ ರಂತೆ ದೊಡ್ಡ ಸಿನಿಮಾಗಳು, ದೊಡ್ಡ ಹಿಟ್​ಗಳಿಲ್ಲದೇ ಇದ್ದರೂ ಆವರೇಜ್ ಸಿನಿಮಾ ಮಾಡಿ ಯಶಸ್ಸು ಗಳಿಸುತ್ತಾ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿದ್ದರು. ಆದರೆ ಅವರ ಕಳೆದ ಸಿನಿಮಾ ಪೊನ್ನಿಯಿನ್ ಸೆಲ್ವನ್ ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ದೊಡ್ಡ ಹಿಟ್ ಆದ ಬಳಿಕ ಇದೀಗ ಮತ್ತೆ ಪ್ಯಾನ್ ಇಂಡಿಯಾ ಪ್ರಾಜೆಕ್ಟ್​ಗೆ ಕೈ ಹಾಕಿದ್ದಾರೆ.

ಪೊನ್ನಿಯಿನ್ ಸೆಲ್ವನ್ ಸರಣಿ ಸಿನಿಮಾದ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿರುವ ತಮಿಳು ನಟ ಜಯಂ ರವಿ ತಾರಾಮೌಲ್ಯದ ಜೊತೆಗೆ ಬೇಡಿಕೆಯೂ ಹೆಚ್ಚಿಸಿಕೊಂಡಿದ್ದಾರೆ. ಇದೀಗ ಮತ್ತೊಂದು ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಗೆ ಪೊನ್ನಿಯಿನ್ ಸೆಲ್ವನ್ ಸ್ಟಾರ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕನ್ನಡ ಹೊರತುಪಡಿಸಿ ತಮಿಳು, ಹಿಂದಿ, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ‘ಇರೈವನ್’ಎಂಬ ಟೈಟಲ್ ನಡಿ ಬರ್ತಿರುವ ಹೊಸ ಸಿನಿಮಾದಲ್ಲಿ ಜಯಂರವಿ ನಾಯಕನಾಗಿ ಲೇಡಿ ಸೂಪರ್ ಸ್ಟಾರ್ ನಯನ್ ತಾರಾ ನಾಯಕಿಯಾಗಿ ನಟಿಸುತ್ತಿದ್ದಾರೆ.

ಈ ಮೆಗಾ ಪ್ರಾಜೆಕ್ಟ್ ಗೆ ಐ.ಅಹಮದ್ ಆಕ್ಷನ್ ಕಟ್ ಹೇಳಿದ್ದಾರೆ. ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೊನೆ ಹಂತದಲ್ಲಿರುವ ಇರೈವನ್ ಸಿನಿಮಾದ ರಿಲೀಸ್ ಡೇಟ್ ಕೂಡ ಅನೌನ್ಸ್ ಆಗಿದೆ. ಮುಂದಿನ ವರ್ಷದ ಆಗಸ್ಟ್ 25ಕ್ಕೆ ವರ್ಲ್ಡ್ ವೈಡ್ ಈ ಚಿತ್ರ ತೆರೆಕಾಣಲಿದೆ. ಆಕ್ಷನ್ ಥ್ರಿಲ್ಲರ್ ಇರೈವನ್ ನಲ್ಲಿ ರಾಹುಲ್ ಬೋಸೆ, ಅಶಿಶ್ ವಿದ್ಯಾರ್ಥಿ, ನರೇನ್, ವಿಜಯಲಕ್ಷ್ಮೀ, ಚಾರ್ಲಿ, ಬಗ್ಸ್ ಸೇರಿದಂತೆ ಇತರ ತಾರಾಬಳಗವಿದೆ.

ಯುವನ್ ಶಂಕರ್ ಸಂಗೀತ, ಮಣಿಕಂದನ್ ಬಾಲಾಜಿ ಸಂಕಲನಿರುವ ಸಿನಿಮಾಗೆ ಸುಧನ್ ಸುಂದರಂ ಮತ್ತು ಜಯರಾಮ್.ಜಿ ನಿರ್ಮಾಣ ಮಾಡಿದ್ದಾರೆ. ಚೆನ್ನೈ ಹಾಗೂ ಪುದುಚರಿಯಲ್ಲಿ ಶೂಟಿಂಗ್ ನಡೆಸಲಾಗಿದೆ. ಇರೈವನ್ ಸಿನಿ ಮೂಲಕ ಸಿನಿಮಾಪ್ರೇಮಿಗಳಿಗೆ ಒಂದೊಳ್ಳೆ ಕಂಟೆಂಟ್ ಜೊತೆಗೆ ಎಂಟರ್ ಟೈನ್ಮೆಂಟ್ ನೀಡೋದಾಗಿ ಚಿತ್ರತಂಡ ತಿಳಿಸಿದೆ.

2003 ರಲ್ಲಿ ಬಿಡುಗಡೆ ಆದ ಜಯಂ ಸಿನಿಮಾ ಮೂಲಕ ನಾಯಕ ನಟನಾದ ರವಿ, ಎರಡು ದಶಕಗಳಿಗಿಂತಲೂ ಹೆಚ್ಚು ಕಾಲದಿಂದ ತಮಿಳು ಚಿತ್ರರಂಗದಲ್ಲಿದ್ದಾರೆ. ತೀರಾ ಆರಕ್ಕೇರದೆ ಆದರೆ ಮೂರಕ್ಕೆ ಇಳಿಯದೆ ಕೆಲವು ಅತ್ಯುತ್ತಮ ಸಿನಿಮಾಗಳನ್ನು ಜಯಂ ರವಿ ನೀಡಿದ್ದಾರೆ. ವೃತ್ತಿ ಬದುಕಿನ ಆರಂಭದಲ್ಲಿ ಸೂಪರ್ ಹಿಟ್ ತೆಲುಗು ಸಿನಿಮಾಗಳನ್ನು ತಮಿಳಿಗೆ ರೀಮೇಕ್ ಮಾಡಿ ರೀಮೇಕ್ ಸ್ಟಾರ್ ಎನಿಸಿಕೊಂಡಿದ್ದ ಜಯಂ ರವಿ ಆ ನಂತರ ತಮ್ಮದೇ ಆದ ಶೈಲಿಯ ಸಿನಿಮಾಗಳನ್ನು ಮಾಡುತ್ತಾ ನೆಲೆ ಕಂಡುಕೊಂಡರು.

ಪೊನ್ನಿಯಿನ್ ಸೆಲ್ವನ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುವ ಮೂಲಕ ರಾಷ್ಟ್ರಮಟ್ಟದಲ್ಲಿ ಒಳ್ಳೆಯ ಖ್ಯಾತಿ ಗಳಿಸಿಕೊಂಡಿರುವ ಜಯಂ ರವಿ ಇದೀಗ ತಮ್ಮ ಹೊಸ ಸಿನಿಮಾವನ್ನು ಸಹ ಪ್ಯಾನ್ ಇಂಡಿಯಾ ಲೆವೆಲ್​ಗೆ ಕೊಂಡೊಯ್ಯಲು ಸಜ್ಜಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ