ಸೋಶಿಯಲ್ ಮೀಡಿಯಾ ಖಾತೆಗಳನ್ನು ಎನ್ಜಿಒಗೆ ಹಸ್ತಾಂತರ ಮಾಡಿದ ಜಾನ್ ಅಬ್ರಹಾಂ; ಕಾರಣವೇನು?
ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಅನೇಕರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ. ಕೆಲವು ಕಡೆಗಳಲ್ಲಿ ವೈದ್ಯಕೀಯ ಆಮ್ಲಜನಕ ಸಿಲಿಂಡರ್ಗಳ ಕೊರತೆ ಆಗುತ್ತಿದೆ
ಕೊರೊನಾ ಎರಡನೇ ಅಲೆಗೆ ಭಾರತ ತತ್ತರಿಸಿದೆ. ಕೊರೊನಾ ವಾರಿಯರ್ಗಳು ಹಗಲು ರಾತ್ರಿ ಎನ್ನದೆ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದರ ಜತೆಗೆ ಸೆಲೆಬ್ರಿಟಿಗಳು ತಮ್ಮ ಕೈಲಾದ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಈಗ ಬಾಲಿವುಡ್ ನಟ ಜಾನ್ ಅಬ್ರಹಾಂ ಕೊರೊನಾ ವಿರುದ್ಧ ಹೋರಾಡಲು ತಮ್ಮ ಸಾಮಾಜಿಕ ಜಾಲತಾಣ ಖಾತೆಯನ್ನೇ ಬಿಟ್ಟುಕೊಟ್ಟಿದ್ದಾರೆ.
ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಅನೇಕರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ. ಕೆಲವು ಕಡೆಗಳಲ್ಲಿ ವೈದ್ಯಕೀಯ ಆಮ್ಲಜನಕ ಸಿಲಿಂಡರ್ಗಳ ಕೊರತೆ ಆಗುತ್ತಿದೆ. ಹೀಗಾಗಿ, ಸಾಕಷ್ಟು ಜನರು ಸಾಮಾಜಿಕ ಜಾಲತಾಣದಲ್ಲಿ ಸಹಾಯಕ್ಕಾಗಿ ಪೋಸ್ಟ್ ಹಾಕುತ್ತಿದ್ದಾರೆ. ಹೀಗಾಗಿ, ಹೆಚ್ಚು ಜನರಿಗೆ ತಲುಪಲು ಸಹಕಾರಿಯಾಗಬಹುದು ಎನ್ನುವ ಕಾರಣಕ್ಕೆ ಎನ್ಜಿಒ ಒಂದಕ್ಕೆ ತಮ್ಮ ಸೋಶಿಯಲ್ ಮೀಡಿಯಾವನ್ನು ಹ್ಯಾಂಡೋವರ್ ಮಾಡಿದ್ದಾರೆ ಜಾನ್ ಅಬ್ರಹಾಂ. ಟ್ವಿಟರ್ನಲ್ಲಿ 32 ಲಕ್ಷ ಹಾಗೂ ಇನ್ಸ್ಟಾಗ್ರಾಂನಲ್ಲಿ 88 ಲಕ್ಷ ಹಿಂಬಾಲಕರನ್ನು ಅವರು ಹೊಂದಿದ್ದಾರೆ.
ಶುಕ್ರವಾರ ಅವರು ಟ್ವಿಟರ್ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ದೇಶದಲ್ಲಿ ನಾವು ತುಂಬಾ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಆಮ್ಲಜನಕ, ಐಸಿಯು, ಹಾಸಿಗೆ, ಲಸಿಕೆ ಹಾಗೂ ಆಹಾರ ಸಿಗದ ಒದ್ದಾಡುವವರ ಸಂಖ್ಯೆ ಪ್ರತೀ ಕ್ಷಣವೂ ಹಚ್ಚುತ್ತಲೇ ಇದೆ. ಇಂಥವರಿಗೆ ಸಹಾಯ ಮಾಡಲು ನಾನು ಪ್ರಯತ್ನಿಸುತ್ತಿದ್ದೇನೆ. ಇಂದಿನಿಂದ ನನ್ನ ಸೋಶಿಯಲ್ ಮೀಡಿಯಾ ಖಾತೆಯನ್ನು ಎನ್ಜಿಒಗೆ ನೀಡುತ್ತಿದ್ದೇನೆ. ನನ್ನ ಟ್ವಿಟರ್ ಖಾತೆಯಿಂದ ಪೋಸ್ಟ್ ಮಾಡುವ ಎಲ್ಲಾ ವಿಚಾರಗಳು ಅವರಿಗೆ ಅಗತ್ಯವಿರುವ ಜತೆ ಸಂಪರ್ಕ ಸಾಧಿಸಲು ಸಹಕಾರಿಯಾಗಿರುತ್ತದೆ ಎಂದು ಬರೆದುಕೊಂಡಿದ್ದಾರೆ.
Anything & everything to save lives and win this battle TOGETHER#CovidIndiaInfo #CovidResources #CovidSOS #CovidHelp #Covid19IndiaHelp #COVID19 pic.twitter.com/mJhABuAeAy
— John Abraham (@TheJohnAbraham) April 30, 2021
ನಟ ಸೋನು ಸೂದ್ ಮೊದಲ ಅಲೆಯಿಂದ ಕೊರೊನಾ ವಿರುದ್ಧ ಹೋರಾಟಕ್ಕೆ ನಿಂತಿದ್ದಾರೆ. ಸಾವಿರಾರು ಮಂದಿಗೆ ಅವರು ಸಹಾಯ ಮಾಡಿದ್ದಾರೆ. ನಟ ಅಕ್ಷಯ್ ಕುಮಾರ್ ಕೂಡ ಕೊರೊನಾ ವಿರುದ್ಧ ಹೋರಾಡಲು ಕೈ ಜೋಡಿಸಿದ್ದಾರೆ. ಅವರು ಕೊರೊನಾ ವಿರುದ್ಧ ಹೋರಾಡಲು ಈಗಾಗಲೇ ಕೋಟ್ಯಾಂತರ ರೂಪಾಯಿ ನೀಡಿದ್ದಾರೆ.
ಇದನ್ನೂ ಓದಿ: Actor Arjun Gowda: ಜನರ ಕಷ್ಟ ನೋಡಲಾಗದೇ ಆ್ಯಂಬುಲೆನ್ಸ್ ಚಾಲಕನಾದ ಕನ್ನಡ ಸಿನಿಮಾ ನಟ ಅರ್ಜುನ್ ಗೌಡ
ರಿಯಲ್ ಹೀರೋ ಆದ ಜಗ್ಗೇಶ್; 20 ದಿನಗಳಿಂದ ಕೊರೊನಾ ರೋಗಿಗಳ ಸೇವೆಯಲ್ಲಿ ನಟ