AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಜ್ಯೂ.ಎನ್​ಟಿಆರ್ ಜತೆ ಮತ್ತೆ ತೆರೆ ಹಂಚಿಕೊಳ್ಳಲಿದ್ದಾರಾ ಆಲಿಯಾ ಭಟ್?

Jr NTR | Koratala Siva: ಜ್ಯೂ.ಎನ್​ಟಿಆರ್ ಹಾಗೂ ಕೊರಟಾಲ ಶಿವ ಕಾಂಬಿನೇಷನ್​ನಲ್ಲಿ ಹೊಸ ಚಿತ್ರ ಸೆಟ್ಟೇರಲಿದೆ. ಇದಕ್ಕೆ ಆಲಿಯಾ ಭಟ್ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಿಂದ ಜೋರಾಗಿ ಕೇಳಿಬಂದಿದೆ.

Alia Bhatt: ಜ್ಯೂ.ಎನ್​ಟಿಆರ್ ಜತೆ ಮತ್ತೆ ತೆರೆ ಹಂಚಿಕೊಳ್ಳಲಿದ್ದಾರಾ ಆಲಿಯಾ ಭಟ್?
ಆಲಿಯಾ ಭಟ್, ಜ್ಯೂ.ಎನ್​ಟಿಆರ್
TV9 Web
| Edited By: |

Updated on:Feb 04, 2022 | 2:29 PM

Share

ಜ್ಯೂ.ಎನ್​ಟಿಆರ್ ‘ಆರ್​​ಆರ್​ಆರ್​’ (RRR) ಚಿತ್ರದಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಅವರ ಬೇಡಿಕೆಯೂ ಹೆಚ್ಚಿದೆ. ಅಲ್ಲದೇ ಅವರ ಮುಂದಿನ ಚಿತ್ರಗಳ ಕುರಿತು ನಿರೀಕ್ಷೆಯೂ ಜೋರಿದೆ. ಖ್ಯಾತ ನಿರ್ದೇಶಕ ಕೊರಟಾಲ ಶಿವ (Koratala Siva) ಅವರೊಂದಿಗೆ ಜ್ಯೂ.ಎನ್​ಟಿಆರ್ (Jr NTR) ಮುಂದಿನ ಚಿತ್ರಕ್ಕೆ ಸೈನ್ ಮಾಡಿದ್ದು ಬಹುತೇಕ ಅಂತಿಮವಾಗಿದೆ. ಅಲ್ಲದೇ ಆ ಚಿತ್ರಕ್ಕೆ ಸದ್ಯ ‘ಎನ್​ಟಿಆರ್ 30’ ಅಥವಾ ‘ಎನ್​ಟಿಆರ್- ಕೊರಟಾಲ 2’ ಎಂದೂ ಕರೆಯಲಾಗುತ್ತಿದೆ. ಸೂಪರ್ ಹಿಟ್ ಚಿತ್ರ ‘ಜನತಾ ಗ್ಯಾರೇಜ್’ ನಂತರ ಈ ಜೋಡಿ ಮತ್ತೆ ಒಂದಾಗುತ್ತರಿಉವ ಚಿತ್ರ ಇದಾಗಿದ್ದರಿಂದ, ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸದ್ಯ ಕೇಳಿಬರುತ್ತಿರುವ ಗುಸುಗುಸುಗಳ ಪ್ರಕಾರ ಈ ಚಿತ್ರದಲ್ಲಿ ಜ್ಯೂ.ಎನ್​ಟಿಆರ್ ಜತೆ ಬಾಲಿವುಡ್ ಬೆಡಗಿ ಆಲಿಯಾ ಭಟ್ ಬಣ್ಣಹಚ್ಚಲಿದ್ದಾರಂತೆ!

‘ಆರ್​ಆರ್​​ಆರ್​’ ಚಿತ್ರದಲ್ಲಿ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಜತೆ ಆಲಿಯಾ ಈಗಾಗಲೇ ತೆರೆ ಹಂಚಿಕೊಂಡಿದ್ದಾರೆ. ಮುಂದಿನ ಚಿತ್ರಕ್ಕೆ ಸಿಕ್ಕಾಪಟ್ಟೆ ಸಂಭಾವನೆಯ ಬೇಡಿಕೆಯನ್ನೂ ಆಲಿಯಾ ಮುಂದಿಟ್ಟಿದ್ದಾರೆ ಎಂದು ವರದಿಯಾಗಿದೆ. ಮತ್ತೊಂದು ಅಚ್ಚರಿಯ ವಿಚಾರವೆಂದರೆ ಆಲಿಯಾ ಹೊರತಾಗಿ ಸಮಂತಾ ಕೂಡ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದೂ ಹೇಳಲಾಗಿದೆ.

ಸದ್ಯ ಪ್ರಿ-ಪ್ರೊಡಕ್ಷನ್ ಕೆಲಸಗಳಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ವಿದ್ಯಾರ್ಥಿ ಸಂಘಟನೆಯ ನಾಯಕನ ಪಾತ್ರದಲ್ಲಿ ಜ್ಯೂ.ಎನ್​ಟಿಆರ್ ಕಾಣಿಸಿಕೊಳ್ಳಲಿದ್ದಾರೆ. ಅದಕ್ಕಾಗಿ ಅವರು 6-7 ಕೆಜಿ ತೂಕವನ್ನೂ ಇಳಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಚಿತ್ರವನ್ನು ನಂದಮೂರಿ ಕಲ್ಯಾಣ್ ರಾಮ್ ಮತ್ತು ಸುಧಾಕರ್ ಮಿಕ್ಕಿಲಿನೇನಿ ಜಂಟಿಯಾಗಿ ನಿರ್ಮಾಣ ಮಾಡಲಿದ್ದಾರೆ. ಅನಿರುದ್ಧ್ ರವಿಚಂದ್ರನ್ ಸಂಗೀತ ನೀಡಲಿದ್ದಾರೆ. ಆದರೆ ಚಿತ್ರದಲ್ಲಿ ಆಳಿಯಾ ಕಾಣಿಸಿಕೊಳ್ಳುತ್ತಿರುವ ಕುರಿತು ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಸದ್ಯದಲ್ಲೇ ಚಿತ್ರತಂಡ ಹಾಗೂ ಆಲಿಯಾ ಪ್ರವೇಶದ ಕುರಿತು ಮಾಹಿತಿ ಅಧಿಕೃತವಾಗಿ ಘೋಷಣೆಯಾಗುವ ನಿರೀಕ್ಷೆ ಇದೆ.

ಚಿತ್ರಗಳ ವಿಷಯಕ್ಕೆ ಬಂದರೆ ರಾಜಮೌಳಿ ನಿರ್ದೇಶನದ ‘ಆರ್​​ಆರ್​​ಆರ್​’ ಚಿತ್ರದ ಬಿಡುಗಡೆಗೆ ಆಲಿಯಾ ಹಾಗೂ ಜ್ಯೂ.ಎನ್​ಟಿಆರ್ ಕಾಯುತ್ತಿದ್ದಾರೆ. ವಾಸ್ತವದಲ್ಲಿ ಜನವರಿ 7ರಂದು ತೆರೆಕಾಣಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಚಿತ್ರದ ಬಿಡುಗಡೆ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ:

Rashmika Mandanna: ‘ಈ ಲುಕ್ ಹೇಗಿದೆ?’; ಹೊಸ ಪೋಟೋಗಳನ್ನು ಹಂಚಿಕೊಂಡು ರಶ್ಮಿಕಾ ಪ್ರಶ್ನೆ

Keerthy Suresh: ಕೀರ್ತಿ ಸುರೇಶ್​ಗೆ ಕೊವಿಡ್ ಪಾಸಿಟಿವ್; ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡ ನಟಿ

Published On - 8:45 pm, Tue, 11 January 22

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ