AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ ಎನ್​​ಟಿಆರ್-ನೀಲ್ ಸಿನಿಮಾಕ್ಕೆ ಜೊತೆಯಾದ ಹಾಲಿವುಡ್ ತಂಡ

Jr NTR-Prashant Neel: ಸದ್ದಿಲ್ಲದೇ ಬೃಹತ್ ಆದ, ಭಾರಿ ಬಜೆಟ್​​ನ ಹಾಗೂ ಅಂತರಾಷ್ಟ್ರೀಯ ಗುಣಮಟ್ಟದ ಸಿನಿಮಾವನ್ನು ತಯಾರು ಮಾಡುತ್ತಿದೆ ಜೂ ಎನ್​​ಟಿಆರ್-ನೀಲ್ ಚಿತ್ರತಂಡ. ಪ್ರಶಾಂತ್ ನೀಲ್ ತಮ್ಮ ಈ ವರೆಗಿನ ಸಿನಿಮಾಗಳನ್ನು ಸೆಟ್​​ಗಳಲ್ಲಿಯೇ ನಿರ್ಮಿಸಿರುವುದು ಹೆಚ್ಚು. ಆದರೆ ಇದೇ ಮೊದಲ ಬಾರಿಗೆ ನೀಲ್ ಅವರು ಹೊರದೇಶಕ್ಕೆ ಸಹ ಹೋಗಿದ್ದು, ಅಲ್ಲಿ ಆಕ್ಷನ್ ದೃಶ್ಯಗಳ ಚಿತ್ರೀಕರಣ ಮಾಡಿದ್ದಾರೆ. ಮಾತ್ರವಲ್ಲದೆ ಸಿನಿಮಾಕ್ಕೆ ಖ್ಯಾತ ಹಾಲಿವುಡ್ ತಂಡದ ನೆರವನ್ನು ಸಹ ಪಡೆದಿದ್ದಾರೆ.

ಜೂ ಎನ್​​ಟಿಆರ್-ನೀಲ್ ಸಿನಿಮಾಕ್ಕೆ ಜೊತೆಯಾದ ಹಾಲಿವುಡ್ ತಂಡ
Dragon
ಮಂಜುನಾಥ ಸಿ.
|

Updated on:Apr 01, 2026 | 5:23 PM

Share

ಜೂ ಎನ್​​ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ (Prashant Neel) ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾ ‘ಡ್ರ್ಯಾಗನ್’, ‘ವಾರಣಾಸಿ’, ‘ಪೆದ್ದಿ’ ಇನ್ನಿತರೆ ಕೆಲ ಸಿನಿಮಾಗಳ ರೀತಿ ದೊಡ್ಡ ಸದ್ದು ಮಾಡುತ್ತಿಲ್ಲ ಆದರೆ ಸದ್ದಿಲ್ಲದೇ ಬೃಹತ್ ಆದ, ಭಾರಿ ಬಜೆಟ್​​ನ ಹಾಗೂ ಅಂತರಾಷ್ಟ್ರೀಯ ಗುಣಮಟ್ಟದ ಸಿನಿಮಾವನ್ನು ತಯಾರು ಮಾಡುತ್ತಿದೆ ಚಿತ್ರತಂಡ. ಪ್ರಶಾಂತ್ ನೀಲ್ ತಮ್ಮ ಈ ವರೆಗಿನ ಸಿನಿಮಾಗಳನ್ನು ಸೆಟ್​​ಗಳಲ್ಲಿಯೇ ನಿರ್ಮಿಸಿರುವುದು ಹೆಚ್ಚು. ಆದರೆ ಇದೇ ಮೊದಲ ಬಾರಿಗೆ ನೀಲ್ ಅವರು ಹೊರದೇಶಕ್ಕೆ ಸಹ ಹೋಗಿದ್ದು, ಅಲ್ಲಿ ಆಕ್ಷನ್ ದೃಶ್ಯಗಳ ಚಿತ್ರೀಕರಣ ಮಾಡಿದ್ದಾರೆ. ಮಾತ್ರವಲ್ಲದೆ ಸಿನಿಮಾಕ್ಕೆ ಖ್ಯಾತ ಹಾಲಿವುಡ್ ತಂಡದ ನೆರವನ್ನು ಸಹ ಪಡೆದಿದ್ದಾರೆ.

ಇತ್ತೀಚೆಗಷ್ಟೆ ಇಡೀ ಚಿತ್ರತಂಡ ಜೋರ್ಡನ್​​ಗೆ ಹೋಗಿದ್ದು ಅಲ್ಲಿ ಅದ್ಧೂರಿ ಆಕ್ಷನ್ ಮತ್ತು ಚೇಸ್ ದೃಶ್ಯಗಳ ಚಿತ್ರೀಕರಣವನ್ನು ಮಾಡಿದೆ. ಈ ವೇಳೆ ಜೋರ್ಡನ್ ಎಸ್​​ಎಫ್​​ಎಕ್ಸ್ ಹೆಸರಿನ ಖ್ಯಾತನಾಮ ತಂಡದ ನೆರವನ್ನು ಚಿತ್ರತಂಡ ಪಡೆದುಕೊಂಡಿದೆ. ಜೋರ್ಡನ್ ಎಸ್​​ಎಫ್​​ಎಕ್ಸ್ ತಂಡವು ಸಿನಿಮಾ ತಂತ್ರಜ್ಞರ ತಂಡವಾಗಿದ್ದು, ವಿಶೇಷವಾಗಿ ಸಿನಿಮಾಗಳ ಆಕ್ಷನ್ ದೃಶ್ಯ, ವಿಎಫ್​​ಎಕ್ಸ್ ಮತ್ತು ಸೌಂಡ್ ಡಿಸೈನ್​​ಗಳಲ್ಲಿ ಪರಿಣಿತಿ ಪಡೆದುಕೊಂಡಿದೆ.

ಆಸ್ಕರ್ ವಿಜೇತ ‘ಡ್ಯೂನ್’, ‘ಜಾನ್ ವಿಕ್’ ಇನ್ನೂ ಹತ್ತು ಹಲವು ಅದ್ಧೂರಿ ಹಾಲಿವುಡ್ ಆಕ್ಷನ್ ಸಿನಿಮಾಗಳಿಗೆ ಜೋರ್ಡನ್ ಎಸ್​​ಎಫ್​​ಎಕ್ಸ್ ತಂಡ ಕೆಲಸ ಮಾಡಿದೆ. ಇದೀಗ ಇದೇ ತಂಡ ಜೂ ಎನ್​​ಟಿಆರ್-ನೀಲ್ ಸಿನಿಮಾಕ್ಕೂ ಕೆಲಸ ಮಾಡಿದೆ. ಪ್ರಶಾಂತ್ ನೀಲ್ ಚಿತ್ರೀಕರಣ ಮಾಡುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದು ಸಾಮಾನ್ಯವಾದ ಸಿನಿಮಾ ಅಲ್ಲ, ಭಾರಿ ದೊಡ್ಡ ಆಕ್ಷನ್ ಸಿನಿಮಾ ಎಂಬುದಕ್ಕೆ ಆ ಚಿತ್ರ ಸಾಕ್ಷಿಯಾಗಿದೆ.

ಇದನ್ನೂ ಓದಿ:ಅಡ್ವಾನ್ಸ್ ಬುಕಿಂಗ್​ನಲ್ಲಿ ‘ಜವಾನ್’ ಚಿತ್ರವನ್ನೂ ಹಿಂದಿಕ್ಕಿದ ‘ಸಲಾರ್’; ಇದು ಪ್ರಶಾಂತ್ ನೀಲ್ ಕಮಾಲ್

ಜೂ ಎನ್​​ಟಿಆರ್ ಹಾಗೂ ನೀಲ್ ಅವರ ಸಿನಿಮಾಕ್ಕೆ ರುಕ್ಮಿಣಿ ವಸಂತ್ ನಾಯಕಿ. ಸಿನಿಮಾನಲ್ಲಿ ಮಲಯಾಳಂನ ಟೊವಿನೊ ಥಾಮಸ್ ಅವರೂ ಸಹ ನಟಿಸಬೇಕಿತ್ತು. ಆದರೆ ಅವರು ಅವಕಾಶ ಒಲ್ಲೆ ಎಂದಿದ್ದು, ಅವರ ಜಾಗಕ್ಕೆ ಯಾವ ನಟ ಆಯ್ಕೆ ಆಗಲಿದ್ದಾರೆ ಎಂಬ ಕುತೂಹಲ ಇದೆ. ಸಿನಿಮಾದ ಚಿತ್ರೀಕರಣ ತುಸು ನಿಧಾನ ಗತಿಯಲ್ಲಿಯೇ ಸಾಗಿದೆ. ಸಿನಿಮಾವನ್ನು ಕರ್ನಾಟಕ, ಹೈದರಾಬಾದ್, ಜೋರ್ಡನ್ ಇನ್ನೂ ಕೆಲವು ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Wed, 1 April 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!