AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರ್ಡ್ ಮುರುಗನ್ ಕಥೆಯಲ್ಲಿ ಜೂನಿಯರ್ ಎನ್‌ಟಿಆರ್; ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ

ಜೂನಿಯರ್ ಎನ್‌ಟಿಆರ್ ಹಾಗೂ ತ್ರಿವಿಕ್ರಮ್ ಶ್ರೀನಿವಾಸ್ ಕಾಂಬಿನೇಷನ್‌ನಲ್ಲಿ ಹೊಸ ಪೌರಾಣಿಕ ಚಿತ್ರ ಘೋಷಣೆಯಾಗಿದೆ. ನಂದಮೂರಿ ಕಲ್ಯಾಣ್ ರಾಮ್ ಅವರ 'ಎನ್‌ಟಿಆರ್ ಆರ್ಟ್ಸ್' ನಿರ್ಮಿಸಲಿರುವ ಈ ಬಹುಕೋಟಿ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನೀಡಲಿದ್ದಾರೆ. ಪೋಸ್ಟರ್ ನೋಡಿದರೆ ಇದು ಮುರುಗನ್ ದೇವರ ಕಥೆ ಇರಬಹುದೆಂಬ ಸುಳಿವು ಸಿಕ್ಕಿದೆ. ಎನ್‌ಟಿಆರ್ ಸದ್ಯ 'ಡ್ರ್ಯಾಗನ್' ಚಿತ್ರದಲ್ಲಿ ಬ್ಯುಸಿ.

ಲಾರ್ಡ್ ಮುರುಗನ್ ಕಥೆಯಲ್ಲಿ ಜೂನಿಯರ್ ಎನ್‌ಟಿಆರ್; ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ
ಜೂ.ಎನ್​​ಟಿಆರ್​
ರಾಜೇಶ್ ದುಗ್ಗುಮನೆ
|

Updated on:Jun 30, 2026 | 6:58 AM

Share

ಮುಖ್ಯಾಂಶಗಳು

  • ಜೂನಿಯರ್ ಎನ್‌ಟಿಆರ್-ತ್ರಿವಿಕ್ರಮ್ ಚಿತ್ರ ಘೋಷಣೆ
  • ಜೂ. ಎನ್‌ಟಿಆರ್ ಪೌರಾಣಿಕ ಚಿತ್ರದ ಕಥೆ ಏನು?
  • ಅನಿರುದ್ಧ್ ಸಂಗೀತ, ಎನ್‌ಟಿಆರ್-ತ್ರಿವಿಕ್ರಮ್ ಎರಡನೇ ಸಿನಿಮಾ

ತೆಲುಗು ನಟ ನಟ ಜೂನಿಯರ್ ಎನ್‌ಟಿಆರ್ (JR NTR) ಸದ್ಯ ‘ಡ್ರ್ಯಾಗನ್’ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಈ ಸಿನಿಮಾ ಕೆಲಸಗಳು ನಡೆಯುವಾಗಲೇ ಜೂನಿಯರ್ ಎನ್​​ಟಿಆರ್ ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಸ್ಟಾರ್ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಒಂದು ಭಾರಿ ಬಜೆಟ್‌ನ ಪೌರಾಣಿಕ ಸಿನಿಮಾ ಮೂಡಿಬರಲಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬಿದ್ದಿದೆ.

ಈ ಚಿತ್ರವನ್ನು ನಂದಮೂರಿ ಕಲ್ಯಾಣ್ ರಾಮ್ ಅವರ ‘ಎನ್‌ಟಿಆರ್ ಆರ್ಟ್ಸ್’ ಮತ್ತು ‘ಹಾರಿಕಾ ಆ್ಯಂಡ್ ಹಾಸಿನಿ ಕ್ರಿಯೇಷನ್ಸ್’ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿವೆ. ಸ್ಟಾರ್ ಮ್ಯೂಸಿಕ್ ಡೈರೆಕ್ಟರ್ ಅನಿರುದ್ಧ್ ರವಿಚಂದರ್ ಈ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ.’ಅರವಿಂದ ಸಮೇದ ವೀರ ರಾಘವ’ ಚಿತ್ರದ ನಂತರ ಜೂನಿಯರ್ ಎನ್‌ಟಿಆರ್ ಮತ್ತು ತ್ರಿವಿಕ್ರಮ್ ಜೊತೆಯಾಗಿ ಮಾಡುತ್ತಿರುವ ಎರಡನೇ ಸಿನಿಮಾ ಇದಾಗಿದೆ.

ಮುರುಗನ್ ಕಥೆ ಆಧಾರಿತ ಚಿತ್ರ?

ಜೂನಿಯರ್ ಎನ್‌ಟಿಆರ್ ಅವರು ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಪೋಸ್ಟರ್ ಹಂಚಿಕೊಂಡಿದ್ದಾರೆ. ‘ಶಿವನ ಮಗ, ಪಾರ್ವತಿಯ ಹೆಮ್ಮೆ, ಶಾಶ್ವತ ಕಮಾಂಡರ್. ಮತ್ತೊಮ್ಮೆ ತ್ರಿವಿಕ್ರಮ್ ಜೊತೆ’ ಎಂದು ಅವರು ಬರೆದುಕೊಂಡಿದ್ದಾರೆ. ಪೋಸ್ಟರ್‌ನಲ್ಲಿ ಯುದ್ಧಭೂಮಿ ಮತ್ತು ದೊಡ್ಡ ತ್ರಿಶೂಲದ ಚಿತ್ರವಿದೆ.

ಜೂ. ಎನ್​​ಟಿಆರ್​ ಟ್ವೀಟ್

ಈ ಪೋಸ್ಟರ್ ಮತ್ತು ಕ್ಯಾಪ್ಷನ್ ನೋಡಿದರೆ ಇದು ಲಾರ್ಡ್ ಮುರುಗನ್ (ಕಾರ್ತಿಕೇಯ) ಅವರ ಕಥೆ ಎಂಬುದು ಸ್ಪಷ್ಟವಾಗುತ್ತದೆ. ಆದರೆ ಚಿತ್ರತಂಡ ಇನ್ನು ಕಥೆಯ ಬಗ್ಗೆ ಅಧಿಕೃತವಾಗಿ ಏನನ್ನೂ ಹೇಳಿಲ್ಲ. ‘ಉತ್ತರದಲ್ಲಿ ಜನನ. ದಕ್ಷಿಣದಲ್ಲಿ ಆರಾಧನೆ. ಈಗ, ಇಡೀ ಬ್ರಹ್ಮಾಂಡಕ್ಕೆ ಸೇರಬೇಕಾದ ಕಥೆ’ ಎಂದು ಚಿತ್ರತಂಡ ಪೋಸ್ಟ್ ಮಾಡಿದೆ.

ಇದನ್ನೂ ಓದಿ:  ಜೂ. ಎನ್‌ಟಿಆರ್ ಕೈತಪ್ಪಿದ ದೊಡ್ಡ ಚಿತ್ರ? ತಮಿಳು ನಟ ಸೂರ್ಯನ ಎಂಟ್ರಿ

ಎನ್‌ಟಿಆರ್ ಅವರ ‘ಡ್ರಾಗನ್’ ಸಿನಿಮಾ

ಜೂನಿಯರ್ ಎನ್‌ಟಿಆರ್ ಅವರ ಮುಂದಿನ ಸಿನಿಮಾ ‘ಡ್ರಾಗನ್’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಇದನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದಾರೆ. ಈ ಆಕ್ಷನ್ ಸಿನಿಮಾದಲ್ಲಿ ಎನ್‌ಟಿಆರ್ ಜೊತೆ ಬಿಜು ಮೆನನ್, ರುಕ್ಮಿಣಿ ವಸಂತ್, ಖುಷ್ಬು ಸುಂದರ್ ಮತ್ತು ಗುರು ಸೋಮಸುಂದರಂ ಪ್ರಮುಖ ಪಾತ್ರಗಳಲ್ಲಿದ್ದಾರೆ. ಈ ಸಿನಿಮಾ 2027ರ ಜೂನ್ ತಿಂಗಳಲ್ಲಿ ತೆರೆಗೆ ಬರಲಿದೆ. ಇದು ಎರಡು ಭಾಗದಲ್ಲಿ ಬರೋ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:57 am, Tue, 30 June 26

Follow Us
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ