AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ-ತೆಲಂಗಾಣ ಪ್ರವಾಹ: ಸಹಾಯ ಹಸ್ತ ಚಾಚಿದ ಜೂ ಎನ್​ಟಿಆರ್

ಭಾರಿ ಮಳೆಯಿಂದಾಗಿ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯದ ಹಲವು ಜಿಲ್ಲೆಗಳು ಜನ ಜೀವನ ಅಸ್ಥವ್ಯವಸ್ಥವಾಗಿದೆ. 40 ಮಂದಿ ಜೀವ ಕಳೆದುಕೊಂಡಿದ್ದಾರೆ. ಹಲವಾರು ಮಂದಿ ಮನೆ ಕಳೆದುಕೊಂಡಿದ್ದಾರೆ. ತೆಲುಗಿನ ಖ್ಯಾತ ನಟ ಜೂ ಎನ್​ಟಿಆರ್ ಈಗ ಸಂತ್ರಸ್ತರ ನೆರವಿಗೆ ಒಂದು ಕೋಟಿ ರೂಪಾಯಿ ನೆರವು ಘೋಷಿಸಿದ್ದಾರೆ.

ಆಂಧ್ರ-ತೆಲಂಗಾಣ ಪ್ರವಾಹ: ಸಹಾಯ ಹಸ್ತ ಚಾಚಿದ ಜೂ ಎನ್​ಟಿಆರ್
Follow us
ಮಂಜುನಾಥ ಸಿ.
|

Updated on:Sep 03, 2024 | 4:00 PM

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ಥವ್ಯಸ್ಥವಾಗಿದೆ. ಎರಡು ರಾಜ್ಯಗಳಲ್ಲಿ ಈವರೆಗೆ ಸುಮಾರು 40 ಮಂದಿ ಮಳೆಗೆ ಆಹುತಿಯಾಗಿದ್ದಾರೆ ಎನ್ನಲಾಗಿದ್ದು, ನೂರಾರು ಮಂದಿ ಮನೆ, ಆಸ್ತಿಗಳನ್ನು ಕಳೆದುಕೊಂಡಿದ್ದಾರೆ. ಎರಡೂ ಸರ್ಕಾರಗಳು ಸಂತ್ರಸ್ತರ ನೆರವಿಗೆ ಪ್ರಯತ್ನಿಸುತ್ತಿದ್ದು, ಇದೀಗ ಸಿನಿಮಾ ನಟರು ಸಹ ಸಂತ್ರಸ್ತರ ಸಹಾಯಕ್ಕೆ ಧಾವಿಸಿದ್ದಾರೆ. ನಟ ಜೂ ಎನ್​ಟಿಆರ್ ಎರಡೂ ರಾಜ್ಯಗಳಿಗೆ ಒಂದು ಕೋಟಿ ರೂಪಾಯಿ ನೆರವು ಘೋಷಿಸಿದ್ದಾರೆ.

ಕರ್ನಾಟಕ ಪ್ರವಾಸದಲ್ಲಿದ್ದ ನಟ ಜೂ ಎನ್​ಟಿಆರ್, ಮಳೆಯಿಂದ ಹಾನಿಗೊಳಗಾದವರ ನೆರವಿಗೆಂದು ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಮುಖ್ಯಮಂತ್ರಿಗಳ ಸಹಾಯ ನಿಧಿಗೆ ತಲಾ ಐವತ್ತು ಲಕ್ಷ ರೂಪಾಯಿ ನೆರವು ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಜೂ ಎನ್​ಟಿಆರ್, ‘ಭಾರೀ ಮಳೆಯಿಂದಾಗಿ ಎರಡು ತೆಲುಗು ರಾಜ್ಯಗಳಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹದಿಂದ ಆಗಿರುವ ಅನಾಹುತದಿಂದ ನಾನು ತೀವ್ರವಾಗಿ ಮನನೊಂದಿದ್ದೇನೆ. ಈ ದುರಂತದಿಂದ ತೆಲುಗು ಜನರು ಬೇಗ ಚೇತರಿಸಿಕೊಳ್ಳಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.

ಇದನ್ನೂ ಓದಿ:ಕೊಲ್ಲೂರು ಮೂಕಾಂಬಿಕೆ ದರ್ಶನ್ ಮಾಡಿದ ಜೂ ಎನ್​ಟಿಆರ್

ಮುಂದುವರೆದು, ‘ನನ್ನ ಕಡೆಯಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎರಡು ತೆಲುಗು ರಾಜ್ಯಗಳ ಸರ್ಕಾರಗಳು ಪ್ರವಾಹ ವಿಕೋಪದಿಂದ ಪರಿಹಾರಕ್ಕಾಗಿ ಕೈಗೊಂಡ ಕ್ರಮಗಳಿಗೆ ಸಹಾಯ ಮಾಡಲು ತಲಾ 50 ಲಕ್ಷ ದೇಣಿಗೆಯನ್ನು ಘೋಷಿಸುತ್ತಿದ್ದೇನೆ’ ಎಂದಿದ್ದಾರೆ. ಆ ಮೂಲಕ ಆಂಧ್ರ-ತೆಲಂಗಾಣ ಜನರ ನೆರವಿಗೆ ಬಂದ ಮೊದಲ ನಟ ಎನಿಸಿಕೊಂಡಿದ್ದಾರೆ. ‘ಕಲ್ಕಿ’ ಸಿನಿಮಾ ತಂಡವೂ ಸಹ ತಲಾ 25 ಲಕ್ಷ ರೂಪಾಯಿಗಳ ನೆರವು ಘೋಷಣೆ ಮಾಡಿದೆ. ಜೂ ಎನ್​ಟಿಆರ್ ಬಳಿಕ ಇನ್ನಷ್ಟು ನಟರು ನೆರವು ಘೋಷಿಸುವ ಸಾಧ್ಯತೆ ಇದೆ.

ಜೂ ಎನ್​ಟಿಆರ್ ಕಳೆದ ಕೆಲ ದಿನಗಳಿಂದಲೂ ಕರ್ನಾಟಕದಲ್ಲಿ ವಾಸ್ತವ್ಯ ಹೂಡಿದ್ದರು. ತಾಯಿ, ಪತ್ನಿಯೊಂದಿಗೆ ಕರ್ನಾಟಕಕ್ಕೆ ಬಂದಿದ್ದ ಜೂ ಎನ್​ಟಿಆರ್, ತಾಯಿಯ ಆಸೆಯಂತೆ ಅವರ ಹುಟ್ಟೂರಾದ ಕುಂದಾಪುರ, ಉಡುಪಿ ಕೃಷ್ಣನ ದರ್ಶನವನ್ನು ಮಾಡಿಸಿದರು. ಈ ವೇಳೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಹ ಜೊತೆಗಿದ್ದರು. ಅದಾದ ಬಳಿಕ ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಪ್ರಶಾಂತ್ ನೀಲ್ ಇನ್ನಿತರರ ಜೊತೆಗೆ ಕರಾವಳಿಯ ಕೆಲವು ಸುಂದರ ತಾಣಗಳಲ್ಲಿ ಜೂ ಎನ್​ಟಿಆರ್ ಸುತ್ತಾಡಿದ್ದಾರೆ. ಬಸ್ರೂರು ಮ್ಯೂಸಿಕ್ ಸ್ಟುಡಿಯೋಗೆ ಸಹ ಭೇಟಿ ನೀಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:18 pm, Tue, 3 September 24

ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?