‘ನಾನು ಸುರಕ್ಷಿತವಾಗಿ ಮರಳಿದ್ದೇನೆ’; ಜಪಾನ್​ನಿಂದ ಹಿಂದಿರುಗಿ ಟ್ವೀಟ್ ಮಾಡಿದ ಜೂ. ಎನ್​ಟಿಆರ್

ಜೂನಿಯರ್​ ಎನ್​ಟಿಆರ್ ಅವರು ಕ್ರಿಸ್​​ಮಸ್ ಸಂದರ್ಭದಲ್ಲಿ ಜಪಾನ್​ಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿ ಭೂಕಂಪ ಸಂಭವಿಸಿದೆ. ಇದು ಜೂನಿಯರ್ ಎನ್​ಟಿಆರ್ ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿತ್ತು.

‘ನಾನು ಸುರಕ್ಷಿತವಾಗಿ ಮರಳಿದ್ದೇನೆ’; ಜಪಾನ್​ನಿಂದ ಹಿಂದಿರುಗಿ ಟ್ವೀಟ್ ಮಾಡಿದ ಜೂ. ಎನ್​ಟಿಆರ್
ಜೂನಿಯರ್ ಎನ್​ಟಿಆರ್
Follow us
ರಾಜೇಶ್ ದುಗ್ಗುಮನೆ
|

Updated on: Jan 02, 2024 | 2:19 PM

ಜೂನಿಯರ್​ ಎನ್​ಟಿಆರ್ (Jr NTR) ಅವರು ಸದ್ಯ ಕೊರಟಾಲ ಶಿವ ನಿರ್ದೇಶನದ ‘ದೇವರ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ‘ಆರ್​ಆರ್​ಆರ್’ ಸಿನಿಮಾದ ಬಳಿಕ ಈ ಸಿನಿಮಾದಲ್ಲಿ ನಟಿಸುತ್ತಿರುವುದರಿಂದ ಭಾರೀ ನಿರೀಕ್ಷೆಗಳಿವೆ. ಈ ಚಿತ್ರದ ಬಗ್ಗೆ ನಿರ್ಮಾಪಕರು ಈಗಾಗಲೇ ಹಲವು ಅಪ್‌ಡೇಟ್‌ಗಳನ್ನು ನೀಡುತ್ತಿದ್ದಾರೆ. ಈ ಮಧ್ಯೆ ಜೂನಿಯರ್ ಎನ್​ಟಿಆರ್​ ಅವರು ಕುಟುಂಬದ ಜೊತೆ ಜಪಾನ್​ಗೆ ತೆರಳಿದ್ದರು. ಅಲ್ಲಿ ಭೂಕಂಪ ಆದ ಬಳಿಕ ಅವರು ಭಾರತಕ್ಕೆ ಮರಳಿದ್ದಾರೆ. ಈ ವಿಚಾರವನ್ನು ಅವರು ಹಂಚಿಕೊಂಡಿದ್ದಾರೆ.

ಜೂನಿಯರ್​ ಎನ್​ಟಿಆರ್ ಅವರು ಕ್ರಿಸ್​​ಮಸ್ ಸಂದರ್ಭದಲ್ಲಿ ಜಪಾನ್​ಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿ ಭೂಕಂಪ ಸಂಭವಿಸಿದೆ. ಇದು ಜೂನಿಯರ್ ಎನ್​ಟಿಆರ್ ಅಭಿಮಾನಿಗಳ ಆತಂಕಕ್ಕೆ ಕಾರಣ ಆಗಿತ್ತು. ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಬರೆದುಕೊಂಡಿದ್ದರು. ಸುರಕ್ಷಿತವಾಗಿ ಭಾರತಕ್ಕೆ ಮರಳಿರುವುದಾಗಿ ತಾರಕ್ ಹೇಳಿದ್ದಾರೆ. ಇದರಿಂದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

‘ನಾವು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದೇವೆ. ಜಪಾನ್​ನಲ್ಲಿ ಭೂಕಂಪ ಆಗಿದ್ದು ಶಾಕಿಂಗ್ ಆಗಿದೆ. ನಾನು ಒಂದು ವಾರ ಅಲ್ಲಿಯೇ ಕಳೆದಿದ್ದೇನೆ. ಭೂಕಂಪದಿಂದ ಹಾನಿಗೆ ಒಳಗಾದವರ ಬಗ್ಗೆ ದುಃಖ ಇದೆ. ಅಲ್ಲಿನ ಜನ ಬೇಗ ಚೇತರಿಸಿಕೊಳ್ಳಲಿ. ದೃಢವಾಗಿರಿ ಜಪಾನ್’ ಎಂದು ಜೂನಿಯರ್ ಎನ್​ಟಿಆರ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಭಾರಿ ಉತ್ಸಾಹದಲ್ಲಿ ಪೋಸ್ಟರ್​ ಬಿಡುಗಡೆ ಮಾಡಿ ಟ್ರೋಲ್​ ಆದ ‘ದೇವರ’ ಚಿತ್ರತಂಡ

‘ದೇವರ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ಸೈಫ್ ಅಲಿ ಖಾನ್ ವಿಲನ್ ಆಗಿ ನಟಿಸುತ್ತಿದ್ದಾರೆ. ಜೂನಿಯರ್​ ಎನ್​ಟಿಆರ್​ಗೆ ಜೊತೆಯಾಗಿ ಜಾನ್ವಿ ಕಪೂರ್ ‘ದೇವರ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸಮುದ್ರದ ಹಿನ್ನೆಲೆಯಲ್ಲಿ ಚಿತ್ರದ ಕಥೆ ಸಾಗುತ್ತದೆ. ಈ ಚಿತ್ರದ ಗ್ಲಿಂಪ್ಸ್ ಜನವರಿ 8ರಂದು ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ