AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಮುಂಜಾನೆ ಎಷ್ಟು ಗಂಟೆಗೆ ‘ದೇವರ’ ಶೋ ಶುರು? ಎಲ್ಲವೂ ಹೌಸ್​ಫುಲ್

‘ದೇವರ’ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ ಅವರು ಹೀರೋ ಆಗಿ ನಟಿಸಿದರೆ, ಜಾನ್ವಿ ಕಪೂರ್ ನಾಯಕಿ ಪಾತ್ರ ಮಾಡಿದ್ದಾರೆ. ಸೈಫ್ ಅಲಿ ಖಾನ್ ಅವರದ್ದು ವಿಲನ್ ಪಾತ್ರ. ಈ ಚಿತ್ರವನ್ನು ಕೊರಟಾಲ ಶಿವ ಅವರು ನಿರ್ದೇಶನ ಮಾಡಿದ್ದಾರೆ. ಬೆಂಗಳೂರಲ್ಲಿ ಸಿನಿಮಾಗೆ ಭರ್ಜರಿ ಹೈಪ್ ಸೃಷ್ಟಿ ಆಗಿದೆ.

ಬೆಂಗಳೂರಲ್ಲಿ ಮುಂಜಾನೆ ಎಷ್ಟು ಗಂಟೆಗೆ ‘ದೇವರ’ ಶೋ ಶುರು? ಎಲ್ಲವೂ ಹೌಸ್​ಫುಲ್
ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Sep 24, 2024 | 7:24 AM

Share

‘ದೇವರ’ ಸಿನಿಮಾ ರಿಲೀಸ್​ಗೆ ಉಳಿದಿರೋದು ಇನ್ನು ಕೆಲವು ದಿನಗಳು ಮಾತ್ರ. ಸೆಪ್ಟೆಂಬರ್ 27ರಂದು ಈ ಚಿತ್ರ ರಿಲೀಸ್ ಆಗಲಿದೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ರಿಲೀಸ್​ಗೂ ಮೊದಲೇ ಚಿತ್ರ ದಾಖಲೆ ಬರೆಯಲು ರೆಡಿ ಆಗಿದೆ. ಬೆಂಗಳೂರಲ್ಲಿ ಮುಂಜಾನೆಯಿಂದಲೇ ಶೋಗಳು ಆರಂಭ ಆಗಲಿವೆ. ಈ ಪೈಕಿ ಬಹುತೇಕ ಹೌಸ್​ಫುಲ್ ಆಗಿವೆ. ಆ ಬಗ್ಗೆ ಇಲ್ಲಿದೆ ವಿವರ.

‘ದೇವರ’ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ ಅವರು ಹೀರೋ ಆಗಿ ನಟಿಸಿದರೆ, ಜಾನ್ವಿ ಕಪೂರ್ ನಾಯಕಿ ಪಾತ್ರ ಮಾಡಿದ್ದಾರೆ. ಸೈಫ್ ಅಲಿ ಖಾನ್ ಅವರದ್ದು ವಿಲನ್ ಪಾತ್ರ. ಈ ಚಿತ್ರವನ್ನು ಕೊರಟಾಲ ಶಿವ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಭರ್ಜರಿ ಹೈಪ್ ಸೃಷ್ಟಿ ಆಗಿದೆ. ಈ ಹೈಪ್​ಗೆ ತಕ್ಕಂತೆ ಶೋಗಳನ್ನು ಇಡಲಾಗುತ್ತಿದೆ.

ಬೆಂಗಳೂರಲ್ಲಿ ಮುಂಜಾನೆ 4 ಗಂಟೆಯಿಂದ ಶೋ ಆಯೋಜನೆ ಮಾಡಲಾಗಿದೆ. ವಿಶೇಷ ಎಂದರೆ ಬೆಂಗಳೂರಿನ ಹೊರ ವಲಯದಲ್ಲಿರುವ ವಿಜಯಪುರದಲ್ಲಿ ಮುಂಜಾನೆ 3:30ಕ್ಕೆ ಶೋ ಪ್ರಾರಂಭ ಆಗುತ್ತಿದೆ. ಮುಂಜಾನೆಯ ಬಹುತೇಕ ಶೋಗಳು ಹೌಸ್​ಫುಲ್ ಆಗಿವೆ ಅನ್ನೋದು ವಿಶೇಷ. ಜೂನಿಯರ್ ಎನ್​ಟಿಆರ್ ಅಭಿಮಾನಿಗಳು ಮುಗಿಬಿದ್ದು ಟಿಕೆಟ್ ಬುಕ್ ಮಾಡುತ್ತಿದ್ದಾರೆ.

ಸದ್ಯ ಬೆಂಗಳೂರಲ್ಲಿ 350ಕ್ಕೂ ಹೆಚ್ಚು ಶೋಗಳನ್ನು ನೀಡಲಾಗಿದೆ. ಇವೆಲ್ಲವೂ ಸಿಂಗಲ್​ಸ್ಕ್ರೀನ್​ನ ಲೆಕ್ಕ. ಇನ್ನೂ ಪಿವಿಆರ್​-ಐನಾಕ್ಸ್​, ಗೋಪಾಲನ್ ಸಿನಿಮಾಸ್​ ಸೇರಿ ಇತರೆ ಮಲ್ಟಿಪ್ಲೆಕ್ಸ್​​ಗಳಲ್ಲಿ ಶೋ ಬಿಟ್ಟಿಲ್ಲ. ಅವುಗಳ ಲೆಕ್ಕವೂ ಸೇರಿದರೆ ಶೋಗಳ ಸಂಖ್ಯೆ ಸಾವಿರದ ಗಡಿ ತಲುಪಿದರೂ ಅಚ್ಚರಿ ಏನಿಲ್ಲ ಎಂದು ಹೇಳಲಾಗುತ್ತಿದೆ. ಈ ವಿಚಾರ ಕೇಳಿ ಜೂನಿಯರ್ ಎನ್​ಟಿಆರ್ ಫ್ಯಾನ್ಸ್ ಖುಷಿ ಆಗಿದೆ.

ಇದನ್ನೂ ಓದಿ: ಜೂನಿಯರ್ ಎನ್​ಟಿಆರ್-ಪುನೀತ್ ಗೆಳೆತನ ಎಂಥದ್ದು? ಇಲ್ಲಿದೆ ವಿವರ

2018ರಲ್ಲಿ ಜೂನಿಯರ್ ಎನ್​ಟಿಆರ್ ನಟನೆಯ ‘ಅರವಿಂದ ಸಮೇದ’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ಭರ್ಜರಿ ಹೈಪ್ ಸೃಷ್ಟಿ ಮಾಡಿತ್ತು. ಇದಾದ ಬಳಿಕ ಅವರು ನಟಿಸಿದ ಸಿನಿಮಾ ‘ಆರ್​ಆರ್​ಆರ್’. ಇದು ಮಲ್ಟಿ ಸ್ಟಾರರ್ ಚಿತ್ರ ಆಗಿತ್ತು. ಈಗ ‘ದೇವರ’ ಸಿನಿಮಾ ಬಿಡುಗಡೆ ಕಾಣುತ್ತಿದ್ದು, ಅವರು ಸೋಲೋ ಹೀರೋ ಆಗಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ