
ನಟ ಜೂನಿಯರ್ ಎನ್ಟಿಆರ್ (Jr. NTR) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈ ವರ್ಷ ತೆರೆಗೆ ಬಂದ ‘ಆರ್ಆರ್ಆರ್’ ಸಿನಿಮಾ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿತು. ಈ ಚಿತ್ರದಿಂದ ವಿಶ್ವ ಮಟ್ಟದಲ್ಲಿ ಅವರಿಗಿದ್ದ ಖ್ಯಾತಿ ದ್ವಿಗುಣ ಆಗಿದೆ. ಈಗ ಜೂನಿಯರ್ ಎನ್ಟಿಆರ್ ಅವರು ಕಟಕಟೆ ಎದುರು ನಿಂತಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಷ್ಟಕ್ಕೂ ಅವರು ಈ ರೀತಿ ಕಟಕಟೆ ಏರಿದ್ದು ಕಮರ್ಷಿಯಲ್ ಶೂಟ್ಗೋಸ್ಕರ.
ಕಮರ್ಷಿಯಲ್ ಶೂಟ್ನಲ್ಲಿ ಜೂನಿಯರ್ ಎನ್ಟಿಆರ್ ಅವರು ಭಾಗಿ ಆಗಿದ್ದಾರೆ. ಇದರಲ್ಲಿ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಕಟಕಟೆ ಮಾದರಿಯ ಜಾಗದಲ್ಲಿ ನಿಂತು ಕ್ಯಾಮೆರಾ ಎದುರಿಸಿದ್ದಾರೆ. ಕಮರ್ಷಿಯಲ್ ಶೂಟ್ನ ಮೇಕಿಂಗ್ ವಿಡಿಯೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ. ಸೆಲೆಬ್ರಿಟಿ ಹೇರ್ಸ್ಟೈಲಿಸ್ಟ್ ಆಲಿಮ್ ಹಕೀಮ್ ಕೂಡ ಈ ಶೂಟ್ನಲ್ಲಿ ಭಾಗಿ ಆಗಿದ್ದಾರೆ. ಜ್ಯೂ.ಎನ್ಟಿಆರ್ಗೆ ಅವರೇ ಹೇರ್ ಸ್ಟೈಲ್ ಮಾಡಿದ್ದಾರೆ.
ಜ್ಯೂ.ಎನ್ಟಿಆರ್ ಕೈಯಲ್ಲಿ ಎರಡು ದೊಡ್ಡ ಬಜೆಟ್ ಚಿತ್ರಗಳಿವೆ. ಕೊರಟಾಲ ಶಿವ ಅವರು ಜ್ಯೂ.ಎನ್ಟಿಆರ್ 30ನೇ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಸಾಕಷ್ಟು ಮಾಸ್ ರೀತಿಯಲ್ಲಿ ಈ ಸಿನಿಮಾ ಮೂಡಿ ಬರಲಿದೆ ಎನ್ನಲಾಗಿದೆ. ಅನಿರುದ್ಧ್ ರವಿಚಂದರ್ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ಚಿತ್ರ ದೊಡ್ಡ ಬಜೆಟ್ನಲ್ಲಿ ಸಿದ್ಧಗೊಳ್ಳಲಿದೆ. 2016ರಲ್ಲಿ ತೆರೆಗೆ ಬಂದ ‘ಜನತಾ ಗ್ಯಾರೇಜ್’ ಚಿತ್ರದಲ್ಲಿ ಜೂನಿಯರ್ ಎನ್ಟಿಆರ್ ಹಾಗೂ ಕೊರಟಾಲ ಶಿವ ಒಟ್ಟಾಗಿ ಕೆಲಸ ಮಾಡಿದ್ದರು.
ಇದನ್ನೂ ಓದಿ: Jr NTR: ಜೂನಿಯರ್ ಎನ್ಟಿಆರ್ ಬೆಂಗಳೂರಿಗೆ ಬಂದುಹೋದ ಬೆನ್ನಲ್ಲೇ ಕೇಳಿಬಂತು ಹೊಸ ಸಿನಿಮಾ ಸುದ್ದಿ
ಜೂನಿಯರ್ ಎನ್ಟಿಆರ್ ಅವರ 31ನೇ ಚಿತ್ರದ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾಗೆ ‘ಕೆಜಿಎಫ್’ ಖ್ಯಾತಿಯ ಪ್ರಶಾಂತ್ ನೀಲ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಪ್ರೀ ಪ್ರೊಡಕ್ಷನ್ ಹಂತದಲ್ಲಿದೆ. ಪ್ರಶಾಂತ್ ನೀಲ್ ಅವರು ‘ಸಲಾರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಜೂನಿಯರ್ ಎನ್ಟಿಆರ್ ಅವರ 30ನೇ ಸಿನಿಮಾ ಪೂರ್ಣಗೊಂಡ ಬಳಿಕ ಈ ಚಿತ್ರದ ಕೆಲಸಗಳು ಆರಂಭ ಆಗಲಿವೆ.
Published On - 2:35 pm, Wed, 23 November 22