AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ ಎನ್​ಟಿಆರ್​ಗೆ ಗಾಯ, ಅಧಿಕೃತ ಹೇಳಿಕೆ ಬಿಡುಗಡೆ

ಜೂ ಎನ್​ಟಿಆರ್ ನಟನೆಯ ಸಂದರ್ಭದಲ್ಲಿ ಜೂ ಎನ್​ಟಿಆರ್​ಗೆ ಪೆಟ್ಟಾಗಿ ಆಸ್ಪತ್ರೆ ಸೇರಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಚಿತ್ರತಂಡ ಈ ಬಗ್ಗೆ ಸ್ಪಷ್ಟನೆ ನೀಡಿದೆ.

ಜೂ ಎನ್​ಟಿಆರ್​ಗೆ ಗಾಯ, ಅಧಿಕೃತ ಹೇಳಿಕೆ ಬಿಡುಗಡೆ
ಮಂಜುನಾಥ ಸಿ.
|

Updated on: Aug 14, 2024 | 6:14 PM

Share

ನಟ ಜೂ ಎನ್​ಟಿಆರ್ ‘ದೇವರ’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದು, ಸಿನಿಮಾದ ಕ್ಲೈಮ್ಯಾಕ್ಸ್ ದೃಶ್ಯಗಳ ಚಿತ್ರೀಕರಣ ಚಾಲ್ತಿಯಲ್ಲಿದೆ ಎನ್ನಲಾಗುತ್ತಿದೆ. ಸಿನಿಮಾದ ಕೆಲವು ಫೈಟ್ ದೃಶ್ಯಗಳಲ್ಲಿ ಜೂ ಎನ್​ಟಿಆರ್ ತೊಡಗಿಸಿಕೊಂಡಿದ್ದು, ಈ ನಡುವೆ ಜೂ ಎನ್​ಟಿಆರ್​ ಗಾಯಗೊಂಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಫೈಟ್ ದೃಶ್ಯದ ಚಿತ್ರೀಕರಣದ ಸಂದರ್ಭದಲ್ಲಿ ಜೂ ಎನ್​ಟಿಆರ್ ಬಿದ್ದು ಗಾಯಗೊಂಡಿದ್ದಾರೆ, ಅವರನ್ನು ಆಸ್ಪತ್ರೆಗೆ ದಾಖಲಸಲಾಗಿದೆ ಎಂಬ ಸುದ್ದಿ ಎರಡು ದಿನದ ಹಿಂದೆಯೇ ಹರಿದಾಡಲು ಆರಂಭಿಸಿತ್ತು. ಇದೀಗ ಈ ಬಗ್ಗೆ ಅಧಿಕೃತ ಹೇಳಿಕೆ ಹೊರಬಿದ್ದಿದೆ.

ದೇವರ ಚಿತ್ರತಂಡದವರು ನೀಡಿರುವ ಮಾಹಿತಿಯಂತೆ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿರುವಾಗ ಜೂ ಎನ್​ಟಿಆರ್ ಗಾಯಗೊಂಡಿದ್ದಾರೆಯೇ ವಿನಃ ಸಿನಿಮಾದ ಶೂಟಿಂಗ್​ನಲ್ಲಿ ಅಲ್ಲ. ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ಅವರ ಮಣಿಕಟ್ಟು ಹಾಗೂ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ ಜೂ ಎನ್​ಟಿಆರ್. ಸೂಕ್ತ ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ. ನೋವಿನ ನಡುವೆಯೂ ಜೂ ಎನ್​ಟಿಆರ್ ‘ದೇವರ’ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಲ್ಲದೆ ಸಿನಿಮಾದ ಮೊದಲ ಭಾಗದ ಚಿತ್ರೀಕರಣವನ್ನೂ ಸಹ ಮುಗಿಸಿಕೊಟ್ಟಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ:ಜೂ ಎನ್​ಟಿಆರ್ ಕೈಯಲ್ಲಿರುವ ಈ ವಾಚ್​ ಬೆಲೆಗೆ ಒಂದು ಸಿನಿಮಾ ನಿರ್ಮಿಸಬಹುದು

ಜೂ ಎನ್​ಟಿಆರ್ ಸಹ ನಿನ್ನೆ ಟ್ವೀಟ್ ಒಂದನ್ನು ಮಾಡಿದ್ದು, ‘ದೇವರ’ ಸಿನಿಮಾದ ಮೊದಲ ಭಾಗದ ಚಿತ್ರೀಕರಣ ಮುಗಿಸಿದ್ದೇವೆ. ನಾನು ಈ ತಂಡದ ಸಮುದ್ರದಂಥಹಾ ಪ್ರೀತಿ ಮತ್ತು ಕಾಳಜಿಯನ್ನು ನಾನು ಮಿಸ್ ಮಾಡಿಕೊಳ್ಳಲಿದ್ದೇನೆ. ಕೊರಟಾಲ ಶಿವ ಸೃಷ್ಟಿಸಿರುವ ಅದ್ಭುತ ಪ್ರಪಂಚದಲ್ಲಿ ಯಾನ ಮಾಡಲು ನಾನಂತೂ ಕಾಯುತ್ತಿದ್ದೇನೆ. ಈ ಕಾಯುವಿಕೆ ಸೆಪ್ಟೆಂಬರ್ 27ಕ್ಕೆ ಅಂತ್ಯವಾಗಲಿದೆ’ ಎಂದಿದ್ದಾರೆ. ಸಂದೇಶದ ಜೊತೆಗೆ ತಮ್ಮ ಹಾಗೂ ಕೊರಟಾಲ ಶಿವ ಅವರ ಚಿತ್ರವನ್ನು ಹಂಚಿಕೊಂಡಿದ್ದು, ಚಿತ್ರದಲ್ಲಿ ಜೂ ಎನ್​ಟಿಆರ್ ಆರೋಗ್ಯಕರವಾಗಿರುವಂತೆ ಕಾಣುತ್ತಿದ್ದಾರೆ.

‘ದೇವರ’ ಚಿತ್ರತಂಡ ಹೇಳಿರುವಂತೆ ಸಿನಿಮಾದ ಮೊದಲ ಭಾಗದ ಚಿತ್ರೀಕರಣ ಮುಗಿದಿದ್ದು, ಎರಡನೇ ಭಾಗದ ಚಿತ್ರೀಕರಣವನ್ನು ಸಹ ಈಗಲೇ ಪ್ರಾರಂಭ ಮಾಡುವ ಯೋಜನೆ ಇದೆಯಂತೆ. ಆದರೆ ಎರಡನೇ ಭಾಗದ ಕೆಲವು ಭಾಗಗಳಷ್ಟೆ ಈಗ ಚಿತ್ರೀಕರಣ ಆಗಲಿವೆಯಂತೆ. ಜೂ ಎನ್​ಟಿಆರ್ ಪ್ರಸ್ತುತ ಹಿಂದಿಯ ‘ವಾರ್ 2’ ಸಿನಿಮಾದಲ್ಲಿ ಹೃತಿಕ್ ರೋಷನ್ ಜೊತೆಗೆ ನಟಿಸುತ್ತಿದ್ದಾರೆ. ಆ ಸಿನಿಮಾದ ಬಳಿಕ ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಸಿನಿಮಾದ ಚಿತ್ರೀಕರಣ ಶುರು ಮಾಡಲಿದ್ದಾರೆ. ‘ವಾರ್ 2’ ಸಿನಿಮಾದ ಚಿತ್ರೀಕರಣವೂ ಬಹುತೇಕ ಅಂತ್ಯವಾಗುತ್ತಾ ಬಂದಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ