AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಕಾಪಟ್ಟೆ ಸ್ಲಿಮ್ ಆದ ಜೂನಿಯರ್ ಎನ್​ಟಿಆರ್; ಇದಕ್ಕೆ ಕಾರಣ ಪ್ರಶಾಂತ್ ನೀಲ್

ಪ್ರಶಾಂತ್ ನೀಲ್, ಜೂನಿಯರ್ ಎನ್​ಟಿಆರ್ ಕಾಂಬಿನೇಷನ್​​ನ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ. ಈ ಸಿನಿಮಾ ಸಲುವಾಗಿ ಜೂನಿಯರ್ ಎನ್​ಟಿಆರ್ ಅವರು ಸಿಕ್ಕಾಪಟ್ಟೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅವರ ಬದ್ಧತೆ ಹೇಗಿದೆ ಎಂಬುದಕ್ಕೆ ಸಾಕ್ಷಿಯಾಗಿ ಒಂದು ವಿಡಿಯೋ ವೈರಲ್ ಆಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಸಿಕ್ಕಾಪಟ್ಟೆ ಸ್ಲಿಮ್ ಆದ ಜೂನಿಯರ್ ಎನ್​ಟಿಆರ್; ಇದಕ್ಕೆ ಕಾರಣ ಪ್ರಶಾಂತ್ ನೀಲ್
Jr NTR
ಮದನ್​ ಕುಮಾರ್​
|

Updated on: Sep 16, 2025 | 10:47 PM

Share

ನಟ ಜೂನಿಯರ್ ಎನ್​ಟಿಆರ್ (Jr NTR) ಅವರು ‘ವಾರ್ 2’ ಸಿನಿಮಾದಲ್ಲಿ ನಟಿಸಿದ್ದರು. ಕೆಲವು ವಾರಗಳ ಹಿಂದೆ ಬಿಡುಗಡೆ ಆದ ಆ ಸಿನಿಮಾದಿಂದ ಅಭಿಮಾನಿಗಳಿಗೆ ನಿರಾಸೆ ಆಯಿತು. ಆದರೆ ಈಗ ಅವರು ಮುಂದಿನ ಸಿನಿಮಾ ಬಗ್ಗೆ ಗಮನ ಹರಿಸಿದ್ದಾರೆ. ಪ್ರಶಾಂತ್ ನೀಲ್ (Prashanth Neel) ಜೊತೆಗಿನ ಸಿನಿಮಾದ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಈ ನಡುವೆ ಜೂನಿಯರ್ ಎನ್​ಟಿಆರ್ ಅವರು ತುಂಬಾ ಸ್ಲಿಮ್ ಆಗಿದ್ದಾರೆ. ಅಭಿಮಾನಿಗಳಿಗೆ ಅಚ್ಚರಿ ಆಗುವ ರೀತಿಯಲ್ಲಿ ಬಾಡಿ ಟ್ರಾನ್ಸ್​​ಫಾರ್ಮೇಷನ್ ಮಾಡಿಕೊಳ್ಳುತ್ತಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿರುವ ‘ಡ್ರ್ಯಾಗನ್’ ಸಿನಿಮಾ (Dragon Movie) ಸಲುವಾಗಿ ಈ ರೀತಿ ಅವರು ಬದಲಾಗುತ್ತಿದ್ದಾರೆ.

ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್​ಟಿಆರ್ ಅವರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಸಿನಿಮಾಗೆ ಇನ್ನೂ ಶೀರ್ಷಿಕೆ ಅಂತಿಮಾಗಿಲ್ಲ. ಆದರೆ ಸದ್ಯಕ್ಕೆ ಇದನ್ನು ‘ಡ್ರ್ಯಾಗನ್’ ಎಂದು ಕರೆಯಲಾಗುತ್ತಿದೆ. ಈ ಸಿನಿಮಾದ ಶೂಟಿಂಗ್ ಶುರುವಾಗಿ ಹಲವು ತಿಂಗಳು ಕಳೆದಿವೆ. ಅದರ ನಡುವೆ ಜೂನಿಯರ್ ಎನ್​ಟಿಆರ್ ಅವರು ‘ವಾರ್ 2’ ಸಿನಿಮಾಗೆ ಸಮಯ ನೀಡಿದ್ದರು. ಆದರೆ ಈಗ ಅವರು ‘ಡ್ರ್ಯಾಗನ್’ ಚಿತ್ರದ ಕೆಲಸದಲ್ಲಿಯೇ ಸಂಪೂರ್ಣ ತೊಡಗಿಕೊಂಡಿದ್ದಾರೆ.

‘ವಾರ್ 2’ ಸಿನಿಮಾದ ಪ್ರಚಾರದ ವೇಳೆಯೇ ಜೂನಿಯರ್ ಎನ್​ಟಿಆರ್ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ತುಂಬ ತೆಳ್ಳಗಾಗಿದ್ದು ಅಭಿಮಾನಿಗಳ ಗಮನಕ್ಕೆ ಬಂದಿತ್ತು. ಅವರನ್ನು ಕಂಡು ಹಲವರಿಗೆ ಬೇಸರ ಆಗಿತ್ತು. ಆದರೆ ಜೂನಿಯರ್ ಎನ್​ಟಿಆರ್​ ಅವರು ಕಾರಣ ಇಲ್ಲದೇ ಈ ರೀತಿ ಸ್ಲಿಮ್ ಆಗಿಲ್ಲ. ‘ಡ್ರ್ಯಾಗನ್’ ಸಿನಿಮಾದಲ್ಲಿನ ಪಾತ್ರದ ಸಲುವಾಗಿ ಅವರು ಇಷ್ಟು ಸ್ಲಿಮ್ ಆಗಿದ್ದಾರೆ.

ಜೂನಿಯರ್ ಎನ್​ಟಿಆರ್ ಅವರು ಜಿಮ್​​ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇದನ್ನು ನೋಡಿದ ಅಭಿಮಾನಿಗಳು ವಾವ್ ಎನ್ನುತ್ತಿದ್ದಾರೆ. ಜೂನಿಯರ್ ಎನ್​ಟಿಆರ್ ಅವರ ಪರಿಶ್ರಮಕ್ಕೆ ಎಲ್ಲರೂ ಭೇಷ್ ಎಂದು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇದನ್ನು ನೋಡಿದ ಬಳಿಕ ‘ಡ್ರ್ಯಾಗನ್’ ಸಿನಿಮಾದ ಮೇಲೆ ಅಭಿಮಾನಿಗಳ ನಿರೀಕ್ಷೆ ಜಾಸ್ತಿ ಆಗುವಂತಿದೆ.

ಇದನ್ನೂ ಓದಿ: ‘ವಾರ್ 2’ ಸೋತರೂ ಜೂ ಎನ್​ಟಿಆರ್​​ಗೆ ಮತ್ತೊಂದು ಅವಕಾಶ ಕೊಟ್ಟ ವೈಆರ್​ಎಫ್

‘ವಾರ್ 2’ ಸೋಲಿನಿಂದ ಸಹಜವಾಗಿಯೇ ಅಭಿಮಾನಿಗಳಿಗೆ ಬೇಸರ ಆಯಿತು. ಆ ಬೇಸರವನ್ನು ಮರೆಸುವ ರೀತಿಯಲ್ಲಿ ‘ಡ್ರ್ಯಾಗನ್’ ಸಿನಿಮಾ ಮೂಡಿಬರಬೇಕಿದೆ. ‘ಕೆಜಿಎಫ್’ ಯಶಸ್ಸಿನಿಂದ ಪರಭಾಷೆಯಲ್ಲೂ ಬೇಡಿಕೆ ಸೃಷ್ಟಿಸಿಕೊಂಡ ಪ್ರಶಾಂತ್ ನೀಲ್ ಅವರು ಡ್ಯಾಗನ್ ಸಿನಿಮಾಗೆ ನಿರ್ದೇಶನ ಮಾಡುತ್ತಿರುವುದರಿಂದ ನಿರೀಕ್ಷೆ ಡಬಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ