ಹೊಸ ಹೇರ್​ಸ್ಟೈಲ್​ನಲ್ಲಿ ಗಮನ ಸೆಳೆದ ಜೂನಿಯರ್ ಎನ್​ಟಿಆರ್​; ಇದು ಯಾವ ಸಿನಿಮಾ ಲುಕ್?

ಮುಂಬೈನಲ್ಲಿ ನೆಲೆಸಿರುವ ಆಲಿಮ್ ಹಕೀಮ್ ಅವರು ಸಖತ್ ಫೇಮಸ್ ಹೇರ್ ಸ್ಟೈಲಿಸ್ಟ್. ಅವರು ಹಲವು ಸೆಲೆಬ್ರಿಟಿಗಳಿಗೆ ಹೇರ್​ಸ್ಟೈಲ್ ಮಾಡುತ್ತಾರೆ. ಜೂನಿಯರ್ ಎನ್​ಟಿಆರ್ ಜೊತೆ ಅವರು ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಜೂನಿಯರ್ ಎನ್​ಟಿಆರ್ ಅವರನ್ನು ಮ್ಯಾನ್ ಆಫ್ ಮಾಸಸ್ ಎಂದು ಕರೆದಿದ್ದಾರೆ ಆಲಿಮ್.

ಹೊಸ ಹೇರ್​ಸ್ಟೈಲ್​ನಲ್ಲಿ ಗಮನ ಸೆಳೆದ ಜೂನಿಯರ್ ಎನ್​ಟಿಆರ್​; ಇದು ಯಾವ ಸಿನಿಮಾ ಲುಕ್?
ಆಲಿಮ್ ಹಕೀಮ್-ಜೂನಿಯರ್ ಎನ್​ಟಿಆರ್
Follow us
ರಾಜೇಶ್ ದುಗ್ಗುಮನೆ
|

Updated on:Aug 10, 2023 | 3:39 PM

‘ಆರ್​ಆರ್​ಆರ್’ ರಿಲೀಸ್ ಆದ ಬಳಿಕ ಜೂನಿಯರ್ ಎನ್​ಟಿಆರ್ (Jr NTR)​ ಅವರು ಒಂದು ಸಣ್ಣ ಬ್ರೇಕ್ ಪಡೆದಿದ್ದರು. ಈ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿರುವುದರಿಂದ ಅವರಿಗೆ ಇರುವ ಬೇಡಿಕೆ ಹೆಚ್ಚಿದೆ. ಸದ್ಯ ಅವರು ಸಿನಿಮಾ ಕೆಲಸಗಳಿಗೆ ಕಂಬ್ಯಾಕ್ ಮಾಡಿದ್ದಾರೆ. ‘ದೇವರ’ ಸಿನಿಮಾ ಕೆಲಸಗಳಲ್ಲಿ ಜೂನಿಯರ್ ಎನ್​ಟಿಆರ್ ತೊಡಗಿಕೊಂಡಿದ್ದಾರೆ. ಈ ಮಧ್ಯೆ ಅವರ ಹೊಸ ಹೇರ್​ಸ್ಟೈಲ್ ಗಮನ ಸೆಳೆದಿದೆ. ಇದು ಯಾವ ಸಿನಿಮಾದ ಲುಕ್ ಎನ್ನುವ ಕುತೂಹಲ ಮೂಡಿದೆ.

ಮುಂಬೈನಲ್ಲಿ ನೆಲೆಸಿರುವ ಆಲಿಮ್ ಹಕೀಮ್ ಅವರು ಸಖತ್ ಫೇಮಸ್ ಹೇರ್ ಸ್ಟೈಲಿಸ್ಟ್. ಅವರು ಹಲವು ಸೆಲೆಬ್ರಿಟಿಗಳಿಗೆ ಹೇರ್​ಸ್ಟೈಲ್ ಮಾಡುತ್ತಾರೆ. ಈ ಮೊದಲು ರಾಕಿಂಗ್ ಸ್ಟಾರ್ ಯಶ್​ಗೆ ಅವರು ಕೇಶ ವಿನ್ಯಾಸ ಮಾಡಿಕೊಟ್ಟಿದ್ದರು. ಈ ಫೋಟೋ ಸಖತ್ ವೈರಲ್ ಆಗಿತ್ತು. ಈಗ ಜೂನಿಯರ್ ಎನ್​ಟಿಆರ್ ಜೊತೆ ಅವರು ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಜೂನಿಯರ್ ಎನ್​ಟಿಆರ್ ಅವರನ್ನು ಮ್ಯಾನ್ ಆಫ್ ಮಾಸಸ್ ಎಂದು ಕರೆದಿದ್ದಾರೆ ಆಲಿಮ್.

ಇದನ್ನೂ ಓದಿ: ಸೈಫ್ ಅಲಿ ಖಾನ್ ವಿಚಾರದಲ್ಲಿ ಜೂನಿಯರ್ ಎನ್​ಟಿಆರ್ ಅಭಿಮಾನಿಗಳಿಗೆ ಶುರುವಾಗಿದೆ ಟೆನ್ಷನ್

ಜೂನಿಯರ್ ಎನ್​ಟಿಆರ್ ಅವರು ಸಖತ್ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಲುಕ್ ಗಮನ ಸೆಳೆದಿದೆ. ಇದು ಅವರ ನಟನೆಯ ‘ದೇವರ’ ಸಿನಿಮಾದ ಲುಕ್ ಇರಬಹುದೇ ಎಂದು ಅನೇಕರು ಊಹಿಸುತ್ತಿದ್ದಾರೆ. ಜೂನಿಯರ್ ಎನ್​ಟಿಆರ್​ ಅವರು ‘ವಾರ್ 2’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಇದು ಈ ಚಿತ್ರದ ಲುಕ್ ಕೂಡ ಇರಬಹುದು ಎಂದು ಅನೇಕರು ಊಹಿಸುತ್ತಿದ್ದಾರೆ.

View this post on Instagram

A post shared by Aalim Hakim (@aalimhakim)

ಕೊರಟಾಲ ಶಿವ ‘ದೇವರ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಜೂನಿಯರ್​ ಎನ್​ಟಿಆರ್​ಗೆ ಜೊತೆಯಾಗಿ ಜಾನ್ವಿ ಕಪೂರ್ ನಟಿಸಿದ್ದಾರೆ. ಸೈಫ್ ಅಲಿ ಖಾನ್ ಅವರು ಈ ಚಿತ್ರದಲ್ಲಿ ವಿಲನ್ ಪಾತ್ರ ಮಾಡುತ್ತಿದ್ದಾರೆ.       ‘ಆದಿಪುರುಷ್’ ರಿಲೀಸ್ ಆದ ಬಳಿಕ ಅವರಿಗೆ ದಕ್ಷಿಣ ಭಾರತದಲ್ಲಿ ಬೇಡಿಕೆ ಹೆಚ್ಚಿದೆ. ಇದಲ್ಲದೆ, ‘ವಾರ್​ 2’ ಸಿನಿಮಾ ಕೆಲಸಗಳಲ್ಲೂ ಜೂನಿಯರ್​ ಎನ್​ಟಿಆರ್ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಅವರು ಹೃತಿಕ್ ರೋಷನ್ ಜೊತೆ ನಟಿಸಿದ್ದಾರೆ. ಪ್ರಶಾಂತ್ ನೀಲ್​ ಜೊತೆಗಿನ ಸಿನಿಮಾ ಇನ್ನಷ್ಟೇ ಸೆಟ್ಟೇರಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:38 pm, Thu, 10 August 23

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ