‘ಆರ್ಆರ್ಆರ್’ ರಿಲೀಸ್ ಆದ ಬಳಿಕ ಜೂನಿಯರ್ ಎನ್ಟಿಆರ್ (Jr NTR) ಅವರು ಒಂದು ಸಣ್ಣ ಬ್ರೇಕ್ ಪಡೆದಿದ್ದರು. ಈ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿರುವುದರಿಂದ ಅವರಿಗೆ ಇರುವ ಬೇಡಿಕೆ ಹೆಚ್ಚಿದೆ. ಸದ್ಯ ಅವರು ಸಿನಿಮಾ ಕೆಲಸಗಳಿಗೆ ಕಂಬ್ಯಾಕ್ ಮಾಡಿದ್ದಾರೆ. ‘ದೇವರ’ ಸಿನಿಮಾ ಕೆಲಸಗಳಲ್ಲಿ ಜೂನಿಯರ್ ಎನ್ಟಿಆರ್ ತೊಡಗಿಕೊಂಡಿದ್ದಾರೆ. ಈ ಮಧ್ಯೆ ಅವರ ಹೊಸ ಹೇರ್ಸ್ಟೈಲ್ ಗಮನ ಸೆಳೆದಿದೆ. ಇದು ಯಾವ ಸಿನಿಮಾದ ಲುಕ್ ಎನ್ನುವ ಕುತೂಹಲ ಮೂಡಿದೆ.
ಮುಂಬೈನಲ್ಲಿ ನೆಲೆಸಿರುವ ಆಲಿಮ್ ಹಕೀಮ್ ಅವರು ಸಖತ್ ಫೇಮಸ್ ಹೇರ್ ಸ್ಟೈಲಿಸ್ಟ್. ಅವರು ಹಲವು ಸೆಲೆಬ್ರಿಟಿಗಳಿಗೆ ಹೇರ್ಸ್ಟೈಲ್ ಮಾಡುತ್ತಾರೆ. ಈ ಮೊದಲು ರಾಕಿಂಗ್ ಸ್ಟಾರ್ ಯಶ್ಗೆ ಅವರು ಕೇಶ ವಿನ್ಯಾಸ ಮಾಡಿಕೊಟ್ಟಿದ್ದರು. ಈ ಫೋಟೋ ಸಖತ್ ವೈರಲ್ ಆಗಿತ್ತು. ಈಗ ಜೂನಿಯರ್ ಎನ್ಟಿಆರ್ ಜೊತೆ ಅವರು ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಜೂನಿಯರ್ ಎನ್ಟಿಆರ್ ಅವರನ್ನು ಮ್ಯಾನ್ ಆಫ್ ಮಾಸಸ್ ಎಂದು ಕರೆದಿದ್ದಾರೆ ಆಲಿಮ್.
ಇದನ್ನೂ ಓದಿ: ಸೈಫ್ ಅಲಿ ಖಾನ್ ವಿಚಾರದಲ್ಲಿ ಜೂನಿಯರ್ ಎನ್ಟಿಆರ್ ಅಭಿಮಾನಿಗಳಿಗೆ ಶುರುವಾಗಿದೆ ಟೆನ್ಷನ್
ಜೂನಿಯರ್ ಎನ್ಟಿಆರ್ ಅವರು ಸಖತ್ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಲುಕ್ ಗಮನ ಸೆಳೆದಿದೆ. ಇದು ಅವರ ನಟನೆಯ ‘ದೇವರ’ ಸಿನಿಮಾದ ಲುಕ್ ಇರಬಹುದೇ ಎಂದು ಅನೇಕರು ಊಹಿಸುತ್ತಿದ್ದಾರೆ. ಜೂನಿಯರ್ ಎನ್ಟಿಆರ್ ಅವರು ‘ವಾರ್ 2’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಇದು ಈ ಚಿತ್ರದ ಲುಕ್ ಕೂಡ ಇರಬಹುದು ಎಂದು ಅನೇಕರು ಊಹಿಸುತ್ತಿದ್ದಾರೆ.
ಕೊರಟಾಲ ಶಿವ ‘ದೇವರ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಜೂನಿಯರ್ ಎನ್ಟಿಆರ್ಗೆ ಜೊತೆಯಾಗಿ ಜಾನ್ವಿ ಕಪೂರ್ ನಟಿಸಿದ್ದಾರೆ. ಸೈಫ್ ಅಲಿ ಖಾನ್ ಅವರು ಈ ಚಿತ್ರದಲ್ಲಿ ವಿಲನ್ ಪಾತ್ರ ಮಾಡುತ್ತಿದ್ದಾರೆ. ‘ಆದಿಪುರುಷ್’ ರಿಲೀಸ್ ಆದ ಬಳಿಕ ಅವರಿಗೆ ದಕ್ಷಿಣ ಭಾರತದಲ್ಲಿ ಬೇಡಿಕೆ ಹೆಚ್ಚಿದೆ. ಇದಲ್ಲದೆ, ‘ವಾರ್ 2’ ಸಿನಿಮಾ ಕೆಲಸಗಳಲ್ಲೂ ಜೂನಿಯರ್ ಎನ್ಟಿಆರ್ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಅವರು ಹೃತಿಕ್ ರೋಷನ್ ಜೊತೆ ನಟಿಸಿದ್ದಾರೆ. ಪ್ರಶಾಂತ್ ನೀಲ್ ಜೊತೆಗಿನ ಸಿನಿಮಾ ಇನ್ನಷ್ಟೇ ಸೆಟ್ಟೇರಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:38 pm, Thu, 10 August 23