ಆರ್​ಆರ್​ಆರ್​ ಚಿತ್ರದ ಪ್ರಮೋಷನ್​ಗಾಗಿ ದೊಡ್ಡ ತ್ಯಾಗಕ್ಕೆ ಸಿದ್ಧರಾದ ಜ್ಯೂ.ಎನ್​ಟಿಆರ್​

ಜ್ಯೂ.ಎನ್​ಟಿಆರ್​ ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರು ಕೂಡ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಕಾರಣಕ್ಕೆ ಉಳಿದ ಎಲ್ಲಾ ಪ್ರಾಜೆಕ್ಟ್​ಗಳ ಕೆಲಸವನ್ನು ಮುಂದೂಡುವಂತೆ ಅವರು ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

ಆರ್​ಆರ್​ಆರ್​ ಚಿತ್ರದ ಪ್ರಮೋಷನ್​ಗಾಗಿ ದೊಡ್ಡ ತ್ಯಾಗಕ್ಕೆ ಸಿದ್ಧರಾದ ಜ್ಯೂ.ಎನ್​ಟಿಆರ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 12, 2021 | 4:06 PM

ಎಸ್​.ಎಸ್​. ರಾಜಮೌಳಿ (SS Rajamouli) ಸಿನಿಮಾ ಮಾಡೋಕೆ ಎಷ್ಟು ಕಾಳಜಿ ವಹಿಸುತ್ತಾರೋ ಅಷ್ಟೇ ಪ್ರಾಮುಖ್ಯತೆಯನ್ನು ಸಿನಿಮಾದ ಪ್ರಚಾರಕ್ಕೂ ಕೊಡುತ್ತಾರೆ. ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುವ ಅವರ ನಿರ್ದೇಶನದ ಸಿನಿಮಾಗಳಿಗೆ ಭಾರೀ ಪ್ರಚಾರ ನೀಡುತ್ತಾರೆ. ಈ ಮೂಲಕ ಸಿನಿಮಾವನ್ನು ಎಲ್ಲರಿಗೂ ತಲುಪಿಸುವ ಕೆಲಸ ಮಾಡುತ್ತಾರೆ. ಈಗ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’  (RRR Movie) ಸಿನಿಮಾ ರಿಲೀಸ್​ಗೆ ರೆಡಿ ಆಗಿದೆ. ಹೊಸ ವರ್ಷದ ಆರಂಭದಲ್ಲೇ ಈ ಚಿತ್ರ ರಿಲೀಸ್​ ಆಗುತ್ತಿದೆ. ಈ ಸಿನಿಮಾ ಕಲೆಕ್ಷನ್​ ರೂಪದಲ್ಲಿ ದೊಡ್ಡ ಮಟ್ಟದ ಗಳಿಕೆ ಮಾಡುವ ನಿರೀಕ್ಷೆ ಇದೆ. ಶೀಘ್ರದಲ್ಲೇ ಸಿನಿಮಾ ಪ್ರಚಾರ ಕಾರ್ಯ ಆರಂಭಿಸಲು ರಾಜಮೌಳಿ ರೆಡಿ ಆಗಿದ್ದಾರೆ. ಇದಕ್ಕೆ ಸಿದ್ಧರಾಗುವಂತೆ ತಂಡದ ಕಲಾವಿದರಿಗೆ ಅವರು ಸೂಚಿಸಿದ್ದಾರೆ.

ಜ್ಯೂ.ಎನ್​ಟಿಆರ್​ ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರು ಕೂಡ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಕಾರಣಕ್ಕೆ ಉಳಿದ ಎಲ್ಲಾ ಪ್ರಾಜೆಕ್ಟ್​ಗಳ ಕೆಲಸವನ್ನು ಮುಂದೂಡುವಂತೆ ಅವರು ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಪ್ರಚಾರದ ಮಧ್ಯೆಯೂ ಅವರು ಉಳಿದ ಪ್ರಾಜೆಕ್ಟ್​ಗಳ ಕೆಲಸಗಳನ್ನು ಮುಂದುವರಿಸಬಹುದು. ಆದರೆ, ಇದರಿಂದ ಅವರ ಆರೋಗ್ಯದ ಮೇಲೆ ಬೇರೆಯದೇ ರೀತಿಯ ಪರಿಣಾಮ ಉಂಟಾಗಬಹುದು.

ಜ್ಯೂ.ಎನ್​ಟಿಆರ್​ ಇತ್ತೀಚೆಗೆ ಸಣ್ಣ ಪ್ರಮಾಣದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದರಿಂದ ಅವರು ಕೊಂಚ ವಿಶ್ರಾಂತಿ ಪಡೆಯಬೇಕಿದೆ. ವಿಶ್ರಾಂತಿ ನಂತರದಲ್ಲಿ ‘ಆರ್​ಆರ್​ಆರ್​’ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಲಿದ್ದಾರೆ. ಈ ನಡುವೆ ಬೇರೆ ಸಿನಿಮಾಗಳ ಕೆಲಸ ಮಾಡೋದು ಎಂದರೆ ಅದು ತುಂಬಾನೇ ಶ್ರಮದಾಯಕವಾಗಲಿದೆ. ಈ ಕಾರಣಕ್ಕೆ ಜ್ಯೂ.ಎನ್​ಟಿಆರ್​ ಅವರು ಉಳಿದ ಪ್ರಾಜೆಕ್ಟ್​ಗಳ ಕೆಲಸವನ್ನು 2022ಕ್ಕೆ ಮುಂದೂಡಿದ್ದಾರೆ.

ಜ್ಯೂ.ಎನ್​ಟಿಆರ್​ ಅವರು ಜಾಹೀರಾತು ಶೂಟಿಂಗ್​ಗಾಗಿ ಮುಂಬೈಗೆ ತೆರಳಬೇಕಿತ್ತು. ಆದರೆ, ಆ ಕೆಲಸವನ್ನು ಸದ್ಯಕ್ಕೆ ಹೋಲ್ಡ್​ನಲ್ಲಿ ಇರಿಸಿದ್ದಾರೆ. ಇನ್ನು, ಕೊರಟಾಲ ಶಿವ ಜತೆ ಜ್ಯೂ.ಎನ್​ಟಿಆರ್​ ಸಿನಿಮಾ ಮಾಡುತ್ತಿದ್ದಾರೆ. ಇದೇ ತಿಂಗಳಲ್ಲಿ ಈ ಸಿನಿಮಾ ಮುಹೂರ್ತ ನಡೆಯಬೇಕಿತ್ತು. ಅದನ್ನು ಕೂಡ ಜ್ಯೂ.ಎನ್​ಟಿಆರ್​ 2021ಕ್ಕೆ ಪೋಸ್ಟ್​ಪೋನ್​ ಮಾಡಿದ್ದಾರೆ.

ನೈಜ ಘಟನೆ ಆಧರಿಸಿ ‘ಆರ್​ಆರ್​ಆರ್​’ ಸಿನಿಮಾ ತಯಾರಾಗಿದೆ. ಖ್ಯಾತ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಿಂದೆ ‘ದೋಸ್ತಿ..’ ಹಾಡು ಬಿಡುಗಡೆ ಆಗಿತ್ತು. ಇತ್ತೀಚೆಗೆ ರಿಲೀಸ್​ ಆದ  ಎರಡನೇ ಗೀತೆ ‘ಹಳ್ಳಿ ನಾಟು..’ ಎಲ್ಲೆಲ್ಲೂ ರಾರಾಜಿಸುತ್ತಿದೆ. ಈ ಹಾಡಿನಿಂದಾಗಿ ಚಿತ್ರದ ಮೇಲಿನ ಕ್ರೇಜ್​ ಹೆಚ್ಚುವಂತಾಗಿದೆ. 2022ರ ಜ.7ರಂದು ಈ ಸಿನಿಮಾ ಅದ್ದೂರಿಯಾಗಿ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಆ ದಿನಕ್ಕಾಗಿ ಸಿನಿಪ್ರಿಯರು ಕಾದು ಕುಳಿತಿದ್ದಾರೆ.

ಇದನ್ನೂ ಓದಿ: Naatu Naatu Song: ‘ಆರ್​ಆರ್​ಆರ್​’ ಚಿತ್ರದ ‘ಹಳ್ಳಿ ನಾಟು..’ ಹಾಡಿನಲ್ಲಿ ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಮಸ್ತ್​ ಡ್ಯಾನ್ಸ್​

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ