ಅಂದುಕೊಂಡ ಸಮಯಕ್ಕೆ ಬರಲ್ಲ ನೀಲ್- ಎನ್​ಟಿಆರ್ ಸಿನಿಮಾ?

ಜೂನಿಯರ್ ಎನ್​ಟಿಆರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ಸಿನಿಮಾ ನಿರೀಕ್ಷಿತ ದಿನಾಂಕಕ್ಕೆ ತೆರೆ ಕಾಣುವುದು ಕಷ್ಟಕರವಾಗಿದೆ. ಜೂನ್‌ನಲ್ಲಿ ಬಿಡುಗಡೆಯಾಗಬೇಕಿದ್ದ ಚಿತ್ರ ಇದೀಗ ದೀಪಾವಳಿ ಅಥವಾ ಕ್ರಿಸ್‌ಮಸ್‌ಗೆ ಮುಂದೂಡಿಕೆಯಾಗುವ ಸಾಧ್ಯತೆಯಿದೆ. ಚಿತ್ರೀಕರಣ ಇನ್ನೂ ಪೂರ್ಣಗೊಂಡಿಲ್ಲ. ಜೋರ್ಡಾನ್‌ನಲ್ಲಿ ಅಂತಿಮ ಹಂತದ ಚಿತ್ರೀಕರಣ ನಡೆಯುತ್ತಿದೆ .

ಅಂದುಕೊಂಡ ಸಮಯಕ್ಕೆ ಬರಲ್ಲ ನೀಲ್- ಎನ್​ಟಿಆರ್ ಸಿನಿಮಾ?
ಪ್ರಶಾಂತ್-ಜೂನಿಯರ್ ಎನ್​​ಟಿಆರ್

Updated on: Feb 18, 2026 | 7:33 AM

ಸಾಮಾನ್ಯವಾಗಿ ಬಿಗ್ ಬಜೆಟ್ ಸಿನಿಮಾಗಳನ್ನು ಕೈಗೆತ್ತಿಕೊಂಡಾಗ ಅದನ್ನು ಅಂದುಕೊಂಡ ದಿನಾಂಕದಂದು ತೆರೆಗೆ ತರೋದು ಅಸಾಧ್ಯ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೂ ಕೆಲವರು ಆ ಬಗ್ಗೆ ಸಾಕಷ್ಟು ಪ್ರಯತ್ನ ಮಾಡುತ್ತಾರೆ. ಆದರೆ, ಇದು ಅಷ್ಟು ಸುಲಭ ಅಲ್ಲ. ಈಗ ಜೂನಿಯರ್ ಎನ್​​ಟಿಆರ್ (Jr NTR) ಸಿನಿಮಾ ವಿಷಯದಲ್ಲೂ ಹಾಗೆಯೇ ಆಗಿದೆ. ಸಿನಿಮಾ ಅಂದುಕೊಂಡ ದಿನಾಂಕದಂದು ತೆರೆಗೆ ತರಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ. ಹೀಗಾಗಿ, ದೀಪಾವಳಿ ಅಥವಾ ಕ್ರಿಸ್​​ಮಸ್ ಸಂದರ್ಭದಲ್ಲಿ ಚಿತ್ರವನ್ನು ತೆರೆಗೆ ತರುವ ಬಗ್ಗೆ ತಂಡ ಪ್ಲ್ಯಾನ್ ಮಾಡಿದೆ.

ಜೂನಿಯರ್ ಎನ್​​ಟಿಆರ್ ಹಾಗೂ ಪ್ರಶಾಂತ್ ನೀಲ್ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಜೂನ್ ತಿಂಗಳಲ್ಲಿ ತೆರೆಗೆ ಬರಲಿದೆ ಎಂದು ಈ ಮೊದಲು ಘೋಷಣೆ ಮಾಡಲಾಗಿತ್ತು. ಆದರೆ, ಇನ್ನೂ ಸಿನಿಮಾದ ಶೂಟ್ ಪೂರ್ಣಗೊಂಡಿಲ್ಲ. ಸದ್ಯ ತಂಡ ಜೋರ್ಡನ್ ಅಲ್ಲಿದ್ದು, ಕೊನೆಯ ಹಂತದ ಶೂಟ್​​ನಲ್ಲಿ ತೊಡಗಿಕೊಂಡಿದೆ. ಆ ಬಳಿಕ ತಂಡ ಹೈದರಾಬಾದ್​​ಗೆ ಮರಳಲಿದೆ.

ಜೋರ್ಡನ್ ಅಲ್ಲಿ ನಡೆಯೋದು ಕೊನೆಯ ಹಂತದ ಔಟ್​​ಡೋರ್ ಶೂಟ್. ನಂತರ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ಇಂಡೋರ್ ಶೂಟ್ ನಡೆಯಲಿದೆಯಂತೆ. ಅದಕ್ಕೂ ಸ್ವಲ್ಪ ಸಮಯ ಹಿಡಿಯಲಿದೆ. ಇದೆಲ್ಲ ಸೇರಿದರೆ ಇನ್ನೂ ಎರಡು ತಿಂಗಳು ಶೂಟಿಂಗ್​​ಗೆ ಸಮಯ ವ್ಯರ್ಥ ಆಗಲಿದೆ. ಹೀಗಾಗಿ, ಜೂನ್ ಸಮಯಕ್ಕೆ ಸಿನಿಮಾ ರಿಲೀಸ್ ಆಗೋದು ಅನುಮಾನ ಎನ್ನಲಾಗುತ್ತಿದೆ.

ಈ ಮೊದಲು ಸಿನಿಮಾ ಬಗ್ಗೆ ಸಾಕಷ್ಟು ನೆಗೆಟಿವ್ ಮಾತುಗಳು ಕೇಳಿ ಬಂದಿದ್ದವು. ಸಿನಿಮಾ ದೃಶ್ಯಗಳ ಬಗ್ಗೆ ಜೂನಿಯರ್ ಎನ್​​ಟಿಆರ್ ಅವರಿಗೆ ಖುಷಿ ಇಲ್ಲ ಎಂದು ಹೇಳಲಾಗಿತ್ತು. ಆದರೆ, ಅದು ಸುಳ್ಳಾಗಿದೆ. ಸಿನಿಮಾ ವಿಳಂಬವಾದರೂ ಟ್ರ್ಯಾಕ್​​ನಲ್ಲಿ ಇದೆಯಲ್ಲ ಎಂಬ ಖುಷಿಯಲ್ಲಿ ಅಭಿಮಾನಿಗಳು ಇದ್ದಾರೆ.

ಇದನ್ನೂ ಓದಿ: ಜೂ ಎನ್​​ಟಿಆರ್ ಸಿನಿಮಾಕ್ಕೆ ಬಾಲಿವುಡ್​​ ನಟನ ಕರೆತಂದ ಪ್ರಶಾಂತ್ ನೀಲ್: ಯಾರದು?

ಪ್ರಶಾಂತ್ ನೀಲ್ ನಿರ್ದೇಶನದ ಕೊನೆಯ ಸಿನಿಮಾ ‘ಸಲಾರ್’ ಸಾಧಾರಣ ಎನಿಸಿಕೊಂಡಿತು. ಈ ಚಿತ್ರದ ಮೂಲಕ ಅವರಿಗೆ ಗೆಲ್ಲುವ ಅನಿವಾರ್ಯತೆ ಇದೆ. ಅವರು ಡಾರ್ಕ್​ ಸ್ಟೈಲ್​ ಅಲ್ಲಿ ಸಿನಿಮಾ ಮಾಡೋ ಬಗ್ಗೆ ಕೆಲವರಿಗೆ ಅಸಮಾಧಾನ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:32 am, Wed, 18 February 26

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us