ಅಮೆರಿಕದಲ್ಲೂ ‘ಆರ್​​ಆರ್​ಆರ್​’ ಅಬ್ಬರ; ರಾಜಮೌಳಿ ಚಿತ್ರಕ್ಕೆ ಸಿಗುತ್ತಿರುವ ಚಿತ್ರಮಂದಿರಗಳೆಷ್ಟು?

RRR Movie: ಒಂದು ಸಾವಿರಕ್ಕೂ ಹೆಚ್ಚು ಸ್ಕ್ರೀನ್​ಗಳಲ್ಲಿ ‘ಆರ್​ಆರ್​ಆರ್​’ ಸಿನಿಮಾ ಪ್ರದರ್ಶನ ಕಾಣಲಿದೆ. ಭಾರತೀಯ ಸಿನಿಮಾಕ್ಕೆ ಅಮೆರಿಕದಲ್ಲಿ ಈ ಪರಿ ಓಪನಿಂಗ್​ ಸಿಗುತ್ತಿರುವುದು ನೋಡಿ ಎಲ್ಲರೂ ಕಣ್ಣರಳಿಸುತ್ತಿದ್ದಾರೆ.

ಅಮೆರಿಕದಲ್ಲೂ ‘ಆರ್​​ಆರ್​ಆರ್​’ ಅಬ್ಬರ; ರಾಜಮೌಳಿ ಚಿತ್ರಕ್ಕೆ ಸಿಗುತ್ತಿರುವ ಚಿತ್ರಮಂದಿರಗಳೆಷ್ಟು?
ರಾಮ್​ ಚರಣ್​, ಜ್ಯೂ. ಎನ್​ಟಿಆರ್​
Follow us
TV9 Web
| Updated By: ಮದನ್​ ಕುಮಾರ್​

Updated on: Nov 21, 2021 | 8:10 AM

ನಿರ್ದೇಶಕ ರಾಜಮೌಳಿ (Rajamouli) ಅವರು ಎಲ್ಲ ಭಾಷೆಯ ಗಡಿಯನ್ನು ಮೀರಿ ಬೆಳೆದಿದ್ದಾರೆ. ಅವರು ನಿರ್ದೇಶನ ಮಾಡುವ ಚಿತ್ರಗಳನ್ನು ಎಲ್ಲ ಭಾಷೆಯ ಜನರೂ ನೋಡಿ ಎಂಜಾಯ್ ಮಾಡುತ್ತಾರೆ. ಆಂಧ್ರ, ತೆಲಂಗಾಣ ಮಾತ್ರವಲ್ಲದೇ ಬೇರೆ ರಾಜ್ಯ ಮತ್ತು ದೇಶಗಳಲ್ಲೂ ಅವರು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ‘ಬಾಹುಬಲಿ’ ಬಳಿಕ ಅವರು ನಿರ್ದೇಶನ ಮಾಡಿರುವ ‘ಆರ್​ಆರ್​ಆರ್​’ ಚಿತ್ರ (RRR Movie) ಈಗಾಗಲೇ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ. ಈ ಚಿತ್ರದ ಬಿಡುಗಡೆ ದಿನಾಂಕ (RRR Release Date) ಹತ್ತಿರ ಆಗುತ್ತಿದೆ. ಜ್ಯೂ. ಎನ್​ಟಿಆರ್ (Jr NTR)​ ಮತ್ತು ರಾಮ್​ ಚರಣ್​ (Ram Charan) ಮುಖ್ಯಭೂಮಿಕೆ ನಿಭಾಯಿಸಿರುವ ‘ಆರ್​ಆರ್​ಆರ್​’ ಚಿತ್ರ ಜ.7ರಂದು ಅದ್ದೂರಿಯಾಗಿ ವಿಶ್ವಾದ್ಯಂತ ತೆರೆಕಾಣಲಿದೆ. ಹಾಗಾದರೆ ಎಷ್ಟು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣಲಿದೆ ಎಂಬ ಕೌತುಕ ಎಲ್ಲರಲ್ಲೂ ಇದೆ. ಭಾರತದಲ್ಲಿ ‘ಆರ್​ಆರ್​ಆರ್​’ ಚಿತ್ರ ಎಲ್ಲ ಥಿಯೇಟರ್​ಗಳನ್ನು ಆಕ್ರಮಿಸಿಕೊಳ್ಳುವುದರಲ್ಲಿ ಅನುಮಾನವಿಲ್ಲ. ಅಚ್ಚರಿ ಎಂದರೆ, ಅಮೆರಿಕದಲ್ಲೂ ಈ ಚಿತ್ರಕ್ಕೆ ಸಾವಿರಾರು ಸ್ಕ್ರೀನ್​ಗಳು ಮೀಸಲಾಗಿವೆ.

ಅಮೆರಿಕದಲ್ಲಿ ‘ಸಿನಿಮಾರ್ಕ್​ ಮಲ್ಟಿಪ್ಲೆಕ್ಸ್​’ ದೊಡ್ಡ ಉದ್ಯಮವಾಗಿದೆ. ಬಹುತೇಕ ಎಲ್ಲ ‘ಸಿನಿಮಾರ್ಕ್​ ಮಲ್ಟಿಪ್ಲೆಕ್ಸ್​’ಗಳಲ್ಲೂ ‘ಆರ್​ಆರ್​ಆರ್​’ ಚಿತ್ರವನ್ನು ಪ್ರದರ್ಶನ ಮಾಡಲು ನಿರ್ಧರಿಸಲಾಗಿದೆ. 288 ಮಲ್ಟಿಪ್ಲೆಕ್ಸ್​ಗಳನ್ನೂ ಸೇರಿ ಒಂದು ಸಾವಿರಕ್ಕೂ ಹೆಚ್ಚು ಸ್ಕ್ರೀನ್​ಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣಲಿದೆ. ಭಾರತೀಯ ಸಿನಿಮಾಕ್ಕೆ ಅಮೆರಿಕದಲ್ಲಿ ಈ ಪರಿ ಓಪನಿಂಗ್​ ಸಿಗುತ್ತಿರುವುದು ನೋಡಿ ಎಲ್ಲರೂ ಕಣ್ಣರಳಿಸುತ್ತಿದ್ದಾರೆ.

ಈ ಚಿತ್ರಕ್ಕೆ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ ಮಾಡಿದ್ದು, ಈಗಾಗಲೇ ಹಾಡುಗಳು ಸದ್ದು ಮಾಡುತ್ತಿವೆ. ಇತ್ತೀಚೆಗೆ ಈ ಸಿನಿಮಾದಿಂದ ಹೊಸದೊಂದು ಲಿರಿಕಲ್​ ಸಾಂಗ್​ ರಿಲೀಸ್​ ಆಯಿತು. ‘ನಾಟು ನಾಟು..’ ಗೀತೆಯು 5 ಭಾಷೆಗಳಲ್ಲಿ ಮೂಡಿಬಂದಿದೆ. ಕನ್ನಡ ವರ್ಷನ್​ ‘ಹಳ್ಳಿ ನಾಟು..’ ಹಾಡು ಕೂಡ ಭರ್ಜರಿ ಸೌಂಡು ಮಾಡುತ್ತಿದೆ. ಡ್ಯಾನ್ಸ್​ ವಿಚಾರದಲ್ಲಿ ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಒಬ್ಬರಿಗೊಬ್ಬರು ಪೈಪೋಟಿ ನೀಡಿದ್ದಾರೆ. ಅಭಿಮಾನಿಗಳಿಂದ ಈ ಗೀತೆಗೆ ಸಖತ್​ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ಸಿನಿಮಾದ ಟೀಸರ್​ ಕೂಡ ಧೂಳೆಬ್ಬಿಸಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಟೀಸರ್​ 37 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿತ್ತು. ಭಾರತೀಯ ಸಿನಿಮಾ ಜಗತ್ತಿನಲ್ಲಿ ಮಾಂತ್ರಿಕ ಎಂದೇ ಕರೆಸಿಕೊಳ್ಳುವ ನಿರ್ದೇಶಕ ರಾಜಮೌಳಿ ಅವರು ‘ಆರ್​ಆರ್​ಆರ್​’ ಸಿನಿಮಾ ಮೂಲಕ ಮತ್ತೆ ಮೋಡಿ ಮಾಡುವುದು ಖಚಿತ ಎಂಬುದಕ್ಕೆ ಈ ಟೀಸರ್​ ಸಾಕ್ಷಿ ಒದಗಿಸಿದೆ. ಅದ್ದೂರಿ ಸೆಟ್​ಗಳು, ಭರ್ಜರಿ ಆ್ಯಕ್ಷನ್​ ದೃಶ್ಯಗಳು, ಅತ್ಯಾಧುನಿಕ ವಿಎಫ್​ಎಕ್ಸ್​ ಸೇರಿದಂತೆ ಹಲವು ಅಂಶಗಳು ‘ಆರ್​ಆರ್​ಆರ್​’ ಸಿನಿಮಾದಲ್ಲಿ ಹೈಲೈಟ್​ ಆಗಲಿವೆ.

ಇದನ್ನೂ ಓದಿ:

ಆರ್​ಆರ್​ಆರ್​ ಚಿತ್ರದ ಪ್ರಮೋಷನ್​ಗಾಗಿ ದೊಡ್ಡ ತ್ಯಾಗಕ್ಕೆ ಸಿದ್ಧರಾದ ಜ್ಯೂ.ಎನ್​ಟಿಆರ್​

ಅಪರೂಪದ ಫೋಟೋಗಳ ಮೂಲಕ ಸಿನಿಮಾ ಮಾಂತ್ರಿಕನಿಗೆ ‘ಆರ್​ಆರ್​ಆರ್​’ ತಂಡದ ವಿಶ್​

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ