ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ ಟಾಲಿವುಡ್​ ಸ್ಟಾರ್​ ಜೂ. ಎನ್​ಟಿಆರ್​

ಎಸ್​.ಎಸ್​. ರಾಜಮೌಳಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಆಲಿಯಾ ಭಟ್​, ಜೂ. ಎನ್​ಟಿಆರ್​, ರಾಮ್​ ಚರಣ್​, ರಾಜಮೌಳಿ, ಅಜಯ್​ ದೇವಗನ್​ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ ಟಾಲಿವುಡ್​ ಸ್ಟಾರ್​ ಜೂ. ಎನ್​ಟಿಆರ್​
ಜೂ. ಎನ್​ಟಿಆರ್​
Follow us
ರಾಜೇಶ್ ದುಗ್ಗುಮನೆ
|

Updated on: May 06, 2021 | 6:17 PM

ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ನಿತ್ಯ ಸುಮಾರು 4 ಲಕ್ಷ ಕೊರೊನಾ ಕೇಸ್​ಗಳು ಭಾರತದಲ್ಲಿ ವರದಿ ಆಗುತ್ತಿವೆ. ಬೆಡ್​ಗಳು ಸಿಗದೇ ಸಾಕಷ್ಟು ಜನರು ಒದ್ದಾಡುತ್ತಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದೆ. ಕೊರೊನಾ ಹೆಚ್ಚದಂತೆ ತಡೆಯಲು ಸಾಕಷ್ಟು ಜನರು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಈಗ ಎಸ್​.ಎಸ್​​. ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ತಂಡ ಕೂಡ ಇದೇ ಮಾದರಿಯ ಕೆಲಸದಲ್ಲಿ ತೊಡಗಿದೆ. ವಿಶೇಷ ಎಂದರೆ, ಚಿತ್ರತಂಡದ ಪ್ರತಿಯೊಬ್ಬರೂ ಬೇರೆ ಬೇರೆ ಭಾಷೆಯಲ್ಲಿ ಮಾತನಾಡಿದ್ದಾರೆ.

ಎಸ್​.ಎಸ್​. ರಾಜಮೌಳಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಆಲಿಯಾ ಭಟ್​, ಜೂ. ಎನ್​ಟಿಆರ್​, ರಾಮ್​ ಚರಣ್​, ರಾಜಮೌಳಿ, ಅಜಯ್​ ದೇವಗನ್​ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ವಿಡಿಯೋದಲ್ಲಿ ಕನ್ನಡದಲ್ಲಿ ಮಾತನಾಡಿರುವ ಜೂ.ಎನ್​ಟಿಆರ್​, ಎಲ್ಲರಿಗೂ ನಮಸ್ಕಾರ. ಕೋವಿಡ್​ ವಿರುದ್ಧದ ಹೋರಾಟದಲ್ಲಿ ಮಾಸ್ಕ್ ಹಾಗೂ​ ಸ್ಯಾನಿಟೈಸರ್​ ದೊಡ್ಡ ಅಸ್ತ್ರವಾಗಿದೆ. ಸದಾ ಮಾಸ್ಕ್​ ಧರಿಸಿ. ಕೈ ಸ್ವಚ್ಛವಾಗಿಟ್ಟುಕೊಳ್ಳಿ. ಪಬ್ಲಿಕ್​ನಲ್ಲಿ ಓಡಾಡುವಾಗ ಅಂತರ ಕಾಯ್ದುಕೊಳ್ಳಿ. ಮಾಸ್ಕ್​ ಧರಿಸುವುದಾಗಿ ಹಾಗೂ ವ್ಯಾಕ್ಸಿನ್​ ಹಾಕಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿ ಎಂದು ಕೋರಿದ್ದಾರೆ.

View this post on Instagram

A post shared by SS Rajamouli (@ssrajamouli)

ಅಕ್ಟೋಬರ್​ 13ರಂದು ಆರ್​ಆರ್​ಆರ್​ ಚಿತ್ರ ತೆರೆಗೆ ತರುವುದಾಗಿ ರಾಜಮೌಳಿ ಘೋಷಣೆ ಮಾಡಿದ್ದರು. ಈ ವಿಚಾರ ಕೇಳಿ ಅಭಿಮಾನಿಗಳು ಕೂಡ ಸಖತ್​ ಖುಷಿಯಾಗಿದ್ದರು. ಆದರೆ, ಈಗ ಅಭಿಮಾನಿಗಳಿಗೆ ಬ್ಯಾಡ್​ನ್ಯೂಸ್ ಒಂದು ಸಿಕ್ಕಿದೆ. ಆರ್​ಆರ್​ಆರ್​ ಸಿನಿಮಾ ರಿಲೀಸ್​ ದಿನಾಂಕ 2022ಕ್ಕೆ ಮುಂದೂಡಲ್ಪಟ್ಟಿದೆಯಂತೆ. ಆರ್​ಆರ್​ಆರ್​​ ಸಿನಿಮಾದ ಮೇಲೆ ಭಾರೀ ನಿರೀಕ್ಷೆ ಇದೆ. 2015ರಲ್ಲಿ ಬಾಹುಬಲಿ ಸಿನಿಮಾ ತೆರೆಕಂಡಿತ್ತು. ಇದಾದ ಎರಡೇ ವರ್ಷಕ್ಕೆ ಬಾಹುಬಲಿ 2 ಸಿನಿಮಾ ತೆರೆಕಂಡಿತ್ತು. ಈ ಸಿನಿಮಾ ತೆರೆಕಂಡು ನಾಲ್ಕು ವರ್ಷಗಳೇ ಕಳೆದಿವೆ. ಈಗ ರಾಜಮೌಳಿ ಅವರ ಮುಂದಿನ ಚಿತ್ರದ ಬಗ್ಗೆ ಭಾರೀ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಆದರೆ, ಪದೇಪದೇ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿರುವುದು ಅಭಿಮಾನಿಗಳಿಗೆ ಬೇಸರ ಉಂಟಾಗುತ್ತಿದೆ.

ಇದನ್ನೂ ಓದಿ: ಉಲ್ಟಾಪಲ್ಟಾ ಆಯ್ತು ರಾಜಮೌಳಿ ಲೆಕ್ಕಾಚಾರ; ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಬೇಸರ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್