AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಯ ಕೊನೆ ಆಸೆ ಈಡೇರಿಸಲು ಮುಂದಾದ ಜೂ ಎನ್​ಟಿಆರ್

ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ನೋಡುವ ಕೊನೆಯಾಸೆ ವ್ಯಕ್ತಪಡಿಸಿದ್ದ ಕ್ಯಾನ್ಸರ್ ಪೀಡಿತ ಅಭಿಮಾನಿಯೊಟ್ಟಿಗೆ ಜೂ ಎನ್​ಟಿಆರ್ ಇಂದು ವಿಡಿಯೋ ಕಾಲ್ ಮೂಲಕ ಮಾತನಾಡಿದ್ದಾರೆ.

ಅಭಿಮಾನಿಯ ಕೊನೆ ಆಸೆ ಈಡೇರಿಸಲು ಮುಂದಾದ ಜೂ ಎನ್​ಟಿಆರ್
ಮಂಜುನಾಥ ಸಿ.
|

Updated on:Sep 15, 2024 | 6:40 AM

Share

ತೆಲುಗಿನಲ್ಲಿ ಅತಿ ಹೆಚ್ಚು ಸಂಖ್ಯೆಯ ಅಭಿಮಾನಿಗಳಲ್ಲಿ ಹೊಂದಿರುವ ಕೆಲವೇ ನಟರಲ್ಲಿ ಜೂ ಎನ್​ಟಿಆರ್ ಸಹ ಒಬ್ಬರು. ಜೂ ಎನ್​ಟಿಆರ್ ಅಭಿಮಾನಿಗಳು ಬರೀ ಅಭಿಮಾನಿಗಳಲ್ಲ, ವೀರಾಭಿಮಾನಿಗಳು. ಇದೀಗ ಕೆಲವೇ ದಿನಗಳಲ್ಲಿ ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಬಿಡುಗಡೆ ಆಗಲಿದೆ. ಅಭಿಮಾನಿಗಳು, ಸಿನಿಮಾವನ್ನು ಸ್ವಾಗತಿಸಲು ಸಜ್ಜಾಗಿದ್ದಾರೆ. ಆದರೆ ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿರುವ ಜೂ ಎನ್​ಟಿಆರ್ ಅಭಿಮಾನಿಯೊಬ್ಬ, ‘ದೇವರ’ ಸಿನಿಮಾ ನೋಡಬೇಕೆಂಬ ಕೊನೆ ಆಸೆ ವ್ಯಕ್ತಪಡಿಸಿದ್ದಾನೆ. ಆ ಅಭಿಮಾನಿಯೊಟ್ಟಿಗೆ ಸ್ವತಃ ‘ದೇವರ’ ಮಾತನಾಡಿದ್ದಾನೆ.

ತಿರುಪತಿಯ ಕೌಶಿಕ್​ ರಕ್ತದ ಕ್ಯಾನ್ಸರ್​ನಿಂದ ಬಳಲುತ್ತಿದ್ದು, ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೌಶಿಕ್ ಜೀವ ಸಹಿತ ಉಳಿಯುವುದು ಅನುಮಾನ ಎನ್ನಲಾಗುತ್ತಿದ್ದು, ಆತ, ತನ್ನ ಪೋಷಕರ ಬಳಿ, ‘ದೇವರ’ ಸಿನಿಮಾ ಬಿಡುಗಡೆ ಆಗುವವರೆಗೆ ನನ್ನನ್ನು ಉಳಿಸಿಕೊಳ್ಳಿ, ಆ ಸಿನಿಮಾ ನೋಡಿದ ಬಳಿಕ ಸಾಯುತ್ತೇನೆ ಎಂದು ಮನವಿ ಮಾಡಿದ್ದಾನೆ. ಈ ವಿಷಯವನ್ನು ಕೌಶಿಕ್​ನ ಪೋಷಕರು ಮಾಧ್ಯಮಗಳ ಬಳಿ ಹೇಳಿದ್ದರು. ಈ ವಿಷಯ ಜೂ ಎನ್​ಟಿಆರ್​ಗೆ ತಲುಪಬೇಕೆಂದು ಸುದ್ದಿಗೋಷ್ಠಿ ಮಾಡುತ್ತಿರುವುದಾಗಿ ಹೇಳಿದ್ದರು.

ಇದನ್ನೂ ಓದಿ:ಮತ್ತೆ ಪ್ರಾರಂಭ ಕಪಿಲ್ ಶೋ, ಜೂ ಎನ್​ಟಿಆರ್ ಸೇರಿ ಹಲವು ಅತಿಥಿಗಳು, ಇಲ್ಲಿದೆ ಪಟ್ಟಿ

ಇದೀಗ ಸ್ವತಃ ಜೂ ಎನ್​ಟಿಆರ್, ಸಾವಿನ ಮನೆಯ ಬಾಗಿಲು ಬಡಿಯುತ್ತಿರುವ ತನ್ನ ಅಭಿಮಾನಿ ಕೌಶಿಕ್​ ಜೊತೆ ಮಾತನಾಡಿದ್ದಾರೆ. ಕೌಶಿಕ್​ಗೆ ವಿಡಿಯೋ ಕಾಲ್ ಮಾಡಿದ್ದ ಜೂ ಎನ್​ಟಿಆರ್, ಕೌಶಿಕ್​ಗೆ ಧೈರ್ಯ ಹೇಳಿದ್ದಾರೆ. ಅವರ ತಾಯಿಯೊಟ್ಟಿಗೂ ಸಹ ಮಾತನಾಡಿದ್ದಾರೆ. ಕೌಶಿಕ್​ಗೆ ಚಿಕಿತ್ಸೆ ಪಡೆದುಕೊಳ್ಳುವಂತೆ ಹೇಳಿದ್ದು, ವೈದ್ಯರು ಅನುಮತಿ ನೀಡಿದರೆ ಸಿನಿಮಾ ತೋರಿಸುವ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಜೂ ಎನ್​ಟಿಆರ್, ಕೌಶಿಕ್​ ಜೊತೆಗೆ ಮಾತನಾಡುತ್ತಿರುವ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾದ ಮೊದಲ ಭಾಗ ಸೆಪ್ಟೆಂಬರ್ 27ಕ್ಕೆ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಎರಡು ಶೇಡ್​ಗಳಲ್ಲಿ ಜೂ ಎನ್​ಟಿಆರ್ ನಟಿಸಿದ್ದಾರೆ. ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ. ನಿರ್ಮಾಣ ಮಾಡಿರುವುದು ಜೂ ಎನ್​ಟಿಆರ್ ಸಹೋದರ ಕಲ್ಯಾಣ್ ರಾಮ್. ಸಿನಿಮಾದಲ್ಲಿ ಜಾನ್ಹವಿ ಕಪೂರ್ ನಾಯಕಿ, ಸೈಫ್ ಅಲಿ ಖಾನ್ ವಿಲನ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:52 pm, Sat, 14 September 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್