Jr NTR Birthday: ಜ್ಯೂ. ಎನ್​ಟಿಆರ್​ಗೆ ಜನ್ಮದಿನದ ಸಂಭ್ರಮ; ಟಾಲಿವುಡ್​ ಹೀರೋಗೆ ಸಿಕ್ತಿದೆ ಭರ್ಜರಿ ಗಿಫ್ಟ್​

ಈ ವಿಶೇಷ ದಿನದಂದು ಅಭಿಮಾನಿಗಳು ಹಾಗೂ ಚಿತ್ರತಂಡದ ಕಡೆಯಿಂದ ಜ್ಯೂ. ಎನ್​ಟಿಆರ್​ಗೆ ದೊಡ್ಡ ಗಿಫ್ಟ್​ ಸಿಗುತ್ತಿದೆ. ಇನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ.  

Jr NTR Birthday: ಜ್ಯೂ. ಎನ್​ಟಿಆರ್​ಗೆ ಜನ್ಮದಿನದ ಸಂಭ್ರಮ; ಟಾಲಿವುಡ್​ ಹೀರೋಗೆ ಸಿಕ್ತಿದೆ ಭರ್ಜರಿ ಗಿಫ್ಟ್​
ಜೂ. ಎನ್​ಟಿಆರ್
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on:May 20, 2021 | 7:28 AM

ಟಾಲಿವುಡ್​ ಸ್ಟಾರ್​ ನಟ ಜ್ಯೂ. ಎನ್​ಟಿಆರ್​ಗೆ ಇಂದು (ಮೇ 20) ಜನ್ಮದಿನದ ಸಂಭ್ರಮ. ಅವರು ಇಂದು 38ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ವಿಶೇಷ ದಿನದಂದು ಅಭಿಮಾನಿಗಳು ಹಾಗೂ ಚಿತ್ರತಂಡದ ಕಡೆಯಿಂದ ಅವರಿಗೆ ದೊಡ್ಡ ಗಿಫ್ಟ್​ ಸಿಗುತ್ತಿದೆ. ಇನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ.  

 ಕೋಮರಾಮ ಭೀಮನ ಹೊಸ ಅವತಾರ

ಎಸ್​​.ಎಸ್​. ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಈ ಚಿತ್ರದಲ್ಲಿ ಕೋಮರಾಮ ಭೀಮನಾಗಿ ಜ್ಯೂ. ಎನ್​ಟಿಆರ್​ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಹೊಸ ಲುಕ್​ ಇಂದು ರಿಲೀಸ್​ ಆಗಲಿದೆ. ಸ್ಟಾರ್​ಗಳ ಜನ್ಮದಿನ ಎಂದರೆ ಚಿತ್ರತಂಡದಿಂದ ಅಭಿಮಾನಿಗಳಿಗೆ ಉಡುಗರೆ ನೀಡುವ ಸಂಪ್ರದಾಯ ಈ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಇದನ್ನು ಆರ್​ಆರ್​ಆರ್​ ತಂಡ ಕೂಡ ಮುಂದುವರಿಸಿಕೊಂಡು ಹೋಗುತ್ತಿದೆ. ಹೀಗಾಗಿ, ಅಭಿಮಾನಿಗಳು ಈ ಬಗ್ಗೆ ಸಾಕಷ್ಟು ನಿರೀಕ್ಷ ಇಟ್ಟುಕೊಂಡಿದ್ದಾರೆ.

 ಅಭಿಮಾನಿಗಳಿಂದ ಕಾಮನ್​ ಡಿಪಿ ಅಭಿಯಾನ

ಅಭಿಮಾನಿಗಳು ತಮ್ಮ ನೆಚ್ಚಿನ ಜನ್ಮದಿನವನ್ನು ಹಬ್ಬದಂತೆ ಆಚರಣೆ ಮಾಡುತ್ತಾರೆ. ಜ್ಯೂ. ಎನ್​ಟಿಆರ್​ಗೆ ದೊಡ್ಡ ಅಭಿಮಾನಿ ಬಳಗವಿದೆ. ಅವರು 38ನೇ ಜನ್ಮದಿನದ ಅಂಗವಾಗಿ ಕಾಮನ್​ ಡಿಪಿ ಅಭಿಯಾನ ಆರಂಭವಾಗಿದೆ. ಕಾಮನ್​ ಡಿಪಿ ಒಂದನ್ನು ಬಿಡುಗಡೆ ಮಾಡಲಾಗಿದ್ದು, ಇಂದು ಅವರ ಅಭಿಮಾನಿಗಳು ಈ ಫೋಟೋವನ್ನು ಡಿಪಿಗೆ ಹಾಕಿಕೊಂಡು ಸಂಭ್ರಮಿಸುತ್ತಿದ್ದಾರೆ.

ಸಂಭ್ರಮಾಚರಣೆಗಿಲ್ಲ ಅವಕಾಶ

ಪ್ರತಿ ಬಾರಿ ಜ್ಯೂ. ಎನ್​ಟಿಆರ್​ ಜನ್ಮದಿನವನ್ನು ಅಭಿಮಾನಿಗಳು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದರು. ಕಟೌಟ್ ನಿಲ್ಲಿಸಿ, ಹಾಲಿನ ಅಭಿಷೇಕ ಮಾಡುತ್ತಿದ್ದರು. ಕೆಲವರು ಅನ್ನದಾನ ಹಾಗೂ ರಕ್ತದಾನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದರು. ಆದರೆ, ಕೊವಿಡ್​ನಿಂದ ಇದೆಲ್ಲವಕ್ಕೂ ಬ್ರೇಕ್​ ಬಿದ್ದಿದೆ. ಹೀಗಾಗಿ, ಜನ್ಮದಿನದ ಅಂಗವಾಗಿ ಯಾವುದೇ ಸಂಭ್ರಮಾಚರಣೆ ಇರುವುದಿಲ್ಲ. ಕಳೆದ ಬಾರಿಯೂ ಈ ಸಂದರ್ಭದಲ್ಲಿ ಕೊವಿಡ್​ ಅಧಿಕವಾಗಿತ್ತು. ಹೀಗಾಗಿ, ಬರ್ತ್​ಡೇ ಆಚರಣೆಗೆ ಅವಕಾಶ ಸಿಕ್ಕಿರಲಿಲ್ಲ. ಈ ಬಾರಿ ಅದು ಮರುಕಳಿಸಿದೆ.

 ಶುಭಾಶಯಗಳ ಮಹಾಪೂರ

ಜ್ಯೂ. ಎನ್​ಟಿಆರ್​ ಜನ್ಮದಿನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಅನೇಕ ಸ್ಟಾರ್​​ಗಳು ಜ್ಯೂ. ಎನ್​ಟಿಆರ್​ಗೆ ವಿಶ್​ ಮಾಡಿದ್ದಾರೆ. ಇನ್ನು, ಅವರ ಫೋಟೋಗಳನ್ನು ಹಾಕಿಕೊಂಡು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲೇ ಸಂಭ್ರಮಾಚರಣೆ ಮಾಡುತ್ತಿದ್ದಾರೆ.

Published On - 7:25 am, Thu, 20 May 21

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ