‘ಧುರಂಧರ್ 2’ ಚಿತ್ರದ ಖ್ಯಾತ ನಟನಿಗೆ ಸಿನಿಮಾ ಅವಕಾಶ ಕೊಟ್ಟ ಪ್ರಶಾಂತ್ ನೀಲ್

ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಅವರ ಮುಂದಿನ ಸಿನಿಮಾ ಜೂ.ಎನ್​ಟಿಆರ್ ಜೊತೆಗಿದೆ. ಈ ಬಹುನಿರೀಕ್ಷಿತ ಚಿತ್ರಕ್ಕೆ ‘ಧುರಂಧರ್’ ಖ್ಯಾತಿಯ ನಟ ಬಿಮಲ್ ಓಬೆರಾಯ್ ವಿಲನ್ ಆಗಿ ಎಂಟ್ರಿ ಕೊಟ್ಟಿದ್ದಾರೆ ಎನ್ನಲಾಗಿದೆ. ‘ಡ್ರ್ಯಾಗನ್’ ಎಂದು ತಾತ್ಕಾಲಿಕವಾಗಿ ಹೆಸರಿಡಲಾದ ಈ ಆಕ್ಷನ್ ಸಿನಿಮಾದಲ್ಲಿ ಬಿಮಲ್ ಅವರ ಪಾತ್ರದ ಕುರಿತು ಕುತೂಹಲ ಮೂಡಿದೆ.

‘ಧುರಂಧರ್ 2’ ಚಿತ್ರದ ಖ್ಯಾತ ನಟನಿಗೆ ಸಿನಿಮಾ ಅವಕಾಶ ಕೊಟ್ಟ ಪ್ರಶಾಂತ್ ನೀಲ್
ಪ್ರಶಾಂತ್ ನೀಲ್-ಧುರಂಧರ್ ನಟ

Updated on: Apr 03, 2026 | 12:10 PM

ಪ್ರಶಾಂತ್ ನೀಲ್ ಅವರು ‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಬಳಿಕ ದೊಡ್ಡ ಗೆಲುವು ಕಂಡರು. ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆಯಿತು. ಈ ಸಿನಿಮಾ ಬಳಿಕ ಪ್ರಶಾಂತ್ ನೀಲ್ ಅವರು ತೆಲುಗು ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ. ಪ್ರಶಾಂತ್ ನೀಲ್ ಅವರು ಸದ್ಯ ಜೂನಿಯರ್ ಎನ್​​​ಟಿಆರ್ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಈ ಚಿತ್ರಕ್ಕೆ ‘ಧುರಂಧರ್’ ನಟನ ಎಂಟ್ರಿ ಆಗಿದೆ. ಅದೂ ವಿಲನ್ ಆಗಿ ಎನ್ನಲಾಗುತ್ತಿದೆ.

‘ಧುರಂಧರ್’ ಹಾಗೂ ‘ಧುಂಧರ್ 2’ ಚಿತ್ರವನ್ನು ಆದಿತ್ಯ ಧಾರ್ ಅವರು ನಿರ್ದೇಶನ ಮಾಡಿದರು. ಈ ಎರಡೂ ಚಿತ್ರಗಳು ಮೆಚ್ಚುಗೆ ಪಡೆದಿವೆ. ‘ಧುರಂಧರ್’ ಸಿನಿಮಾ 1300 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದರೆ, ‘ಧುರಂದರ್ 2’ ಸಿನಿಮಾ 2 ಸಾವಿರ ಕೋಟಿ ರೂಪಾಯಿ ಗಳಿಕೆ ಮಾಡುವ ಸಾಧ್ಯತೆ ಇದೆ. ಈ ಚಿತ್ರದಲ್ಲಿ ಶಿರಾನಿ ಬಲೂಚ್ ಪಾತ್ರದಲ್ಲಿ ಬಿಮಲ್ ಓಬೆರಾಯ್ ಕಾಣಿಸಿಕೊಂಡಿದ್ದರು.

‘ಧುರಂಧರ್’ ಸಿನಿಮಾದಲ್ಲಿ ಬಿಮಲ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.‘ಧುರಂಧರ್ 2’ ಚಿತ್ರದ ಕ್ಲೈಮ್ಯಾಕ್ಸ್ ಅಲ್ಲಿ ಅವರ ಪಾತ್ರ ಪ್ರಾಮುಖ್ಯತೆ ಪಡೆದುಕೊಂಡಿದೆ. ಅವರು ಹಮ್ಜಾಗೆ ಸಹಾಯ ಮಾಡುವ ರೀತಿಯಲ್ಲಿ ಕಾಣಿಸಿಕೊಂಡಿದ್ದರು. ಈಗ ಅವರು ಪ್ರಶಾಂತ್ ನೀಲ್ ಸಿನಿಮಾದಲ್ಲಿ ಆಫರ್ ಪಡೆದಿದ್ದಾರೆ.

ಇದನ್ನೂ ಓದಿ: ಜೂ ಎನ್​​ಟಿಆರ್-ನೀಲ್ ಸಿನಿಮಾಕ್ಕೆ ಜೊತೆಯಾದ ಹಾಲಿವುಡ್ ತಂಡ

ಜೂನಿಯರ್ ಎನ್​​ಟಿಆರ್ ಸಿನಿಮಾ ಎಂದರೆ ಆ್ಯಕ್ಷನ್ ಜೋರಾಗಿಯೇ ಇರುತ್ತದೆ. ಈ ಚಿತ್ರಕ್ಕೆ ‘ಡ್ರ್ಯಾಗನ್’ ಎಂದು ಟೈಟಲ್ ಇಡಲಾಗಿದೆ ಎಂದು ಹೇಳಲಾಗಿದೆ.ಈ ಸಿನಿಮಾದಲ್ಲಿ ಬಿಮಲ್ ಅವರು ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು ಎನ್ನಲಾಗುತ್ತಿದೆ. ಈ ಸಿನಿಮಾದಲ್ಲಿ ಅವರ ಪಾತ್ರದ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಯಲಿದೆ.

ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​​ಟಿಆರ್ ಸಿನಿಮಾದ ಶೂಟ್ ಭರದಿಂದ ಸಾಗುತ್ತಿದೆ. ಈ ಚಿತ್ರವನ್ನು ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣ ಮಾಡುತ್ತಿದೆ. ಚಿತ್ರದ ಶೂಟ್ ನಿರಂತರವಾಗಿ ವಿಳಂಬ ಆಗುತ್ತಿದೆ, ಸಿನಿಮಾ ನಿಂತು ಹೋಗುತ್ತದೆ ಎಂಬೆಲ್ಲ ವರದಿ ಇದ್ದವು. ಅದ್ಯಾವುದೂ ಸತ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us