ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮಕ್ಕೆ ಜಸ್ಟಿನ್ ಬೀಬರ್; ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಗ್ಯಾರಂಟಿ
ಜಸ್ಟಿನ್ ಬೀಬರ್ ಅವರು ಜುಲೈ 4ರಂದು ಮುಂಬೈಗೆ ಆಗಮಿಸಿದ್ದಾರೆ. 30 ವರ್ಷದ ಈ ಗಾಯಕ ಒಂದು ದಿನದ ಕಾರ್ಯಕ್ರಮಕ್ಕೆ ಚಾರ್ಜ್ ಮಾಡುತ್ತಿರುವ ಹಣದ ಮೊತ್ತ ಕೇಳಿ ಅನೇಕರು ದಂಗಾಗಿದ್ದಾರೆ. ಇವರು ಸುಮಾರು ಬರೋಬ್ಬರಿ 83.51 ಕೋಟಿ ರೂಪಾಯಿ ಚಾರ್ಜ್ ಮಾಡಿದ್ದಾರೆ.
ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರ ಕಿರಿಯ ಮಗ ಅನಂತ್ ಅಂಬಾನಿ ಮದುವೆ ಅದ್ದೂರಿಯಾಗಿ ನೆರವೇರುತ್ತಿದೆ. ಅವರು ರಾಧಿಕಾ ಮರ್ಚಂಟ್ನ ಜುಲೈ 12ರಂದು ವಿವಾಹ ಆಗಲಿದ್ದಾರೆ. ಇಂದು (ಜುಲೈ 5) ಮುಂಬೈನಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ಬಾಲಿವುಡ್ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ. ಅನೇಕ ಅಂತಾರಾಷ್ಟ್ರೀಯ ಸಿಂಗರ್ಗಳು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಕೆನಡಾದ ಖ್ಯಾತ ಗಾಯಕ ಜಸ್ಟಿನ್ ಬೀಬರ್ ಕೂಡ ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಅವರು ಸಂಗೀತ ಕಾರ್ಯಕ್ರಮದಲ್ಲಿ ಹಾಡನ್ನು ಹಾಡಲಿದ್ದಾರೆ. ಇದಕ್ಕೆ ಅವರು ಪಡೆದ ಸಂಭಾವನೆ ವಿಚಾರ ಅನೇಕರಿಗೆ ಅಚ್ಚರಿ ಮೂಡಿಸಿದೆ.
ಜುಲೈ 4ರಂದು ಜಸ್ಟಿನ್ ಬೀಬರ್ ಅವರು ಮುಂಬೈಗೆ ಆಗಮಿಸಿದ್ದಾರೆ. 30 ವರ್ಷದ ಈ ಗಾಯಕ ಒಂದು ದಿನದ ಕಾರ್ಯಕ್ರಮಕ್ಕೆ ಚಾರ್ಜ್ ಮಾಡುತ್ತಿರುವ ಹಣದ ಮೊತ್ತ ಕೇಳಿ ಅನೇಕರು ದಂಗಾಗಿದ್ದಾರೆ. ಇವರು ಸುಮಾರು 10 ಮಿಲಿಯನ್ ಅಮೆರಿಕನ್ ಡಾಲರ್ ಚಾರ್ಜ್ ಮಾಡಿದ್ದಾರೆ. ಅಂದರೆ ಭಾರತದ ರೂಪಾಯಿಗೆ ಲೆಕ್ಕ ಹಾಕಿದರೆ ಅವರ ಸಂಭಾವನೆ ಬರೋಬ್ಬರಿ 83.51 ಕೋಟಿ ರೂಪಾಯಿ.
ರಾಧಿಕಾ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅನೇಕ ವಿದೇಶಿ ಗಾಯಕರು ಹಾಡಿದ್ದಾರೆ. ವಿವಾಹ ಪೂರ್ವ ಕಾರ್ಯಕ್ರಮಗಳೇ ಇಷ್ಟೊಂದು ಅದ್ದೂರಿಯಾಗಿ ನಡೆದಿರುವಾಗ ಇನ್ನು ವಿವಾಹ ಪೂರ್ವ ಕಾರ್ಯಕ್ರಮಗಳಲ್ಲೂ ಅದ್ದೂರಿತನ ಇರುವುದರಲ್ಲಿ ಯಾವುದೇ ಅಚ್ಚರಿ ಇಲ್ಲ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ.
ಇದನ್ನೂ ಓದಿ: ಮುಖದ ಪಾರ್ಶ್ವವಾಯುಗೆ ಕೋವಿಡ್-19 ಲಸಿಕೆ ಕಾರಣ ಎಂದು ಹೇಳಿದ್ದಾರೆಯೇ ಜಸ್ಟಿನ್ ಬೀಬರ್?
ಜಸ್ಟಿನ್ ಬೀಬರ್ಗೆ ಸಾಕಷ್ಟು ಜನಪ್ರಿಯತೆ ಇದೆ. ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ 29.3 ಕೋಟಿ ಹಿಂಬಾಲಕರು ಇದ್ದಾರೆ. ಇದು ಅವರ ಜನಪ್ರಿಯತೆಗೆ ಹಿಡಿದ ಸಾಕ್ಷಿ. 2022ರಲ್ಲಿ ಜಸ್ಟಿನ್ ಬೀಬರ್ ಮುಖಕ್ಕೆ ಪಾರ್ಶವಾಯು ಆಗಿತ್ತು. ಹೀಗಾಗಿ ಅವರ ಅನೇಕ ಶೋಗಳು ಕ್ಯಾನ್ಸಲ್ ಆಗಿತ್ತು. ಈಗ ಅವರು ಇದರಿಂದ ಚೇತರಿಕೆ ಕಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.