Leena Manimekalai: ಕಾಳಿ ಪೋಸ್ಟರ್​ ವಿವಾದ; ನಿರ್ದೇಶಕಿ ಲೀನಾ ಮಣಿಮೇಕಲೈಗೆ ಸಮನ್ಸ್​ ನೀಡಿದ ದೆಹಲಿ ಕೋರ್ಟ್​

Kaali Poster Controversy: ‘ಕಾಳಿ’ ಡಾಕ್ಯುಮೆಂಟರಿ ನಿರ್ದೇಶಕಿ ಲೀನಾ ಮಣಿಮೇಕಲೈ ವಿರುದ್ಧ ಹಲವು ದೂರುಗಳು ದಾಖಲಾಗಿವೆ. ನವೆಂಬರ್​ 1ರಂದು ಅವರು ವಿಚಾರಣೆ ಎದುರಿಸಬೇಕಿದೆ.

Leena Manimekalai: ಕಾಳಿ ಪೋಸ್ಟರ್​ ವಿವಾದ; ನಿರ್ದೇಶಕಿ ಲೀನಾ ಮಣಿಮೇಕಲೈಗೆ ಸಮನ್ಸ್​ ನೀಡಿದ ದೆಹಲಿ ಕೋರ್ಟ್​
ಲೀನಾ ಮಣಿಮೇಕಲೈ
Follow us
TV9 Web
| Updated By: ಮದನ್​ ಕುಮಾರ್​

Updated on:Aug 31, 2022 | 7:35 AM

ಸಾಕ್ಷ್ಯಚಿತ್ರಗಳ ನಿರ್ದೇಶಕಿ ಲೀನಾ ಮಣಿಮೇಕಲೈ (Leena Manimekalai) ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಅವರು ನಿರ್ದೇಶನ ಮಾಡಿದ ‘ಕಾಳಿ’ (Kaali) ಡಾಕ್ಯುಮೆಂಟರಿ ಹಲವು ವಿವಾದಗಳನ್ನು (Kaali Poster Controversy) ಸೃಷ್ಟಿಸಿದೆ. ಇದರ ಪೋಸ್ಟರ್​ನಲ್ಲಿ ಕಾಣಿ ದೇವತೆಯ ಫೋಟೋವನ್ನು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂದು ಅನೇಕ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಈ ಹಿನ್ನೆಲೆಯಲ್ಲಿ ಹಲವು ದೂರುಗಳು ಕೂಡ ದಾಖಲಾಗಿದ್ದು, ಈಗ ವಿಚಾರಣೆಗೆ ಹಾಜರಾಗುವಂತೆ ದೆಹಲಿಯ ತೀಸ್​ ಹಜಾರಿ ಕೋರ್ಟ್​ ಸಮನ್ಸ್​ ನೀಡಿದೆ. ಲೀನಾ ಮಣಿಮೇಕಲೈ ಅವರು ನವೆಂಬರ್​ 1ರಂದು ವಿಚಾರಣೆ ಎದುರಿಸಬೇಕಿದೆ.

‘ಕಾಳಿ’ ಸಾಕ್ಷ್ಯಚಿತ್ರದ ಪೋಸ್ಟರ್​ನಲ್ಲಿ ಕಾಳಿ ದೇವತೆಯನ್ನು ಆಕ್ಷೇಪಾರ್ಹ ರೀತಿಯಲ್ಲಿ ಚಿತ್ರಿಸಲಾಗಿದೆ. ಅದಕ್ಕೆ ತಡೆ ನೀಡಬೇಕು ಎಂದು ದೂರುದಾರರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಈ ಪೋಸ್ಟರ್​ನಿಂದ ಹಿಂದೂಗಳ ಭಾವನೆಗೆ ಧಕ್ಕೆ ಆಗಿದೆ ಎಂದು ಅನೇಕರು ಆರೋಪಿಸಿದ್ದಾರೆ. ದೆಹಲಿ ಮಾತ್ರವಲ್ಲದೇ ಹಲವು ಕಡೆಗಳಲ್ಲಿ ನಿರ್ದೇಶಕಿ ಲೀನಾ ಮಣಿಮೇಕಲೈ ವಿರುದ್ಧ ಕೇಸ್​ಗಳು ದಾಖಲಾಗಿವೆ. ಈ ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆಯೇ ಟೊರಾಂಟೋ ಆಗಾ ಮ್ಯೂಸಿಯಮ್​ನಲ್ಲಿ ಬಿತ್ತರವಾದ ವಿವಾದಿತ ಕಾಳಿ ಪೋಸ್ಟರ್​ ಅನ್ನು ತೆಗೆದುಹಾಕುವಂತೆ ಕೆನಡಾದ ಇಂಡಿಯನ್​ ಹೈ ಕಮಿಷನ್​ ಆದೇಶಿಸಿತ್ತು.

ಪೋಸ್ಟರ್​ನಲ್ಲಿರುವ ವಿವಾದಿತ ಅಂಶಗಳೇನು?

ಇದನ್ನೂ ಓದಿ
Image
Leena Manimekalai: ಕಾಳಿ ಬಳಿಕ ಶಿವ, ಪಾರ್ವತಿ ವೇಷಧಾರಿಗಳು ಧೂಮಪಾನ ಮಾಡುತ್ತಿರುವ ಫೋಟೋ ಹಾಕಿದ ಲೀನಾ ಮಣಿಮೇಕಲೈ
Image
ಕಾಳಿ ಪೋಸ್ಟರ್ ವಿವಾದ: ನಿರ್ದೇಶಕಿ ಲೀನಾ ಮಣಿಮೇಕಲೈಗೆ ‘ಶಿರಚ್ಛೇದ’ ಬೆದರಿಕೆಯೊಡ್ಡಿದ ಅಯೋಧ್ಯೆಯ ಪುರೋಹಿತ
Image
Kaali Documentary: ಕಾಳಿ ದೇವಿಗೆ ಅವಮಾನ: ಭಾರಿ ವಿರೋಧದ ಬಳಿಕ ನಿರ್ದೇಶಕಿ ಲೀನಾ ಮಣಿಮೇಕಲೈ ಟ್ವೀಟ್​ಗೆ ತಡೆ
Image
Leena Manimekalai: ಕಾಳಿ ದೇವಿಗೆ ಅವಮಾನ ಮಾಡಿದ ಲೀನಾ ಮಣಿಮೇಕಲೈ ಯಾರು? ವಿವಾದ ಎಬ್ಬಿಸಿದ ಡೈರೆಕ್ಟರ್​ ಹಿನ್ನೆಲೆ ಇಲ್ಲಿದೆ

ಜುಲೈ 4ರಂದು ಲೀನಾ ಮಣಿಮೇಕಲೈ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ‘ಕಾಳಿ’ ಪೋಸ್ಟರ್​ ಶೇರ್​ ಮಾಡಿಕೊಂಡರು. ಕೂಡಲೇ ಅದು ವೈರಲ್​ ಆಯಿತು. ಕಾಳಿ ದೇವತೆ ಸಿಗರೇಟ್​ ಸೇದುತ್ತಿರುವ ರೀತಿಯಲ್ಲಿ ಪೋಸ್ಟರ್​ ವಿನ್ಯಾಸ ಮಾಡಲಾಗಿದೆ. ದೇವಿಯ ಇನ್ನೊಂದು ಕೈಯಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಧ್ವಜ ನೀಡಲಾಗಿದೆ. ಬಿಟ್ಟಿ ಪ್ರಚಾರ ಪಡೆಯುವ ಉದ್ದೇಶದಿಂದಲೇ ಲೀನಾ ಮಣಿಮೇಕಲೈ ಅವರು ಈ ರೀತಿ ಪೋಸ್ಟರ್​ ಬಳಸಿಕೊಂಡಿದ್ದಾರೆ ಎಂಬುದು ಹಲವರ ಆರೋಪ.

ಲೀನಾ ಮಣಿಮೇಕಲೈ ಅವರು ತಮ್ಮದೇ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಅದರ ಮೂಲಕ ಹಲವು ಪ್ರಯೋಗಗಳನ್ನು ಅವರು ಮಾಡಿದ್ದಾರೆ. ಅನೇಕ ಸಾಕ್ಷ್ಯಚಿತ್ರಗಳನ್ನು ನಿರ್ದೇಶಿಸಿ ಅವರು ಗುರುತಿಸಿಕೊಂಡಿದ್ದಾರೆ. ಹಲವಾರು ಚಿತ್ರೋತ್ಸವಗಳಲ್ಲಿ ಅವರ ಡಾಕ್ಯುಮೆಂಟರಿಗಳು ಪ್ರದರ್ಶನ ಆಗಿದ್ದೂ ಅಲ್ಲದೇ ಒಂದಷ್ಟು ಪ್ರಶಸ್ತಿಗಳನ್ನು ಪಡೆದುಕೊಂಡಿವೆ.

ತಮಿಳುನಾಡಿನವರಾದ ಲೀನಾ ಮಣಿಮೇಕಲೈ ಅವರು 1995ರಲ್ಲಿ ಹೋಲಿ ಕ್ರಾಸ್​ ಕಾನ್ವೆಂಟ್​ನಲ್ಲಿ ಪ್ರೌಢ ಶಿಕ್ಷಣ ಪಡೆದರು. ಮದುರೈ ಕಾಮರಾಜರ್​ ಯೂನಿವರ್ಸಿಟಿಯಲ್ಲಿ ಅವರು ವಿದ್ಯಾಭ್ಯಾಸ ಮಾಡಿದರು. ‘ದಿ ಸ್ಕೂಲ್​ ಆಫ್​ ಓರಿಯಂಟಲ್​ & ಆಫ್ರಿಕನ್​ ಸ್ಟಡೀಸ್​’ ಮೂಲಕ ಅವರು 2012ರಲ್ಲಿ ಪದವಿ ಪಡೆದರು. ನಂತರ ಅವರು ಸಿನಿಮಾ ನಿರ್ಮಾಣ ಮತ್ತು ನಿರ್ದೇಶನದಲ್ಲಿ ತೊಡಗಿಕೊಂಡರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:35 am, Wed, 31 August 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ