AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

18ನೇ ದಿನವೂ ‘ಕಾಟೇರ’ ಅಬ್ಬರ; ಮಧ್ಯರಾತ್ರಿ 2 ಗಂಟೆ ಶೋ ಹೌಸ್​ಫುಲ್

ಸಂಕ್ರಾಂತಿ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಿನಿಮಾ ವೀಕ್ಷಿಸಿದ್ದಾರೆ. ‘ಸಂಕ್ರಾಂತಿಗೆ ಮತ್ತೊಮ್ಮೆ ಕಾಟೇರ’ ಹ್ಯಾಶ್​ಟ್ಯಾಗ್ ಟ್ವಿಟರ್​ನಲ್ಲಿ ಟ್ರೆಂಡ್ ಆಗಿತ್ತು.

18ನೇ ದಿನವೂ ‘ಕಾಟೇರ’ ಅಬ್ಬರ; ಮಧ್ಯರಾತ್ರಿ 2 ಗಂಟೆ ಶೋ ಹೌಸ್​ಫುಲ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Jan 16, 2024 | 11:56 AM

Share

‘ಕಾಟೇರ’ ಸಿನಿಮಾ (Kaatera Movie) ಅಬ್ಬರದ ಕಲೆಕ್ಷನ್ ಮಾಡಿದೆ. ದರ್ಶನ್ ಅವರ ಪವರ್​ಫುಲ್ ಆ್ಯಕ್ಟಿಂಗ್ ನೊಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಚಿತ್ರ ರಿಲೀಸ್ ಆಗಿ ಮೂರು ವಾರ ಕಳೆಯುತ್ತಾ ಬಂದಿದೆ. ಆದಾಗ್ಯೂ ಸಿನಿಮಾದ ಗಳಿಕೆ ತಗ್ಗುತ್ತಿಲ್ಲ. ಅಚ್ಚರಿ ವಿಚಾರ ಏನೆಂದರೆ ಸಂಕ್ರಾಂತಿ ಪ್ರಯುಕ್ತ ‘ಕಾಟೇರ’ ಸಿನಿಮಾಗೆ ಮಧ್ಯರಾತ್ರಿ ಎರಡು ಗಂಟೆ ಶೋ ಇಡಲಾಗಿತ್ತು. ಇದು ಕೂಡ ಹೌಸ್​ಫುಲ್ ಪ್ರದರ್ಶನ ಕಂಡಿದೆ. ಈ ಬಗ್ಗೆ ಫ್ಯಾನ್ ಪೇಜ್​ಗಳಲ್ಲಿ ಸುದ್ದಿ ಹರಿದಾಡುತ್ತಿದೆ.

‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ರಿಲೀಸ್ ಆಯಿತು. ಒಂದು ವಾರ ಮೊದಲು ರಿಲೀಸ್ ಆದ ‘ಸಲಾರ್’ ಹಾಗೂ ‘ಡಂಕಿ’ ಸಿನಿಮಾಗಳ ಅಬ್ಬರದ ನಡುವೆಯೂ ‘ಕಾಟೇರ’ ಉತ್ತಮ ಗಳಿಕೆ ಮಾಡಿತು. ಈಗಾಗಲೇ ಸಿನಿಮಾದ ಗಳಿಕೆ 200 ಕೋಟಿ ರೂಪಾಯಿ ಸಮೀಪಿಸಿದೆ. ಸಂಕ್ರಾಂತಿ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಿನಿಮಾ ನೋಡಿದ್ದಾರೆ. ‘ಸಂಕ್ರಾಂತಿಗೆ ಮತ್ತೊಮ್ಮೆ ಕಾಟೇರ’ ಹ್ಯಾಶ್​ಟ್ಯಾಗ್ ಟ್ವಿಟರ್​ನಲ್ಲಿ ಟ್ರೆಂಡ್ ಆಗಿತ್ತು.

ಯಾದಗಿರಿ ಜಿಲ್ಲೆಯ ಶಹಪುರದಲ್ಲಿ ಇತ್ತೀಚೆಗೆ ಮಧ್ಯರಾತ್ರಿ 2 ಗಂಟೆಗೆ ‘ಕಾಟೇರ’ ಶೋ ಪ್ರದರ್ಶಿಸಲಾಗಿದೆ. ಸಾಮಾನ್ಯವಾಗಿ ರಿಲೀಸ್ ದಿನ ಈ ರೀತಿ ಶೋ ಇಟ್ಟರೆ ಫ್ಯಾನ್ಸ್ ಬಂದು ವೀಕ್ಷಿಸುತ್ತಾರೆ. ಆದರೆ, ಸಿನಿಮಾ ರಿಲೀಸ್ ಆಗಿ 18 ದಿನ ಕಳೆದ ಬಳಿಕವೂ ಮಧ್ಯರಾತ್ರಿ ಶೋ ಹೌಸ್ ಫುಲ್ ಆಗಿದೆ ಅನ್ನೋದು ವಿಶೇಷ. ಇದು ‘ಕಾಟೇರ’ ಸಿನಿಮಾದ ಕ್ರೇಜ್ ತೋರಿಸುತ್ತದೆ.

ಇದನ್ನೂ ಓದಿ: ‘ಆ ಉದ್ದೇಶ ನಮಗೆ ಇರಲಿಲ್ಲ’: ‘ಕಾಟೇರ’ ಪಾರ್ಟಿ ಕೇಸ್​ ಬಗ್ಗೆ ರಾಕ್​ಲೈನ್​ ಮೊದಲ ಪ್ರತಿಕ್ರಿಯೆ

‘ಕಾಟೇರ’ ಚಿತ್ರವನ್ನು ತರುಣ್ ಸುಧೀರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವನ್ನು ರಾಕ್​ಲೈನ್ ವೆಂಕಟೇಶ್ ನಿರ್ಮಾಣ ಮಾಡಿದ್ದಾರೆ. ದರ್ಶನ್​ಗೆ ಮಾಲಾಶ್ರೀ ಮಗಳು ಆರಾಧನಾ ರಾಮ್ ಜೊತೆಯಾಗಿದ್ದಾರೆ. ಅಚ್ಯುತ್ ಕುಮಾರ್, ಜಗಪತಿ ಬಾಬು, ವೈಜನಾಥ್ ಬಿರಾದಾರ್, ಶ್ರುತಿ ಸೇರಿ ಅನೇಕರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ರೆಟ್ರೋ ಕಾಲದ ಕಥೆಯನ್ನು ತರುಣ್ ಉತ್ತಮವಾಗಿ ತೆರೆಮೇಲೆ ತಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು