‘ಕಾಟೇರ’ ಸಿನಿಮಾದ ಟಿಕೆಟ್​ ಖರೀದಿಸಿದ ನಟಿ ಆರಾಧನಾ ರಾಮ್​; ಫ್ಯಾನ್ಸ್​ ಜೊತೆ ವೀಕ್ಷಣೆ

Updated on: Dec 28, 2023 | 6:40 PM

ಬೆಂಗಳೂರಿನ ಜೆಪಿ ನಗರದ ಶ್ರೀ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಆರಾಧನಾ ಅವರು ‘ಕಾಟೇರ’ ಸಿನಿಮಾವನ್ನು ಅಭಿಮಾನಿಗಳ ಜೊತೆ ವೀಕ್ಷಿಸಲಿದ್ದಾರೆ. ಚಿತ್ರದ ಟಿಕೆಟ್​ ಪಡೆದಿರುವ ಅವರು ಖುಷಿಯಿಂದ ವಿಡಿಯೋ ಹಂಚಿಕೊಂಡಿದ್ದಾರೆ. ಈ ಸಿನಿಮಾಗೆ ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದಾರೆ. ಅನೇಕ ಚಿತ್ರಮಂದಿರಗಳಲ್ಲಿ ಮೊದಲ ದಿನದ ಟಿಕೆಟ್​ಗಳು ಸೋಲ್ಡ್​ಔಟ್​ ಆಗಿವೆ.

ಹಿರಿಯ ನಟಿ ಮಾಲಾಶ್ರಿ ಅವರ ಪುತ್ರಿ ಆರಾಧನಾ ರಾಮ್​ (Aradhana Ram) ಅವರು ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಅವರು ನಟಿಸಿದ ಮೊದಲ ಸಿನಿಮಾ ‘ಕಾಟೇರ’ (Kaatera) ಡಿಸೆಂಬರ್​ 29ರಂದು ಬಿಡುಗಡೆ ಆಗುತ್ತಿದೆ. ಚೊಚ್ಚಲ ಸಿನಿಮಾದಲ್ಲೇ ನಟ ದರ್ಶನ್​ಗೆ ಜೋಡಿಯಾಗಿ ನಟಿಸುವ ಅವಕಾಶವನ್ನು ಆರಾಧನಾ ಪಡೆದುಕೊಂಡಿದ್ದಾರೆ. ಹಾಗಾಗಿ ಅವರ ಪಾಲಿಗೆ ಈ ಸಿನಿಮಾ ವಿಶೇಷ ಎನಿಸಿಕೊಳ್ಳುತ್ತಿದೆ. ಬೆಂಗಳೂರಿನ ಜೆಪಿ ನಗರದ ಶ್ರೀ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಆರಾಧನಾ ಅವರು ‘ಕಾಟೇರ’ ಸಿನಿಮಾವನ್ನು ಅಭಿಮಾನಿಗಳ ಜೊತೆ ವೀಕ್ಷಿಸಲಿದ್ದಾರೆ. ಚಿತ್ರದ ಟಿಕೆಟ್​ (Kaatera Tickets) ಪಡೆದಿರುವ ಅವರು ಖುಷಿಯಿಂದ ವಿಡಿಯೋ ಹಂಚಿಕೊಂಡಿದ್ದಾರೆ. ಈ ಸಿನಿಮಾಗೆ ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದಾರೆ. ಅನೇಕ ಚಿತ್ರಮಂದಿರಗಳಲ್ಲಿ ಮೊದಲ ದಿನದ ಟಿಕೆಟ್​ಗಳು ಸೋಲ್ಡ್​ಔಟ್​ ಆಗಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More