ಬಾಲಿವುಡ್ನಲ್ಲಿ ಧೂಳೆಬ್ಬಿಸಲು ರೆಡಿಯಾದ ‘ಕಬ್ಜ’; ಹಿಂದಿ ವರ್ಷನ್ ಟೀಸರ್ ರಿಲೀಸ್ಗೆ ಮುಹೂರ್ತ ಫಿಕ್ಸ್
ನಟ ಉಪೇಂದ್ರ ಅಭಿನಯನದ 'ಕಬ್ಜ' ಸಿನಿಮಾದ ಹಿಂದಿ ಟೀಸರ್ ನಾಳೆ ಬಿಡುಗಡೆಯಾಗಲಿದ್ದು, ಈ ಕುರಿತಾಗಿ ನಿರ್ದೇಶಕ ಆರ್. ಚಂದ್ರು ಮಾಹಿತಿ ಹಂಚಿಕೊಂಡಿದ್ದಾರೆ.
ನಿರ್ದೇಶಕ ಆರ್.ಚಂದ್ರು ನಿರ್ದೇಶನದ ‘ಕಬ್ಜ’ ಸಿನಿಮಾ (Kabza Movie) ಒಂದಿಲ್ಲೊಂದು ವಿಚಾರವಾಗಿ ಸದ್ದು ಮಾಡುತ್ತಿದೆ. ಈಗ ಅದೇ ಸಿನಿಮಾದಿಂದ ಮತ್ತೊಂದು ಅಪ್ ಡೇಟ್ ಬಂದಿದೆ. ಅದ್ದೂರಿ ಬಜೆಟ್ನಲ್ಲಿ ಈ ಚಿತ್ರ ಮೂಡಿಬಂದಿದೆ. ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ತೆಲುಗು ಸೇರಿ ಒಟ್ಟು 7 ಭಾಷೆಗಳಲ್ಲಿ ‘ಕಬ್ಜ’ ಸಿನಿಮಾ ಬಿಡುಗಡೆ ಆಗಲಿದೆ. ಇತ್ತೀಚೆಗೆ ‘ಕಬ್ಜ’ ಸಿನಿಮಾದ ಮೊದಲ ಟೀಸರ್ ರಿಲೀಸ್ ಆಗಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದುಕೊಂಡಿತ್ತು. ಸಿನಿಮಾದ ಮೇಕಿಂಗ್ ಎಲ್ಲರ ಗಮನ ಸೆಳೆದಿತ್ತು. ಟೀಸರ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಎರಡು ಕೋಟಿ ವೀವ್ಸ್ ಪಡೆದುಕೊಂಡಿತ್ತು. ಈಗ ಹಿಂದಿ ಭಾಷೆಯ ಸರದಿಯಿದ್ದು, ನಾಳೆ ಹಿಂದಿಯಲ್ಲಿ ‘ಕಬ್ಜ’ ಟೀಸರ್ ಬಿಡುಗಡೆಯಾಗಲಿದೆ. ಈ ಕುರಿತಾಗಿ ನಿರ್ದೇಶಕ ಆರ್.ಚಂದ್ರು ಮಾಹಿತಿ ಹಂಚಿಕೊಂಡಿದ್ದಾರೆ.
ರೆಟ್ರೋ ಕಾಲದ ಭೂಗತ ಲೋಕದ ಕಥೆಯನ್ನು ‘ಕಬ್ಜ’ ಸಿನಿಮಾ ಹೊಂದಿರಲಿದೆ. ‘ಕಬ್ಜ’ ಸಿನಿಮಾದ ಹಿಂದಿ ಟೀಸರ್ ಬಿಡುಗಡೆ ಕುರಿತಾಗಿ ನಿರ್ದೇಶಕ ಮತ್ತು ನಿರ್ಮಾಪಕರಾದ ಆರ್.ಚಂದ್ರು ಮಾಹಿತಿ ನೀಡಿದ್ದಾರೆ. ಮಾಫಿಯಾ ಹಾಗೂ ಭೂಗತ ಲೋಕದ ಮತ್ತು ಆ್ಯಕ್ಷನ್ ಪ್ಯಾಕ್ಡ್ ‘ಕಬ್ಜ’ ಟೀಸರ್ ಹಿಂದಿ ಭಾಷೆಯಲ್ಲಿ ನಾಳೆ(ಡಿ.1) ಬಿಡುಗಡೆಯಾಗಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆರ್.ಚಂದ್ರು ಮಾಹಿತಿ ಹಂಚಿಕೊಂಡಿದ್ದಾರೆ.
Director & Producer R Chandru’s #Kabzaateaser indicates that Real Star Upendra revolves around the mafia and the underworld, and a high-stakes situation. The Action-Packed #KabzaaTeaserHindi will be releasing tomorrow.@nimmaupendra @KicchaSudeep @RaviBasrur @shriya1109 pic.twitter.com/aS5wozGuaD
— R.Chandru (@rchandru_movies) November 30, 2022
‘ಕಬ್ಜ’ ಚಿತ್ರ ಏಕಕಾಲಕ್ಕೆ ಹಲವು ಭಾಷೆಗಳಲ್ಲಿ ರಿಲೀಸ್ ಆಗಲಿದೆ. ಇತ್ತೀಚೆಗೆ ‘ಕಬ್ಜ’ ಹಿಂದಿ ವರ್ಷನ್ಗೆ ಸಾಕಷ್ಟು ಬೇಡಿಕೆ ಕೇಳಿಬಂದಿತ್ತು. ಅದರ ಬೆನ್ನಲ್ಲೇ ಹಿಂದಿ ಮಾರುಕಟ್ಟೆಯಲ್ಲಿ ಈ ಚಿತ್ರವನ್ನು ವಿತರಣೆ ಮಾಡಲು ಖ್ಯಾತ ನಿರ್ಮಾಪಕ/ವಿತರಕ ಆನಂದ್ ಪಂಡಿತ್ ಮುಂದೆ ಬಂದಿದ್ದು, ‘ಕಬ್ಜ’ ಚಿತ್ರದ ಹಿಂದಿ ವಿತರಣೆ ಹಕ್ಕುಗಳು ಅವರ ಪಾಲಾಗಿವೆ. ‘ಕಬ್ಜ’ ಸಿನಿಮಾದ ಹಿಂದಿ ವಿತರಣೆ ಹಕ್ಕುಗಳನ್ನು ಅವರು ಪಡೆದುಕೊಂಡಿರುವುದರಿಂದ ಬಾಲಿವುಡ್ ಪ್ರೇಕ್ಷಕರ ವಲಯದಲ್ಲಿ ನಿರೀಕ್ಷೆ ದುಪ್ಪಟ್ಟಾಗಿದೆ.
ಇದನ್ನೂ ಓದಿ: Kabzaa: ‘ಕಬ್ಜ’ ಚಿತ್ರದ ಹಿಂದಿ ವಿತರಣೆ ಹಕ್ಕು ಸೇಲ್; ಉಪ್ಪಿ ಸಿನಿಮಾಗೆ ಬಾಲಿವುಡ್ನಲ್ಲಿ ಭರ್ಜರಿ ಡಿಮ್ಯಾಂಡ್
ಉಪೇಂದ್ರ ಜೊತೆ ‘ಕಬ್ಜ’ ಚಿತ್ರದಲ್ಲಿ ಕಿಚ್ಚ ಸುದೀಪ್ ಕೂಡ ಈ ನಟಿಸಿದ್ದು, ಸಹಜವಾಗಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ನಾಯಕಿಯಾಗಿ ಶ್ರೀಯಾ ಶರಣ್ ನಟಿಸಿದ್ದಾರೆ. ಈ ಚಿತ್ರಕ್ಕೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಆದಷ್ಟು ಬೇಗ ರಿಲೀಸ್ ಡೇಟ್ ಅನೌನ್ಸ್ ಆಗಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ.
ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.