Kabzaa Tittle Song: ರಿಲೀಸ್ ಆಯ್ತು ‘ಕಬ್ಜ’ ಟೈಟಲ್ ಸಾಂಗ್​; ರವಿ ಬಸ್ರೂರ್ ಕಮಾಲ್

‘ಕೆಜಿಎಫ್’ ಸರಣಿಯಿಂದ ಹೊರ ಬಂದ ಎರಡೂ ಚಿತ್ರಗಳಿಗೆ ರವಿ ಬಸ್ರೂರ್ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಈ ಚಿತ್ರದ ಹಾಡುಗಳು ಹಿಟ್ ಆದವು. ಈಗ ‘ಕಬ್ಜ’ ಚಿತ್ರಕ್ಕೆ ರವಿ ಬಸ್ರೂರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

Follow us
ರಾಜೇಶ್ ದುಗ್ಗುಮನೆ
|

Updated on: Feb 04, 2023 | 7:59 PM

ಸಾಕಷ್ಟು ನಿರೀಕ್ಷೆ ಮೂಡಿಸಿರುವ ‘ಕಬ್ಜ’ ಸಿನಿಮಾದ (Kabzaa Movie) ಟೈಟಲ್ ಸಾಂಗ್ ಅದ್ದೂರಿ ಕಾರ್ಯಕ್ರಮದಲ್ಲಿ ಇಂದು ರಿಲೀಸ್ ಆಗಿದೆ. ಈ ಸಾಂಗ್ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಐದು ಭಾಷೆಗಳಲ್ಲಿ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ರವಿ ಬಸ್ರೂರ್ (Ravi Basrur) ಅವರ ಸಂಗೀತ ಸಂಯೋಜನೆ ಕಮಾಲ್ ಮಾಡಿದೆ. ಈ ಹಾಡಿನಿಂದ ಚಿತ್ರಕ್ಕೆ ಮತ್ತಷ್ಟು ಮೈಲೇಜ್ ಸಿಕ್ಕಿದೆ.

‘ಕೆಜಿಎಫ್’ ಸರಣಿಯಿಂದ ಹೊರ ಬಂದ ಎರಡೂ ಚಿತ್ರಗಳಿಗೆ ರವಿ ಬಸ್ರೂರ್ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಈ ಚಿತ್ರದ ಹಾಡುಗಳು ಹಿಟ್ ಆದವು. ಚಿತ್ರದ ಬಿಜಿಎಂಗೆ ಭರಪೂರ ಮೆಚ್ಚುಗೆ ಸಿಕ್ಕವು. ಈಗ ‘ಕಬ್ಜ’ ಚಿತ್ರಕ್ಕೆ ರವಿ ಬಸ್ರೂರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್​’ ರೀತಿಯೇ ‘ಕಬ್ಜ’ ಚಿತ್ರ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಈ ಎಲ್ಲಾ ಕಾರಣದಿಂದ ‘ಕಬ್ಜ’ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ.

ಇಂದು ಹೈದರಾಬಾದ್​ನಲ್ಲಿ ಅದ್ದೂರಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಹಲವು ದಿಗ್ಗಜರು ಬರುತ್ತಿದ್ದಾರೆ. ‘ಆರ್​ಆರ್​ಆರ್​’ ನಿರ್ದೇಶಕ ಎಸ್​.ಎಸ್​. ರಾಜಮೌಳಿ ಅವರು ಈ ಕಾರ್ಯಕ್ರಮಕ್ಕೆ ಆಗಮಿಸಬೇಕಿತ್ತು. ಆದರೆ, ಇತ್ತೀಚೆಗೆ ಕೆ. ವಿಶ್ವನಾಥ್ ಅವರು ನಿಧನ ಹೊಂದಿದರು. ಟಾಲಿವುಡ್​ನಲ್ಲಿ ಶೋಕದ ವಾತಾವರಣ ಇರುವುದರಿಂದ ಈ ಸೆಲೆಬ್ರಿಟಿಗಳು ಇಂದಿನ ಕಾರ್ಯಕ್ರಮಕ್ಕೆ ಹಾಜರಿ ಹಾಕಿಲ್ಲ. ಸದ್ಯ ರಿಲೀಸ್ ಆಗಿರುವ ಹಾಡಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರವಿ ಬಸ್ರೂರ್ ಅವರ ಸಂಗೀತ ಸಂಯೋಜನೆಯನ್ನು ಕೇಳುಗರು ಇಷ್ಟಪಟ್ಟಿದ್ದಾರೆ.

ಮಾರ್ಚ್ 17ಕ್ಕೆ ಸಿನಿಮಾ ರಿಲೀಸ್

ಮಾರ್ಚ್​ 17ಕ್ಕೆ ಕಬ್ಜ ಸಿನಿಮಾ ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರ ಪ್ಯಾನ್ ಇಂಡಿಯಾ ಆದ ಕಾರಣ ಎಲ್ಲ ನಗರಗಳಿಗೆ ತೆರಳಿ ಸಾಂಗ್ ರಿಲೀಸ್ ಮಾಡಲಾಗುತ್ತಿದೆ. ಟ್ರೇಲರ್ ರಿಲೀಸ್ ಕಾರ್ಯಕ್ರಮ ಕೂಡ ಜೋರಾಗಿಯೇ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ