AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಣ್ಣಪ್ಪ’ ಸಿನಿಮಾಕ್ಕೆ ಎಂಟ್ರಿ ಕೊಟ್ಟ ಕಾಜಲ್ ಅಗರ್ವಾಲ್: ಪಾತ್ರ ಯಾವುದು?

‘ಕಣ್ಣಪ್ಪ’ ತೆಲುಗು ಸಿನಿಮಾನಲ್ಲಿ ಈಗಾಗಲೇ ದೊಡ್ಡ ತಾರಾಬಳಗವಿದೆ. ಪ್ರಭಾಸ್, ಮಲಯಾಳಂನ ಸ್ಟಾರ್ ನಟ ಮೋಹನ್​ಲಾಲ್, ಬ್ರಹ್ಮಾನಂದಂ ಇನ್ನಿತರೆ ಸ್ಟಾರ್ ನಟರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೀಗ ಸ್ಟಾರ್ ನಟಿಯೊಬ್ಬರು ಚಿತ್ರತಂಡ ಸೇರಿಕೊಂಡಿದ್ದಾರೆ.

‘ಕಣ್ಣಪ್ಪ’ ಸಿನಿಮಾಕ್ಕೆ ಎಂಟ್ರಿ ಕೊಟ್ಟ ಕಾಜಲ್ ಅಗರ್ವಾಲ್: ಪಾತ್ರ ಯಾವುದು?
ಮಂಜುನಾಥ ಸಿ.
|

Updated on:May 19, 2024 | 9:32 AM

Share

ಕನ್ನಡ ಚಿತ್ರರಂಗದ ಐಕಾನಿಕ್ ಸಿನಿಮಾ ಎಂದು ಪರಿಗಣಿತವಾಗಿರುವ ‘ಬೇಡರ ಕಣ್ಣಪ್ಪ’ ಇದೀಗ ತೆಲುಗು ಚಿತ್ರರಂಗದಲ್ಲಿ ಹೊಸ ತಂತ್ರಜ್ಞಾನಗಳ ಸಹಾಯದಿಂದ ಅದ್ಧೂರಿಯಾಗಿ ನಿರ್ಮಾಣವಾಗುತ್ತಿದೆ. ಮಂಚು ವಿಷ್ಣು ಬೇಡರ ಕಣ್ಣಪ್ಪನಾಗಿ ನಟಿಸುತ್ತಿರುವ ಸಿನಿಮಾಕ್ಕೆ ‘ಕಣ್ಣಪ್ಪ’ (Kannappa) ಎಂದು ಹೆಸರಿಡಲಾಗಿದ್ದು, ಸಿನಿಮಾದಲ್ಲಿ ದೊಡ್ಡ ಸ್ಟಾರ್ ನಟರು, ನಟಿಯರು ನಟಿಸುತ್ತಿದ್ದಾರೆ. ಇದೀಗ ‘ಕಣ್ಣಪ್ಪ’ ಸಿನಿಮಾ ತಂಡವನ್ನು ತಾರಾ ನಟಿಯೊಬ್ಬರು ಸೇರ್ಪಡೆಗೊಂಡಿದ್ದಾರೆ ಅವರೇ ಕಾಜಲ್ ಅಗರ್ವಾಲ್.

ಪಾತ್ರವರ್ಗದ ವಿಚಾರವಾಗಿಯೇ ಸಾಕಷ್ಟು ಸದ್ದು ಮಾಡುತ್ತಿದೆ ತೆಲುಗಿನ ಸಿನಿಮಾ ಕಣ್ಣಪ್ಪ. ಮಂಚು ವಿಷ್ಣು, ಮೋಹನ್​ಲಾಲ್, ಪ್ರಭಾಸ್ ಇನ್ನಿತರೆ ಕೆಲವು ಸ್ಟಾರ್ ನಟರು ಈಗಾಗಲೇ ‘ಕಣ್ಣಪ್ಪ’ ಸಿನಿಮಾನಲ್ಲಿ ನಟಿಸುವುದು ಖಾತ್ರಿಯಾಗಿದೆ. ಇದೀಗ ಮತ್ತೋರ್ವ ಸ್ಟಾರ್‌ ‘ಕಣ್ಣಪ್ಪ’ ಸಿನಿಮಾ ತಂಡ ಸೇರಿಕೊಂಡಿದ್ದಾರೆ. ನಟಿ ಕಾಜಲ್‌ ಅಗರ್‌ವಾಲ್ ಇದೀಗ ‘ಕಣ್ಣಪ್ಪ’ ಸಿನಿಮಾ ತಂಡ ಸೇರಿಕೊಂಡಿದ್ದಾರೆ. ವಿಷ್ಣು ಮಂಚು ಮತ್ತು ಕಾಜಲ್ ಅಗರ್ವಾಲ್ ಈ ಹಿಂದೆ ತೆಲುಗಿನ ‘ಮೊಸಗಾಳ್ಳು’ ಚಿತ್ರದಲ್ಲಿ ಸಹೋದರ ಮತ್ತು ಸಹೋದರಿಯಾಗಿ ಕಾಣಿಸಿಕೊಂಡಿದ್ದರು. ಇದೀಗ ವಿಷ್ಣು ಮಂಚು ಅವರ ಬಹುನಿರೀಕ್ಷಿತ ಪ್ರಾಜೆಕ್ಟ್‌ ಕಣ್ಣಪ್ಪ ಚಿತ್ರಕ್ಕೂ ಆಗಮಿಸುವ ಮೂಲಕ ಎರಡನೇ ಸಲ ಒಂದಾಗುತ್ತಿದ್ದಾರೆ.

ಹಾಗಾದರೆ, ಕಾಜಲ್‌ ಅಗರ್‌ವಾಲ್‌ ಪಾತ್ರವೇನು? ಸದ್ಯಕ್ಕೆ ಆ ಬಗ್ಗೆ ಚಿತ್ರತಂಡ ರಿವೀಲ್‌ ಮಾಡಿಲ್ಲ. ಬದಲಿಗೆ ವಿಶೇಷವಾದ ಪಾತ್ರವೊಂದರಲ್ಲಿ ಕಾಜಲ್‌ ನಟಿಸುವ ಮೂಲಕ ಕಣ್ಣಪ್ಪ ಸಿನಿಮಾದ ಭಾಗವಾಗಲಿದ್ದಾರೆ. ನೂರಾರು ಕೋಟಿ ಬಜೆಟ್‌ನಲ್ಲಿ ದೊಡ್ಡ ಕ್ಯಾನ್ವಾಸ್‌ನೊಂದಿಗೆ ಮೂಡಿಬರುತ್ತಿರುವ ಈ ಸಿನಿಮಾದ ಶೂಟಿಂಗ್‌ ಸಹ ಅಷ್ಟೇ ಬಿರುಸಾಗಿಯೇ ನಡೆಯುತ್ತಿದೆ.

ಇದನ್ನೂ ಓದಿ:ಸಿನಿಮಾ ಪ್ರಚಾರಕ್ಕೆ ಮದುವೆ ವಿಚಾರ ಎಳೆತಂದ ಪ್ರಭಾಸ್​? ಸ್ಟೇಟಸ್​ ಅರ್ಥ ಏನು?

ಈ ಚಿತ್ರದಲ್ಲಿ ಮೋಹನ್ ಬಾಬು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್ ಮತ್ತು ಶರತ್‌ಕುಮಾರ್ ಸೇರಿ ಬಹು ತಾರಾಗಣವೇ ಇದೆ. ಇತ್ತೀಚೆಗಷ್ಟೇ ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಸಹ ಈ ಚಿತ್ರದ ಮೂಲಕ ಸೌತ್‌ ಕಡೆಗೆ ವಾಲಿದ್ದಾರೆ. ತಮ್ಮ ಭಾಗದ ಚಿತ್ರೀಕರಣವನ್ನೂ ಪೂರ್ಣಗೊಳಿಸಿದ್ದಾರೆ. ಪ್ರಭಾಸ್ ಸಹ ಕೆಲವು ದಿನಗಳ ಹಿಂದೆ ಕಣ್ಣಪ್ಪ ತಂಡವನ್ನು ಸೇರಿಕೊಂಡರು. ಈಗ ಕಾಜಲ್‌ ಅಗರ್‌ವಾಲ್‌ ಸರದಿ.

ಮೋಹನ್ ಬಾಬು ನಿರ್ಮಿಸುತ್ತಿರುವ ಕಣ್ಣಪ್ಪ ಚಿತ್ರವನ್ನು ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗು ಮಾತ್ರವಲ್ಲದೆ, ತಮಿಳು, ಕನ್ನಡ, ಮಲಯಾಳಂ, ಹಿಂದಿ ಸೇರಿ ಇನ್ನೂ ಹಲವು ಭಾರತೀಯ ಭಾಷೆಗಳಿಗೂ ಈ ಚಿತ್ರ ಡಬ್‌ ಆಗಿ ರಿಲೀಸ್‌ ಆಗಲಿದೆ. ಅದೇ ರೀತಿ ಚಿತ್ರೀಕರಣದ ಮುಕ್ತಾಯದ ಹಂತಕ್ಕೂ ಬಂದು ನಿಂತಿರುವ ಈ ಸಿನಿಮಾ ಇನ್ನೇನು ಶೀಘ್ರದಲ್ಲಿ ಬಿಡುಗಡೆ ದಿನಾಂಕವೂ ಘೋಷಣೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:19 pm, Sat, 18 May 24