Sign In

By signing in or creating an account, you agree with Associated Broadcasting Company's Terms & Conditions and Privacy Policy.

Kajal Aggarwal: ತಾಯಿಯಾಗಲಿದ್ದಾರೆ ಕಾಜಲ್; ಹೊಸ ಉತ್ಸಾಹದೊಂದಿಗೆ 2022ನ್ನು ಬರಮಾಡಿಕೊಂಡ ನಟಿ

ಇತ್ತೀಚೆಗಷ್ಟೇ ಕಾಜಲ್ ಹಾಗೂ ಗೌತಮ್ ದಂಪತಿ ವಿವಾಹ ವಾರ್ಷಿಕೋತ್ಸವ ಆಚರಿಸಿದ್ದರು. ಕಳೆದ ಕೆಲವು ಸಮಯದಿಂದ ಕಾಜಲ್ ಸದ್ಯದಲ್ಲೇ ತಾಯಿಯಾಗಲಿದ್ದಾರೆ ಎಂಬ ವಿಷಯ ಹರಿದಾಡಿತ್ತು. ಇದೀಗ ದಂಪತಿ ಅದನ್ನು ಖಚಿತಪಡಿಸಿದ್ದಾರೆ.

Kajal Aggarwal: ತಾಯಿಯಾಗಲಿದ್ದಾರೆ ಕಾಜಲ್; ಹೊಸ ಉತ್ಸಾಹದೊಂದಿಗೆ 2022ನ್ನು ಬರಮಾಡಿಕೊಂಡ ನಟಿ
ವಿವಾಹದ ಸಂದರ್ಭದಲ್ಲಿ ಕಾಜಲ್- ಗೌತಮ್ ದಂಪತಿ
Follow us
TV9 Web
| Updated By: shivaprasad.hs

Updated on: Jan 02, 2022 | 8:40 AM

ಟಾಲಿವುಡ್ ನಟಿ ಕಾಜಲ್ ಅಗರ್​ವಾಲ್ ವಿವಿಧ ಚಿತ್ರರಂಗಗಳಲ್ಲಿ ಬಹುಬೇಡಿಕೆಯ ನಟಿಯಾಗಿ ಮಿಂಚಿದವರು. ಕಲ್ಯಾಣದ ನಂತರವೂ ನಟಿ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದರು. ಆದರೆ ಇತ್ತೀಚೆಗೆ ಅವರು ಹಲವು ಪ್ರಮುಖ ಪ್ರಾಜೆಕ್ಟ್​​ಗಳಿಂದ ಹಿಂದೆಸರಿದ್ದರು. ಆ ಅವಕಾಶಗಳು ಬೇರೆಯವರ ಪಾಲಾಗಿದ್ದವು. ಅಲ್ಲದೇ ಒಪ್ಪಿಕೊಂಡ ಚಿತ್ರಗಳನ್ನೂ ಬೇಗ ಮುಗಿಸಲು ಕಾಜಲ್ ಕೋರಿಕೊಂಡಿದ್ದಾರೆ ಎಂಬ ಸುದ್ದಿಗಳೂ ಹರಿದಾಡಿದ್ದವು. ಈ ಹಿನ್ನೆಲೆಯಲ್ಲಿ ಕಾಜಲ್ ಶೀಘ್ರದಲ್ಲೇ ತಾಯಿಯಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಈ ಕುರಿತು ಕಾಜಲ್ ಹಾಗೂ ಅವರ ಪತಿ ಗೌತಮ್ ಕಿಟ್ಚ್ಲು ಅವರಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿರಲಿಲ್ಲ. ಆದರೆ ಹೊಸ ವರ್ಷದ ಸಂದರ್ಭದಲ್ಲಿ ಈ ಜೋಡಿ ತಾವು ಪೋಷಕರಾಗುತ್ತಿರುವುದನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ಇನ್ಸ್ಟಾಗ್ರಾಂನಲ್ಲಿ ಚಿತ್ರಗಳನ್ನು ಹಂಚಿಕೊಂಡಿರುವ ಕಾಜಲ್ ಮತ್ತು ಗೌತಮ್ ಜೋಡಿ- ಕುಟುಂಬಕ್ಕೆ ಹೊಸ ಅತಿಥಿಯ ಆಗಮಿಸುವುದನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ‘‘ನಿನ್ನೆಡೆಗೇ ನೋಡುತ್ತಿದ್ದೇನೆ 2022’’ ಎಂದು ಬರೆದಿರುವ ಗೌತಮ್, ಕಾಜಲ್ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಗೌತಮ್ ಹಂಚಿಕೊಂಡ ಪೋಸ್ಟ್ ಇಲ್ಲಿದೆ:

View this post on Instagram

A post shared by Gautam Kitchlu (@kitchlug)

ಇತ್ತೀಚೆಗಷ್ಟೇ ಮದುವೆಯ ವಾರ್ಷಿಕೋತ್ಸವವನ್ನು ಆಚರಿಸಿದ್ದ ಕಾಜಲ್- ಗೌತಮ್ ಹೊಸ ವರ್ಷವನ್ನು ಹೊಸ ಭರವಸೆಯೊಂದಿಗೆ ಬರಮಾಡಿಕೊಂಡಿದ್ದಾರೆ. ಕಾಜಲ್ ಕೂಡ ಪೋಸ್ಟ್ ಹಂಚಿಕೊಂಡಿದ್ದು, ಅದರಲ್ಲಿ ಅವರು ಎಲ್ಲರಿಗೂ ಶುಭಕೋರಿದ್ದಾರೆ. ಜತೆಗೆ ತಾಯಿಯಾಗುತ್ತಿರುವುದನ್ನು ಬಿಂಬಿಸುವ ಹೊಸ ಫೋಟೋವೊಂದನ್ನೂ ಹಂಚಿಕೊಂಡಿದ್ದಾರೆ.

ಕಾಜಲ್ ಹಂಚಿಕೊಂಡ ಪೋಸ್ಟ್ ಇಲ್ಲಿದೆ:

ಕಾಜಲ್ ಹಾಗೂ ಗೌತಮ್ 2020ರ ಅಕ್ಟೋಬರ್​ನಲ್ಲಿ ಮುಂಬೈನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಗೌತಮ್ ಉದ್ಯಮಿಯಾಗಿದ್ದಾರೆ. ಚಿತ್ರಗಳ ವಿಷಯಕ್ಕೆ ಬಂದರೆ, ಕಾಜಲ್ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2004ರಲ್ಲಿ. 2007ರಲ್ಲಿ ತೆಲುಗು ಚಿತ್ರರಂಗದಲ್ಲಿ ನಾಯಕಿಯಾಗಿ ಕಾಣಿಸಿಕೊಂಡರು. 2021ರಲ್ಲಿ ಅವರ ಎರಡು ಚಿತ್ರಗಳು ತೆರೆಕಂಡಿವೆ. ಸದ್ಯ 7 ಚಿತ್ರಗಳು ಅವರ ಬತ್ತಳಿಕೆಯಲ್ಲಿದ್ದು, ಅದರಲ್ಲಿ 4 ಚಿತ್ರಗಳ ಚಿತ್ರೀಕರಣ ಪೂರ್ತಿಗೊಳಿಸಿದ್ದಾರೆ.

ಇದನ್ನೂ ಓದಿ:

ಶಿಲ್ಪಾ ಶೆಟ್ಟಿ ತಂಗಿಗೆ ಸಲ್ಮಾನ್​ ಖಾನ್ ಖಡಕ್​ ವಾರ್ನಿಂಗ್​​​; ಎಲ್ಲರ ಎದುರು ಕಣ್ಣೀರು ಹಾಕಿದ ಶಮಿತಾ

KL Rahul: ಕ್ರಿಕೆಟ್.. ಸುತ್ತಾಟ.. ಆಥಿಯಾ..; 2021ಕ್ಕೆ ಪ್ರೀತಿಯ ಧನ್ಯವಾದ ಹೇಳಿದ ಕೆಎಲ್ ರಾಹುಲ್!

ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ