AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ದಿನವೂ ಬಾಕ್ಸ್ ಆಫೀಸ್​ನಲ್ಲಿ ‘ಕಲ್ಕಿ 2898 ಎಡಿ’ ಕಮಾಲ್; ಚಿತ್ರ ಗಳಿಸಿದ್ದೆಷ್ಟು?

Kalki 2898 AD Box Office Collection Day 2: ‘ಕಲ್ಕಿ 2898 ಎಡಿ’ ಚಿತ್ರ ಜೂನ್ 27ರಂದು ಬಿಡುಗಡೆ ಕಂಡಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ. ಇದರಿಂದ ನಿರ್ಮಾಪಕರ ಮೊಗದಲ್ಲಿ ನಗು ಮೂಡಿದೆ. ಶನಿವಾರ ಹಾಗೂ ಭಾನುವಾರ ಸಿನಿಮಾ ಮತ್ತಷ್ಟು ಗಳಿಕೆ ಮಾಡೋ ಸಾಧ್ಯತೆ ಇದೆ.

ಎರಡನೇ ದಿನವೂ ಬಾಕ್ಸ್ ಆಫೀಸ್​ನಲ್ಲಿ ‘ಕಲ್ಕಿ 2898 ಎಡಿ’ ಕಮಾಲ್; ಚಿತ್ರ ಗಳಿಸಿದ್ದೆಷ್ಟು?
ಎರಡನೇ ದಿನವೂ ಬಾಕ್ಸ್ ಆಫೀಸ್​ನಲ್ಲಿ ‘ಕಲ್ಕಿ 2898 ಎಡಿ’ ಕಮಾಲ್; ಚಿತ್ರ ಗಳಿಸಿದ್ದೆಷ್ಟು?
ರಾಜೇಶ್ ದುಗ್ಗುಮನೆ
|

Updated on: Jun 29, 2024 | 6:30 AM

Share

ಪ್ರಭಾಸ್ ನಟನೆಯ, ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 ಎಡಿ’ ಚಿತ್ರಕ್ಕೆ ಜನರಿಂದ ಮೆಚ್ಚುಗೆ ಸಿಕ್ಕಿದೆ. ಸಿನಿಮಾದಲ್ಲಿ ಬಳಕೆಯಾದ ಗ್ರಾಫಿಕ್ಸ್​ಗೆ ಸಾಕಷ್ಟು ಮೆಚ್ಚುಗೆ ಸಿಕ್ಕಿದೆ. ಹೊಸ ಲೋಕವನ್ನೇ ಸೃಷ್ಟಿಸಿದ ನಿರ್ದೇಶಕ ನಾಗ್ ಅಶ್ವಿನ್ ಅವರನ್ನು ಎಲ್ಲರೂ ಹೊಗಳುತ್ತಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿದೆ. ಈ ಸಿನಿಮಾ ಎರಡನೇ ದಿನವೂ (ಜೂನ್ 28) ಭರ್ಜರಿ ಗಳಿಕೆ ಮಾಡಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ.

ಮೊದಲ ದಿನ ‘ಕಲ್ಕಿ 2898 ಎಡಿ’ ಚಿತ್ರ ವಿಶ್ವಾದ್ಯಂತ 191 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ ಈ ಚಿತ್ರ ಭಾರತದಲ್ಲಿ 54 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ವಿಶ್ವ ಬಾಕ್ಸ್ ಆಫೀಸ್ ಲೆಕ್ಕಾಚಾರವೂ ಸೇರಿದರೆ ಸಿನಿಮಾದ ಒಟ್ಟಾರೆ ಗಳಿಕೆ 300 ಕೋಟಿ ರೂಪಾಯಿ ಸಮೀಪಿಸಿದೆ.

ವಿಷ್ಣುವಿನ ಈಗಿನ ಅವತಾರ ಕಲ್ಕಿ ಎಂಬರ್ಥದಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ಸಾಗುತ್ತದೆ. ದುಷ್ಟ ಶಕ್ತಿಗಳಿಂದ ಆತ ನಮ್ಮನ್ನು ಕಾಪಾಡುತ್ತಾನೆ ಎಂಬ ಕಲ್ಪನೆಯಲ್ಲಿ ಸಿನಿಮಾ ಮೂಡಿ ಬಂದಿದೆ. ಮಹಭಾರತದಿಂದ ಶುರುವಾಗೋ ಕಥೆ 2898 ಎಡಿವರೆಗೆ ಸಾಗುತ್ತದೆ. ಕಾಶಿ ಹೆಸರಿನ ಮಾಯಾ ಲೋಕ ಸಾಕಷ್ಟು ಗಮನ ಸೆಳೆದಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಮುರಿದ ದಾಖಲೆಗಳೆಷ್ಟು? ನಿರ್ಮಾಪಕರು ಕೊಟ್ಟರು ಉತ್ತರ

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್ ಜೊತೆ ದೀಪಿಕಾ ಪಡುಕೋಣೆ, ಕಮಲ್ ಹಾಸನ್, ಅಮಿತಾಭ್ ಬಚ್ಚನ್ ಮೊದಲಾದವರು ನಟಿಸಿದ್ದಾರೆ. ಇದರ ಜೊತೆಗೆ ಅನೇಕ ಪ್ರಮುಖ ಕಲಾವಿದರು ಅತಿಥಿ ಪಾತ್ರ ಮಾಡಿ ಗಮನ ಸೆಳೆದಿದ್ದಾರೆ. ಶನಿವಾರ (ಜೂನ್ 29) ಹಾಗೂ ನಾಳೆ (ಜೂನ್ 30) ಚಿತ್ರದ ಗಳಿಕೆ ಹೆಚ್ಚೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು