8 ದಿನಕ್ಕೆ 774 ಕೋಟಿ ರೂಪಾಯಿ ಗಳಿಸಿದ ‘ಕಲ್ಕಿ 2898 ಎಡಿ’; 2ನೇ ವಾರವೂ ಅಬ್ಬರ

ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ನಿರ್ಮಾಣ ಆಗಿರುವ ‘ಕಲ್ಕಿ 2898 ಎಡಿ’ ಸಿನಿಮಾಗೆ ಜನಮೆಚ್ಚುಗೆ ಸಿಕ್ಕಿದೆ. ಎರಡನೇ ವಾರದಲ್ಲೂ ಈ ಸಿನಿಮಾ ಅನೇಕ ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಪ್ರಭಾಸ್​ ಅಭಿಮಾನಿಗಳು ಈ ಚಿತ್ರವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಒಟ್ಟು 8 ದಿನಗಳಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ಬರೋಬ್ಬರಿ 774 ಕೋಟಿ ರೂಪಾಯಿ ಕಮಾಯಿ ಮಾಡಿದೆ.

8 ದಿನಕ್ಕೆ 774 ಕೋಟಿ ರೂಪಾಯಿ ಗಳಿಸಿದ ‘ಕಲ್ಕಿ 2898 ಎಡಿ’; 2ನೇ ವಾರವೂ ಅಬ್ಬರ
ಪ್ರಭಾಸ್​, ದಿಶಾ ಪಟಾನಿ
Follow us
ಮದನ್​ ಕುಮಾರ್​
|

Updated on: Jul 05, 2024 | 9:08 PM

ನಾಗ್​ ಅಶ್ವಿನ್​ ನಿರ್ದೇಶನ ಮಾಡಿರುವ ‘ಕಲ್ಕಿ 2898 ಎಡಿ’ ಸಿನಿಮಾದಿಂದ ನಿರ್ಮಾಪಕರಿಗೆ ಹಣದ ಹೊಳೆ ಹರಿದು ಬಂದಿದೆ. ಭಾರತ ಮಾತ್ರವಲ್ಲದೇ ಬೇರೆ ಬೇರೆ ದೇಶಗಳಲ್ಲೂ ಕೂಡ ಈ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಈವರೆಗೆ ಯಶಸ್ವಿಯಾಗಿ 8 ದಿನಗಳ ಕಾಲ ಪ್ರದರ್ಶನ ಕಂಡಿರುವ ಈ ಸಿನಿಮಾಗೆ ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್​ ಆಗಿದೆ. 8 ದಿನಕ್ಕೆ ಸಿನಿಮಾದ ಒಟ್ಟು ಕಲೆಕ್ಷನ್​ 774 ಕೋಟಿ ರೂಪಾಯಿ ಎಂಬ ಮಾಹಿತಿ ಸಿಕ್ಕಿದೆ. ಈ ಸಿನಿಮಾದಿಂದ ನಟ ಪ್ರಭಾಸ್​ ಅವರ ವೃತ್ತಿ ಜೀವನಕ್ಕೆ ದೊಡ್ಡ ಮೈಲೇಜ್​ ಸಿಕ್ಕಂತಾಗಿದೆ.

‘ಕಲ್ಕಿ 2898 ಎಡಿ’ ಸಿನಿಮಾಗೆ ‘ವೈಜಯಂತಿ ಮೂವೀಸ್​’ ಮೂಲಕ ಅಶ್ವಿನಿ ದತ್​ ಅವರು ಬಂಡವಾಳ ಹೂಡಿದ್ದಾರೆ. ನಿರ್ಮಾಣ ಸಂಸ್ಥೆಯ ಕಡೆಯಿಂದ 8 ದಿನಗಳ ಕಲೆಕ್ಷನ್​ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವುದುಕ್ಕೂ ಮುನ್ನವೇ ಟ್ರೇಡ್​ ಅನಲಿಸ್ಟ್​ ರಮೇಶ್​ ಬಾಲಾ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ವಿಶ್ವಾದ್ಯಂತ 8 ದಿನಕ್ಕೆ 774 ಕೋಟಿ ಕಲೆಕ್ಷನ್​ ಆಗಿದ್ದು, 8ನೇ ದಿನದ ಕಲೆಕ್ಷನ್​ 49 ಕೋಟಿ ರೂಪಾಯಿ ಎಂದು ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ತೆರೆಕಂಡಿದೆ. ತೆಲುಗು, ಕನ್ನಡ, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. 3ಡಿ ಮತ್ತು 2ಡಿ ವರ್ಷನ್​ಗಳಲ್ಲಿ ಸಿನಿಮಾವನ್ನು ನೋಡಿ ಜನರು ಎಂಜಾಯ್​ ಮಾಡುತ್ತಿದ್ದಾರೆ. ಮೊದಲ ವಾರದ ರೀತಿ ಎರಡನೇ ವೀಕೆಂಡ್​ನಲ್ಲೂ ‘ಕಲ್ಕಿ 2898 ಎಡಿ’ ಸಿನಿಮಾಗೆ ಭರ್ಜರಿ ಕಲೆಕ್ಷನ್​ ಆಗುತ್ತಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಸಿನಿಮಾ ನೋಡಲು ಜಪಾನ್​ನಿಂದ ಭಾರತಕ್ಕೆ ಬಂದ ಪ್ರಭಾಸ್ ಫ್ಯಾನ್ಸ್

ಪ್ರಭಾಸ್​, ಕಮಲ್​ ಹಾಸನ್​, ದೀಪಿಕಾ ಪಡುಕೋಣೆ, ಅಮಿತಾಭ್​​ ಬಚ್ಚನ್​, ದಿಶಾ ಪಟಾನಿ ಮುಂತಾದ ಕಲಾವಿದರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಪಾತ್ರವರ್ಗದ ಕಾರಣದಿಂದಾಗಿ ಸಿನಿಮಾದ ತಾರಾ ಮೆರುಗು ಹೆಚ್ಚಿದೆ. ಈ ಸಿನಿಮಾದಲ್ಲಿ ನಿರ್ದೇಶಕ ನಾಗ್​ ಅಶ್ವಿನ್​ ಹೇಳಿದ ಕಥೆಯು ಪ್ರೇಕ್ಷಕರಿಗೆ ಇಷ್ಟ ಆಗಿದೆ. ಈ ಸಿನಿಮಾಗೆ ಸೀಕ್ವೆಲ್​ ಕೂಡ ಮೂಡಿಬರಲಿದೆ. ಅದರ ಚಿತ್ರೀಕರಣ ಶೇಕಡ 60ರಷ್ಟು ಪೂರ್ಣಗೊಂಡಿದೆ ಎಂದು ಇತ್ತೀಚೆಗೆ ನಿರ್ಮಾಪಕರೇ ತಿಳಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ