
ಟಾಲಿವುಡ್ ನಟ ಪ್ರಭಾಸ್ (Prabhas) ನಟನೆಯ ‘ಕಲ್ಕಿ 2898 ಎಡಿ’ ಚಿತ್ರಕ್ಕಾಗಿ ಅವರ ಎಲ್ಲಾ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಸಿನಿಮಾ ಈಗಾಗಲೇ ಟೀಸರ್ ಹಾಗೂ ಪೋಸ್ಟರ್ ಮೂಲಕ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಆರು ಸಾವಿರ ವರ್ಷಗಳ ಕಥೆ ಇರಲಿದೆಯಂತೆ. ಈ ಕಾರಣಕ್ಕೂ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾ ಮೇ 9ರಂದು ರಿಲೀಸ್ ಆಗಲಿದೆ ಎಂದು ತಂಡ ಘೋಷಣೆ ಮಾಡಿದೆ. ಆದರೆ, ಅಂದುಕೊಂಡ ದಿನಾಂಕದಂದು ಸಿನಿಮಾ ರಿಲೀಸ್ ಆಗುವುದಿಲ್ಲವೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣ ಆಗಿರೋದು ಸಿನಿಮಾಗೆ ಇನ್ನೂ ಪ್ರಮೋಷನ್ ಆರಂಭಿಸದೇ ಇರುವುದು.
ಪ್ರಭಾಸ್ ಅವರು ಕಳೆದ ವರ್ಷಾಂತ್ಯಕ್ಕೆ ರಿಲೀಸ್ ಆದ ‘ಸಲಾರ್’ ಚಿತ್ರದ ಮೂಲಕ ಹಿಟ್ ಪಡೆದರು. ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರ ಭರ್ಜರಿ ಯಶಸ್ಸು ಕಂಡಿತ್ತು. ಮಾಸ್ ಆ್ಯಕ್ಷನ್ ಎಂಟರ್ಟೈನರ್ ಆಗಿ ತಯಾರಾದ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈಗ ರಿಲೀಸ್ ಆಗಿರೋದು ಮೊದಲನೆಯ ಭಾಗ. ಮುಂದಿನ ದಿನಗಳಲ್ಲಿ ಈ ಸಿನಿಮಾದ ಎರಡನೇ ಪಾರ್ಟ್ ಬಿಡುಗಡೆಯಾಗಲಿದೆ. ಈ ಸಿನಿಮಾದ ನಂತರ ಪ್ರಭಾಸ್ ಅವರು ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 ಎಡಿ’ ಸಿನಿಮಾಗಳಲ್ಲಿ ಬ್ಯುಸಿ ಆದರು. ಸಿನಿಮಾ ರಿಲೀಸ್ಗೆ ಒಂದು ತಿಂಗಳು ಮಾತ್ರ ಬಾಕಿ ಇದೆ. ಆದಾಗ್ಯೂ ಚಿತ್ರತಂಡ ಪ್ರಚಾರ ಆರಂಭಿಸಿಲ್ಲ.
‘ಕಲ್ಕಿ 2898 ಎಡಿ’ ಚಿತ್ರದ ಬಗ್ಗೆ ಈಗಾಗಲೇ ಹಲವು ಸುದ್ದಿಗಳು ಕೇಳಿ ಬಂದಿವೆ. ಈ ಸಿನಿಮಾ ಮೇ 9ರಂದು ಬಿಡುಗಡೆಯಾಗಲಿದೆ. ಈ ಬಗ್ಗೆ ಈಗಾಗಲೇ ಘೋಷಣೆ ಆಗಿದೆ. ಆದರೆ ಈಗ ಈ ಚಿತ್ರದ ಬಗ್ಗೆ ಲೇಟೆಸ್ಟ್ ಅಪ್ಡೇಟ್ ಕೇಳಿ ಬಂದಿದೆ. ಈ ಸಿನಿಮಾ ನಿಗದಿತ ಸಮಯಕ್ಕೆ ಬರದೇ ಇರಬಹುದು ಎನ್ನಲಾಗಿದೆ. ಈ ಸಿನಿಮಾ ರಿಲೀಸ್ ಆಗಲು ಇನ್ನು ಬಾಕಿ ಇರೋದು ಒಂದು ತಿಂಗಳು ಮಾತ್ರ. ಆದರೆ ಈ ಚಿತ್ರದ ಶೂಟಿಂಗ್ ಮತ್ತು ಗ್ರಾಫಿಕ್ಸ್ ಕೆಲಸ ಬಾಕಿ ಇದೆ. ಹೀಗಾಗಿ ಚಿತ್ರದ ಬಿಡುಗಡೆ ತಡವಾಗಲಿದೆ ಎಂಬ ಮಾತು ಕೇಳಿ ಬರುತ್ತಿದೆ.
ಇದನ್ನೂ ಓದಿ: ಆಗಸ್ಟ್ 15ಕ್ಕೆ ರಿಲೀಸ್ ಆಗಲಿದೆ ‘ಕಲ್ಕಿ 2898 ಎಡಿ’? ‘ಪುಷ್ಪ 2’ ಜೊತೆ ಸೆಣೆಸಾಟಕ್ಕೆ ನಿಂತ ಪ್ರಭಾಸ್ ಸಿನಿಮಾ
‘ಕಲ್ಕಿ 2898 ಎಡಿ’ ಸಿನಿಮಾದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದಿಂದ ಬಿಡುಗಡೆಯಾಗಿರುವ ಗ್ಲಿಂಪಸ್ ಈಗಾಗಲೇ ಪ್ರೇಕ್ಷಕರ ಗಮನ ಸೆಳೆದಿದೆ. ಅಲ್ಲದೇ ಪೋಸ್ಟರ್ಗಳು ಅಭಿಮಾನಿಗಳಿಗೆ ಇಷ್ಟ ಆಗಿದೆ. ಈ ಸಿನಿಮಾದ ಕಥೆ ಮಹಾಭಾರತದಿಂದ ಆರಂಭ ಆಗಿ, 2898ನೇ ಇಸ್ವಿಯಲ್ಲಿ ಪೂರ್ಣಗೊಳ್ಳಲಿದೆ ಎನ್ನಲಾಗಿದೆ. ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ ಮತ್ತು ಕಮಲ್ ಹಾಸನ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:09 pm, Thu, 4 April 24