1100 ಕೋಟಿ ರೂ. ಕ್ಲಬ್ ಸೇರಿದ ‘ಕಲ್ಕಿ 2898 ಎಡಿ’; ಆದರೂ ನಿರ್ಮಾಪಕರಿಗಾದ ಲಾಭ ಕಡಿಮೆ?

‘ಪಠಾಣ್​’, ‘ಕೆಜಿಎಫ್​ 2’ ಮುಂತಾದ ಸಿನಿಮಾಗಳು ಸಾವಿರ ಕೋಟಿ ರೂಪಾಯಿ ಗಳಿಕೆ ಮಾಡಿವೆ. ಇತ್ತೀಚೆಗೆ ಪ್ರಭಾಸ್​ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಕೂಡ ಸಾವಿರ ಕೋಟಿ ರೂಪಾಯಿ ಕ್ಲಬ್​ ಸೇರಿದೆ. ಈ ಬಗ್ಗೆ ನಿರ್ಮಾಪಕರು ಮಾಹಿತಿ ಹಂಚಿಕೊಂಡಿದ್ದಾರೆ.

1100 ಕೋಟಿ ರೂ. ಕ್ಲಬ್ ಸೇರಿದ ‘ಕಲ್ಕಿ 2898 ಎಡಿ’; ಆದರೂ ನಿರ್ಮಾಪಕರಿಗಾದ ಲಾಭ ಕಡಿಮೆ?
ಪ್ರಭಾಸ್-ದೀಪಿಕಾ

Updated on: Jul 26, 2024 | 12:13 PM

‘ಕಲ್ಕಿ 2898 ಎಡಿ’ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿದೆ. ಈ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳು ಕಳೆಯುತ್ತಾ ಬಂದಿದೆ. ಈ ಚಿತ್ರದಿಂದ ಅಮಿತಾಭ್ ಬಚ್ಚನ್, ಪ್ರಭಾಸ್ ದೊಡ್ಡ ಮಟ್ಟದ ಯಶಸ್ಸು ಪಡೆದಿದ್ದಾರೆ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 1100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದಲ್ಲಿ ಈ ಚಿತ್ರ 623 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಗುರುವಾರ (ಜುಲೈ 25) ಈ ಚಿತ್ರ ಒಂದೂವರೆ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

ಸಾವಿರ ಕೋಟಿ ಗಳಿಕೆ ಮಾಡಿದ ಸಿನಿಮಾಗಳ ಪೈಕಿ ಭಾರತದಲ್ಲಿ ಇರೋದು ಕೇವಲ ಆರು ಸಿನಿಮಾಗಳು. ಈಗ ಏಳನೇ ಚಿತ್ರವಾಗಿ ‘ಕಲ್ಕಿ 2898 ಎಡಿ’ ಸಿನಿಮಾ ಇದೆ. ಈ ಮೊದಲು ‘ಕೆಜಿಎಫ್ 2’, ‘ಜವಾನ್’, ‘ಪಠಾಣ್’, ‘ಬಾಹುಬಲಿ 2’ ಚಿತ್ರಗಳು ಇಷ್ಟು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿದ್ದವು. ಈ ಮೂಲಕ ಪ್ರಭಾಸ್ ವೃತ್ತಿಜೀವನಕ್ಕೆ ಸಿನಿಮಾದಿಂದ ಮೈಲೇಜ್ ಸಿಕ್ಕಿದೆ.

‘ಕಲ್ಕಿ 2898 ಎಡಿ’ ಸಿನಿಮಾದ ಬಜೆಟ್ 600 ಕೋಟಿ ರೂಪಾಯಿಗೂ ಅಧಿಕವಾಗಿದೆ. ಇದರ ಜೊತೆಗೆ, ಬಂದ ಲಾಭದಲ್ಲಿ ಒಂದಷ್ಟು ಭಾಗ ತೆರಿಗೆ ರೂಪದಲ್ಲಿ ಕಟ್ಟಬೇಕಾಗುತ್ತದೆ. ಒಂದಷ್ಟು ಹಣ ಥಿಯೇಟರ್ ಹಾಗೂ ಮಲ್ಟಿಪ್ಲೆಕ್ಸ್​ನವರಿಗೆ ಹೋಗುತ್ತದೆ. ಈ ಎಲ್ಲಾ ಕಾರಣದಿಂದ ನಿರ್ಮಾಪಕ ನಾಗ್ ಅಶ್ವಿನ್ ಅವರಿಗೆ ದೊಡ್ಡ ಮಟ್ಟದಲ್ಲಿ ಲಾಭ ಆಗಿಲ್ಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಸಿನಿಮಾದ ಕಲೆಕ್ಷನ್​ ಸುಳ್ಳು ಎಂದವರ ಮೇಲೆ ಕೇಸ್​ ಹಾಕಿದ ನಿರ್ಮಾಪಕರು

‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಪ್ರಭಾಸ್​, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಎರಡನೇ ಪಾರ್ಟ್ ಸಿದ್ಧಗೊಳ್ಳಲಿದೆ. ತಂಡ ಹೇಳಿಕೊಳ್ಳುವ ಪ್ರಕಾರ ಈಗಾಗಲೇ ಕೆಲವು ಭಾಗಗಳ ಶೂಟಿಂಗ್ ಪೂರ್ಣಗೊಂಡಿದೆಯಂತೆ. ಶೀಘ್ರವೇ ಮತ್ತೊಂದು ಹಂತದ ಶೂಟಿಂಗ್​ನ ತಂಡ ಪ್ರಾರಂಭಿಸಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us