AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಹಾಲಿವುಡ್​ ಚಿತ್ರದ ರಿಮೇಕ್? ಮೂಡಿದೆ ಅನುಮಾನ

2021ರಲ್ಲಿ ಹಾಲಿವುಡ್​ನ ‘ಡ್ಯೂನ್’ ಸಿನಿಮಾ ರಿಲೀಸ್ ಆಗಿತ್ತು. ಸೈನ್ಸ್ ಫಿಕ್ಷನ್ ಶೈಲಿಯಲ್ಲಿ ಮೂಡಿ ಬಂದ ಈ ಸಿನಿಮಾ 3,396 ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ಈ ಚಿತ್ರವನ್ನು ನೋಡಿ ಪ್ರೇಕ್ಷಕರು ಮೆಚ್ಚಿಕೊಂಡರು. ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 ಎಡಿ’ ಚಿತ್ರ ಈ ಸಿನಿಮಾದ ರಿಮೇಕ್ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಹಾಲಿವುಡ್​ ಚಿತ್ರದ ರಿಮೇಕ್? ಮೂಡಿದೆ ಅನುಮಾನ
ಕಲ್ಕಿ-ಡ್ಯೂನ್
ರಾಜೇಶ್ ದುಗ್ಗುಮನೆ
|

Updated on: Apr 30, 2024 | 7:03 AM

Share

ಇತ್ತೀಚೆಗೆ ರಿಮೇಕ್​ಗಳ ಸಂಖ್ಯೆ ಹೆಚ್ಚಿದೆ. ಕೆಲವು ತಂಡಗಳು ಸಿನಿಮಾ ರಿಲೀಸ್​ಗೆ ಮೊದಲೇ ರಿಮೇಕ್ ಬಗ್ಗೆ ಮಾಹಿತಿ ನೀಡುತ್ತಾರೆ. ಇನ್ನೂ ಕೆಲವರು ಈ ವಿಚಾರ ಮುಚ್ಚಿಡುತ್ತಾರೆ. ಈಗ ಪ್ರಭಾಸ್ (Prabhas) ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಮೇಲೂ ಕಥೆ ಕದ್ದ ಆರೋಪ ಬಂದಿದೆ. ಕೆಲವರು ಇದನ್ನು ಒಪ್ಪಿದರೆ, ಇನ್ನೂ ಕೆಲವರು ಸಿನಿಮಾ ನೋಡದೇ ಈ ನಿರ್ಧಾರಕ್ಕೆ ಬರೋದು ಸರಿ ಅಲ್ಲ ಎನ್ನುವ ಅಭಿಪ್ರಾಯವನ್ನು ಹೊರ ಹಾಕಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ.

2021ರಲ್ಲಿ ‘ಡ್ಯೂನ್’ ಸಿನಿಮಾ ರಿಲೀಸ್ ಆಗಿತ್ತು. ಇದು ಹಾಲಿವುಡ್ ಚಿತ್ರ. ಸೈನ್ಸ್ ಫಿಕ್ಷನ್ ಶೈಲಿಯಲ್ಲಿ ಮೂಡಿ ಬಂದ ಈ ಸಿನಿಮಾ 3,396 ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ಈ ಚಿತ್ರವನ್ನು ನೋಡಿ ಪ್ರೇಕ್ಷಕರು ಮೆಚ್ಚಿಕೊಂಡರು. ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 ಎಡಿ’ ಚಿತ್ರ ಈ ಸಿನಿಮಾದ ರಿಮೇಕ್ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಈ ಅನುಮಾನ ಮೂಡಲೂ ಒಂದು ಕಾರಣವಿದೆ. ಇತ್ತೀಚೆಗೆ ಈ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ಪೋಸ್ಟರ್​ನ ಹಿಂಭಾಗದಲ್ಲಿ ಮರಳಭೂಮಿ ರೀತಿಯಲ್ಲಿ ತೋರಿಸಲಾಗಿದೆ. ‘ಡ್ಯೂನ್’ ಸಿನಿಮಾದ ಪೋಸ್ಟರ್​ಗೂ ಇದಕ್ಕೂ ಹೋಲಿಕೆ ಇದೆ. ‘ಡ್ಯೂನ್’ ಕಾಲ್ಪನಿಕ ಗ್ರಹವೊಂದರ ಕಥೆಯನ್ನು ಹೊಂದಿದೆ. ಈ ಗ್ರಹ ಸಂಪೂರ್ಣ ಮರಳುಗಾಡಾಗಿರುತ್ತದೆ. ಅಲ್ಲಿ ಬರುವ ಪಾತ್ರಗಳಿಗೂ ‘ಕಲ್ಕಿ 2898 ಎಡಿ’ ಪಾತ್ರಗಳಿಗೂ ಹೋಲಿಕೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಪ್ರೆಗ್ನೆಂಟ್ ಆದರೂ ‘ಕಲ್ಕಿ 2898 ಎಡಿ’ ಸಿನಿಮಾ ಪ್ರಮೋಷನ್ ಮಾಡಲಿದ್ದಾರೆ ದೀಪಿಕಾ ಪಡುಕೋಣೆ

ಇದು ನಿಜವೇ ಆದಲ್ಲಿ ಅಥವಾ ತಂಡ ಈ ಬಗ್ಗೆ ಸ್ಪಷ್ಟನೆ ಕೊಡದೇ ಇದ್ದಲ್ಲಿ ಚಿತ್ರಕ್ಕೆ ದೊಡ್ಡ ಮಟ್ಟದ ಹಿನ್ನಡೆ ಆಗಲಿದೆ. ಈಗಾಗಲೇ ಪದೇ ಪದೇ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹೋಗುತ್ತಾ ಬಂದಿದೆ. ಚಿತ್ರ ಜೂನ್ 27ರಂದು ಬಿಡುಗಡೆ ಆಗಲಿದೆ ಎಂದು ತಂಡ ಹೇಳಿಕೊಂಡಿದೆ. ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಪ್ರಭಾಸ್ ಜೊತೆ ದೀಪಿಕಾ ಪಡುಕೋಣೆ, ಕಮಲ್ ಹಾಸನ್, ಅಮಿತಾಭ್ ಬಚ್ಚನ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಅಶ್ವಿನಿ ದತ್ ಅವರು 600 ಕೋಟಿ ರೂಪಾಯಿ ಸುರಿದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ