ಪ್ರಭಾಸ್ (Prabhas) ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಮೇ 9ರಂದು ರಿಲೀಸ್ ಆಗಲಿದೆ ಎಂದು ತಂಡ ಈ ಮೊದಲು ಹೇಳಿಕೊಂಡಿತ್ತು. ಆದರೆ, ಸಿನಿಮಾದ ಪ್ರಚಾರ ಕಾರ್ಯದಲ್ಲಿ ತಂಡ ಭಾಗಿ ಆಗಿಲ್ಲ. ಇದಕ್ಕೆ ಕಾರಣ ಆಗಿದ್ದು ಲೋಕಸಭೆ ಹಾಗೂ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ. ಇದರ ಅಬ್ಬರದ ಮಧ್ಯೆ ಸಿನಿಮಾ ರಿಲೀಸ್ ಮಾಡಿದರೆ ಕೈ ಸುಟ್ಟಿಕೊಳ್ಳಬೇಕು ಎಂಬುದು ತಂಡಕ್ಕೆ ಗೊತ್ತಾಗಿದೆ. ಈ ಕಾರಣಕ್ಕೆ ಹೊಸ ರಿಲೀಸ್ ದಿನಾಂಕವನ್ನು ತಂಡ ತಿಳಿಸಿದೆ. ಇಂದು (ಏಪ್ರಿಲ್ 27) ಸಂಜೆ ಈ ಬಗ್ಗೆ ಘೋಷಣೆ ಮಾಡಲಾಗಿದೆ.
‘ಕಲ್ಕಿ 2898 ಎಡಿ’ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ ಎನ್ನುವ ಬಗ್ಗೆ ಮೊದಲಿನಿಂದಲೂ ಸುದ್ದಿ ಹರಿದಾಡುತ್ತಲೇ ಇತ್ತು. ಆದರೆ, ಇಷ್ಟು ದಿನಗಳ ಕಾಲ ತಂಡ ಈ ಬಗ್ಗೆ ಮೌನ ವಹಿಸಿತ್ತು. ಈಗ ಈ ಬಗ್ಗೆ ಘೋಷಣೆ ಆಗಿದೆ. ಜೂನ್ 27 ರಂದು ಸಿನಿಮಾ ರಿಲೀಸ್ ಆಗಲಿದೆ. ಈ ಬಗ್ಗೆ ತಂಡ ಮಾಹಿತಿ ಹಂಚಿಕೊಂಡಿದೆ.
ಇದನ್ನೂ ಓದಿ: ಸಂಭಾವನೆ ಕೊಟ್ಟೇ ಸುಸ್ತಾದ ‘ಕಲ್ಕಿ 2898 ಎಡಿ’ ನಿರ್ಮಾಪಕ; ನಟರು ಚಾರ್ಜ್ ಮಾಡಿದ್ದು ಅಷ್ಟಿಷ್ಟಲ್ಲ
ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ದೊಡ್ಡ ಕಲಾವಿದರ ಬಳಗ ಇದೆ. ಹಿಂದಿಯ ದೀಪಿಕಾ ಪಡುಕೋಣೆ, ದಿಶಾ ಪಟಾಣಿ, ಅಮಿತಾಭ್ ಬಚ್ಚನ್, ತಮಿಳಿನ ಕಮಲ್ ಹಾಸನ್ ನಟಿಸಿದ್ದಾರೆ. ಈ ಚಿತ್ರಕ್ಕೆ ನಾಗ್ ಅಶ್ವಿನ್ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಬಜೆಟ್ 500-600 ಕೋಟಿ ರೂಪಾಯಿ ಇದೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಅಚ್ಚರಿ ಹೊರ ಹಾಕಿದ್ದಾರೆ.
All the forces come together for a better tomorrow on 𝟐𝟕-𝟎𝟔-𝟐𝟎𝟐𝟒.#Kalki2898AD @SrBachchan @ikamalhaasan #Prabhas @deepikapadukone @nagashwin7 @DishPatani @Music_Santhosh @VyjayanthiFilms @Kalki2898AD #Kalki2898ADonJune27 pic.twitter.com/kItIJXvbto
— Vyjayanthi Movies (@VyjayanthiFilms) April 27, 2024
ಸಿನಿಮಾ ಬಜೆಟ್ ಹೆಚ್ಚಲು ಕಲಾವಿದರ ಸಂಭಾವನೆಯೂ ಕಾರಣ ಎಂದು ಹೇಳಲಾಗುತ್ತಿದೆ. ಪ್ರಭಾಸ್ ಅವರು ಈ ಚಿತ್ರಕ್ಕಾಗಿ 150 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ. ದೀಪಿಕಾ, ಕಮಲ್ ಹಾಸನ್, ಅಮಿತಾಭ್ ತಲಾ 20 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗುತ್ತಿದೆ. ದಿಶಾ ಪಟಾಣಿ ಅವರು 10 ಕೋಟಿ ರೂಪಾಯಿ ಪಡೆದಿದ್ದಾರೆ. ಸುಮಾರು 200 ಕೋಟಿ ರೂಪಾಯಿ ಕಲಾವಿದರ ಸಂಭಾವನೆಗೆ ಖರ್ಚಾಗಿದೆ. ಸಿನಿಮಾಗಾಗಿ ದೊಡ್ಡ ದೊಡ್ಡ ಸೆಟ್ಗಳನ್ನು ಹಾಕಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 5:41 pm, Sat, 27 April 24