ಭೈರವನಾಗಿ ಎಂಟ್ರಿಕೊಟ್ಟ ಪ್ರಭಾಸ್; ವೈರಲ್ ಆಯ್ತು ‘ಕಲ್ಕಿ 2898 ಎಡಿ’ ಚಿತ್ರದ ಹೊಸ ಪೋಸ್ಟರ್

ಮಾರ್ಚ್ 8 ಮಹಾಶಿವರಾತ್ರಿ. ಈ ವಿಶೇಷ ದಿನಕ್ಕೆ ಹಲವು ಸಿನಿಮಾಗಳ ಪೋಸ್ಟರ್ ರಿವೀಲ್ ಮಾಡಲಾಗಿದೆ. ಅದೇ ರೀತಿ ಪ್ರಭಾಸ್ ಅವರ ‘ಕಲ್ಕಿ 2898 ಎಡಿ’ ಚಿತ್ರದ ಲುಕ್ ರಿವೀಲ್ ಮಾಡಲಾಗಿದೆ. ಈ ಪೋಸ್ಟರ್​ನಲ್ಲಿ ಪ್ರಭಾಸ್ ಅವರ ಮುಖ ರಿವೀಲ್ ಆಗಿಲ್ಲ. ಈ ಪೋಸ್ಟರ್​ಗೆ ‘ಅವನ ಹೆಸರು ಭೈರವ’ ಎಂದು ಬರೆದುಕೊಂಡಿದ್ದಾರೆ.

ಭೈರವನಾಗಿ ಎಂಟ್ರಿಕೊಟ್ಟ ಪ್ರಭಾಸ್; ವೈರಲ್ ಆಯ್ತು ‘ಕಲ್ಕಿ 2898 ಎಡಿ’ ಚಿತ್ರದ ಹೊಸ ಪೋಸ್ಟರ್
ಪ್ರಭಾಸ್
Follow us
ರಾಜೇಶ್ ದುಗ್ಗುಮನೆ
|

Updated on: Mar 09, 2024 | 6:57 AM

ಪ್ರಭಾಸ್ (Prabhas) ನಟನೆಯ ‘ಕಲ್ಕಿ 2898 ಎಡಿ’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಈ ಚಿತ್ರದ ಮೇಲೆ ಇರುವ ನಿರೀಕ್ಷೆಯನ್ನು ದುಪ್ಪಟ್ಟು ಮಾಡುವ ರೀತಿಯ ಪೋಸ್ಟರ್ ಒಂದನ್ನು ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್​ನಲ್ಲಿ ಪ್ರಭಾಸ್ ಲುಕ್ ಗಮನ ಸೆಳೆದಿದೆ. ಅಷ್ಟೇ ಅಲ್ಲ ಪ್ರಭಾಸ್ ಅವರ ಪಾತ್ರದ ಹೆಸರು ಕೂಡ ರಿವೀಲ್ ಆಗಿದೆ. ಪ್ರಭಾಸ್ ಅವರು ಭೈರವನಾಗಿ ಮಿಂಚಲಿದ್ದಾರೆ. ಅಮಿತಾಭ್ ಬಚ್ಚನ್, ಕಮಲ್ ಹಾಸನ್, ಪ್ರಭಾಸ್, ದೀಪಿಕಾ ಪಡುಕೋಣೆ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಮಾರ್ಚ್ 8 ಮಹಾಶಿವರಾತ್ರಿ. ಎಲ್ಲರೂ ಶಿವನ ಆರಾಧನೆ ಮಾಡಿದ್ದಾರೆ. ಈ ವಿಶೇಷ ದಿನದಂದು ಹಲವು ಸಿನಿಮಾಗಳ ಪೋಸ್ಟರ್ ರಿವೀಲ್ ಆಗಿದೆ. ಅದೇ ರೀತಿ ಪ್ರಭಾಸ್ ಅವರ ಲುಕ್ ರಿವೀಲ್ ಮಾಡಲಾಗಿದೆ. ಈ ಪೋಸ್ಟರ್​ನಲ್ಲಿ ಪ್ರಭಾಸ್ ಅವರ ಮುಖ ರಿವೀಲ್ ಆಗಿಲ್ಲ. ಈ ಪೋಸ್ಟರ್​ಗೆ ‘ಅವನ ಹೆಸರು ಭೈರವ’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋಗೆ 10 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ.

ಇದನ್ನೂ ಓದಿ: ರಿವೀಲ್ ಆಯ್ತು ಅಮಿತಾಭ್ ಬಚ್ಚನ್ ಬ್ಯಾಂಕ್ ಬ್ಯಾಲೆನ್ಸ್; ಲೆಕ್ಕ ಮಾಡೋಕೆ ಎರಡು ಕೈ ಬೇಕು

ಈಗಾಗಲೇ ‘ಕಲ್ಕಿ 2898 ಎಡಿ’ ಸಿನಿಮಾ ಕಥೆಯ ಬಗ್ಗೆ ನಾಗ್ ಅಶ್ವಿನ್ ಅವರು ಹಿಂಟ್ ನೀಡಿದ್ದಾರೆ. ಸಿನಿಮಾದ ಟೈಮ್​ಲೈನ್ ಮಹಾಭಾರತದ ಜೊತೆ ಕನೆಕ್ಟ್ ಆಗಿರಲಿದೆ ಎಂದು ಅವರು ಹೇಳಿದ್ದಾರೆ. ‘ಈ ಚಿತ್ರದ ಕಥೆ ಮಹಾಭಾರತದ ಜೊತೆ ಆರಂಭ ಆಗಲಿದೆ ಹಾಗೂ ಕಲ್ಕಿ 2898 ಎಡಿಯಲ್ಲಿ ಕೊನೆಗೊಳ್ಳಲಿದೆ. ಸಿನಿಮಾದ ಕಥೆ ಆರು ಸಾವಿರ ವರ್ಷ ಸಾಗಲಿದೆ. ಕೃಷ್ಣನ ಅವತಾರವೂ ಇರಲಿದೆ’ ಎಂದಿದ್ದಾರೆ ಅವರು.

ಕಲ್ಕಿ ಕುರಿತ ಪೋಸ್ಟ್

‘ಕಲ್ಕಿ 2898 ಎಡಿ’ ಸಿನಿಮಾ ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿದೆ. ಹಲವು ವರ್ಷಗಳಿಂದ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ಯಾವ ರೀತಿಯಲ್ಲಿ ಮೂಡಿ ಬಂದಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ