‘ಸಲಾರ್​’ ಗೆಲುವಿನ ಬೆನ್ನಲ್ಲೇ ಪ್ರಭಾಸ್​ ಅಭಿಮಾನಿಗಳಿಗೆ ‘ಕಲ್ಕಿ 2898 ಎಡಿ’ ಚಿತ್ರದಿಂದ ಸಿಹಿ ಸುದ್ದಿ

‘ಕಲ್ಕಿ 2898 ಎಡಿ’ ಸಿನಿಮಾದ ಪ್ರೋಮೋ ಸಿದ್ಧವಾಗಿದೆ. ಈಗಾಗಲೇ ಸೆನ್ಸಾರ್​ ಮಂಡಳಿಯಿಂದ ಈ ಪ್ರೋಮೋಗೆ ಪ್ರಮಾಣ ಪತ್ರ ಕೂಡ ಸಿಕ್ಕಿದೆ. ಸಂಕ್ರಾಂತಿ ಹಬ್ಬದ ಸಮಯದಲ್ಲಿ ‘ಕಲ್ಕಿ 2898 ಎಡಿ’ ಪ್ರೋಮೋ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಈ ಪ್ರೋಮೋದ ಅವಧಿ 1 ನಿಮಿಷ 23 ಸೆಕೆಂಡ್​ ಇರಲಿದೆ.

‘ಸಲಾರ್​’ ಗೆಲುವಿನ ಬೆನ್ನಲ್ಲೇ ಪ್ರಭಾಸ್​ ಅಭಿಮಾನಿಗಳಿಗೆ ‘ಕಲ್ಕಿ 2898 ಎಡಿ’ ಚಿತ್ರದಿಂದ ಸಿಹಿ ಸುದ್ದಿ
ಪ್ರಭಾಸ್​
Follow us
ಮದನ್​ ಕುಮಾರ್​
|

Updated on: Jan 11, 2024 | 6:11 PM

ಸಾಲು ಸಾಲು ಸೋಲು ಕಂಡಿದ್ದ ನಟ ಪ್ರಭಾಸ್ (Prabhas) ಅವರು ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ್ದಾರೆ. ಇತ್ತೀಚೆಗೆ ತೆರೆಕಂಡ ‘ಸಲಾರ್​’ ಸಿನಿಮಾ (Salaar) ಸೂಪರ್​ ಹಿಟ್​ ಆಗಿದೆ. ಇದರಲ್ಲಿನ ಆ್ಯಕ್ಷನ್​ ದೃಶ್ಯಗಳನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ‘ಉಗ್ರಂ’ ಸಿನಿಮಾದ ಕಥೆ ಮರುಬಳಕೆ ಆಗಿದೆ ಎಂದು ಕರ್ನಾಟಕದಲ್ಲಿನ ಪ್ರೇಕ್ಷಕರು ಸ್ವಲ್ಪ ಮೂಗು ಮುರಿದರೂ ಕೂಡ ತೆಲುಗು ರಾಜ್ಯಗಳಲ್ಲಿನ ಪ್ರೇಕ್ಷಕರು ಈ ಚಿತ್ರವನ್ನು ಮೆಚ್ಚಿಕೊಂಡರು. ‘ಸಲಾರ್​’ ಸಿನಿಮಾದ ಗೆಲುವಿನ ಬೆನ್ನಲ್ಲೇ ಪ್ರಭಾಸ್​ ಅವರ ಅಭಿಮಾನಿಗಳಿಗಾಗಿ ಇನ್ನೊಂದು ಸಿಹಿ ಸುದ್ದಿ ಕೇಳಿಬಂದಿದೆ. ಅದು ಕಲ್ಕಿ 2898 ಎಡಿ’ (Kalki 2898 AD) ಸಿನಿಮಾತಂಡದಿಂದ.

‘ಸಲಾರ್​’ ಗೆದ್ದ ಬಳಿಕ ಪ್ರಭಾಸ್​ ಅವರ ಚಾರ್ಮ್​ ಮರಳಿ ಬಂದಿದೆ. ‘ಕಲ್ಕಿ 2898 ಎಡಿ’ ಸಿನಿಮಾದ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟಕೊಳ್ಳುವಂತಾಗಿದೆ. ಈ ಸಿನಿಮಾದಲ್ಲಿ ಬಹುತಾರಾಗಣ ಇದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ವರ್ಷ ಸಂಕ್ರಾಂತಿಗೆ ‘ಕಲ್ಕಿ 2898 ಎಡಿ’ ಚಿತ್ರ ಬಿಡುಗಡೆ ಆಗಬೇಕಿತ್ತು. ಆದರೆ ಕೆಲಸಗಳು ವಿಳಂಬ ಆದ ಕಾರಣ ಸಿನಿಮಾದ ರಿಲೀಸ್​ ದಿನಾಂಕ ಮುಂದೂಡಿಕೆ ಆಯಿತು. ಅದರೂ ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ಒಂದು ಸರ್ಪ್ರೈಸ್​ ಸಿಗಲಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ರಾಜಮೌಳಿ ನಟನೆ? ಹಿರಿದಾಗುತ್ತಿದೆ ಪ್ರಭಾಸ್​ ಸಿನಿಮಾದ ಪಾತ್ರವರ್ಗ

ವರದಿಗಳ ಪ್ರಕಾರ, ‘ಕಲ್ಕಿ 2898 ಎಡಿ’ ಸಿನಿಮಾದ ಪ್ರೋಮೋ ಸಿದ್ಧವಾಗಿದೆ. ಈಗಾಗಲೇ ಸೆನ್ಸಾರ್​ ಮಂಡಳಿಯಿಂದ ಈ ಪ್ರೋಮೋಗೆ ಪ್ರಮಾಣ ಪತ್ರ ಕೂಡ ಸಿಕ್ಕಿದೆ. ಸಂಕ್ರಾಂತಿ ಹಬ್ಬದ ಸಮಯದಲ್ಲಿ ‘ಕಲ್ಕಿ 2898 ಎಡಿ’ ಪ್ರೋಮೋ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಈ ಪ್ರೋಮೋದ ಅವಧಿ 1 ನಿಮಿಷ 23 ಸೆಕೆಂಡ್​​ ಇದೆ ಎಂದು ಹೇಳಲಾಗಿದೆ. ಚಿತ್ರತಂಡದಿಂದ ಅಧಿಕೃತ ಘೋಷಣೆಗಾಗಿ ಫ್ಯಾನ್ಸ್ ಕಾದಿದ್ದಾರೆ.

‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಪ್ರಭಾಸ್​​ ಜೊತೆ ದೀಪಿಕಾ ಪಡುಕೋಣೆ, ಕಮಲ್​ ಹಾಸನ್​, ಅಮಿತಾಭ್​ ಬಚ್ಚನ್​, ದಿಶಾ ಪಟಾನಿ ಮುಂತಾದ ಕಲಾವಿದರು ನಟಿಸುತ್ತಿದ್ದಾರೆ. ಇದು ಸೈನ್ಸ್​ ಫಿಕ್ಷನ್​ ಸಿನಿಮಾ ಆಗಿದ್ದು, ನಾಗ್​ ಅಶ್ವಿನ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಈ ಸಿನಿಮಾದ ಪೋಸ್ಟರ್​ಗಳು ಗಮನ ಸೆಳೆದಿವೆ. ಪ್ರೋಮೋ ಬಿಡುಗಡೆ ಆದ ಬಳಿಕ ಸಿನಿಮಾ ಮೇಲಿನ ಹೈಪ್​ ಇನ್ನಷ್ಟು ಹೆಚ್ಚಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್