‘ಕಲ್ಕಿ 2898 ಎಡಿ’ ಸಿನಿಮಾ ಬುಕಿಂಗ್ ಓಪನ್ ಯಾವಾಗ? ಇದು ಸುದೀರ್ಘ ಅವಧಿಯ ಸಿನಿಮಾ
‘ಕಲ್ಕಿ 2898 ಎಡಿ’ ಸಿನಿಮಾಗೆ ಜೂನ್ 7ರಿಂದ ಅಡ್ವಾನ್ಸ್ ಬುಕಿಂಗ್ ಆರಂಭ ಆಗಲಿದೆ. ಈ ವಿಚಾರದ ಬಗ್ಗೆ ತಂಡದವರು ಮಾಹಿತಿ ನೀಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ. ಈಗಾಗಲೇ ವಿದೇಶಗಳಲ್ಲಿ ಸಿನಿಮಾಗೆ ಟಿಕೆಟ್ ಬುಕಿಂಗ್ ಶುರುವಾಗಿದೆ.
‘ಕಲ್ಕಿ 2898 ಎಡಿ’ ಸಿನಿಮಾ (Kalki 2898 AD) ಜೂನ್ 27ರಂದು ರಿಲೀಸ್ ಆಗಲಿದೆ. ಈ ಚಿತ್ರದ ಬಿಡುಗಡೆ ಇನ್ನು ಬಾಕಿ ಇರೋದು ಕೆಲವೇ ತಿಂಗಳು ಮಾತ್ರ. ಈ ಸಿನಿಮಾ ಬಗ್ಗೆ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಿಗ್ ಬಜೆಟ್ನಲ್ಲಿ ಈ ಚಿತ್ರ ಸಿದ್ಧವಾಗಿದೆ. ಪ್ರಭಾಸ್ ನಟನೆಯ ಈ ಸಿನಿಮಾಗೆ ಕೌಂಟ್ಡೌನ್ ಶುರವಾಗಿದೆ. ಈ ಸಿನಿಮಾದ ಅಡ್ವಾನ್ಸ್ ಟಿಕೆಟ್ ಬುಕಿಂಗ್ಗೆ ದಿನಾಂಕ ಫಿಕ್ಸ್ ಆಗಿದೆ. ಈ ಬಗ್ಗೆ ತಂಡದವರು ಮಾಹಿತಿ ನೀಡಿದ್ದಾರೆ.
‘ಕಲ್ಕಿ 2898 ಎಡಿ’ ಸಿನಿಮಾಗೆ ಜೂನ್ 7ರಿಂದ ಅಡ್ವಾನ್ಸ್ ಬುಕಿಂಗ್ ಆರಂಭ ಆಗಲಿದೆ. ಈ ವಿಚಾರದ ಬಗ್ಗೆ ತಂಡದವರು ಮಾಹಿತಿ ನೀಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ. ಈಗಾಗಲೇ ವಿದೇಶಗಳಲ್ಲಿ ಸಿನಿಮಾಗೆ ಟಿಕೆಟ್ ಬುಕಿಂಗ್ ಶುರುವಾಗಿದೆ. ಅಲ್ಲಿ ಸಿನಿಮಾದ ರನ್ ಟೈಮ್ ಎಷ್ಟು ಎನ್ನುವ ಬಗ್ಗೆ ಮಾಹಿತಿ ಸಿಕ್ಕಿದೆ.
ಇದನ್ನೂ ಓದಿ: ಸಿನಿಮಾ ಬಿಡುಗಡೆಗೆ ಮುನ್ನವೇ ಅಮೆಜಾನ್ಗೆ ಬಂದ ‘ಕಲ್ಕಿ’ಯ ಬುಜ್ಜಿ-ಭೈರವ
‘ಕಲ್ಕಿ 2898 ಎಡಿ’ ಸಿನಿಮಾದ ಅವಧಿ ಎರಡು ಗಂಟೆ ಐವತ್ತು ನಿಮಿಷ ಇದೆ. ಇತ್ತೀಚೆಗೆ ರಿಲೀಸ್ ಆಗುವ ಸಿನಿಮಾಗಳು ಸಾಮಾನ್ಯವಾಗಿ ಎರಡರಿಂದ ಎರಡೂವರೆ ಗಂಟೆಯಲ್ಲಿ ಪೂರ್ಣಗೊಳ್ಳುತ್ತವೆ. ಈಗ ‘ಕಲ್ಕಿ 2898 ಎಡಿ’ ಸಿನಿಮಾದ ಅವಧಿ ಸರಿ ಸುಮಾರು ಮೂರು ಗಂಟೆ ಇರುವುದರಿಂದ ಪ್ರೇಕ್ಷಕರಿಗೆ ಸ್ವಲ್ಪ ಸುದೀರ್ಘ ಎನಿಸಬಹುದು. ಆದರೆ, ಪ್ರಭಾಸ್ ಫ್ಯಾನ್ಸ್ ಇದನ್ನು ಎಂಜಾಯ್ ಮಾಡುತ್ತಾರೆ.
#KALKI2898AD ~ @Cinemark 🔥🔥
Bookings will open on or before June 8th!
Which Cinemark location will you choose to experience the hysteria Rebels? 😉#PRABHAS #BujjiAndBhairava pic.twitter.com/QsYDYnGGRH
— Prathyangira Cinemas (@PrathyangiraUS) June 2, 2024
‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಸಿನಿಮಾದಲ್ಲಿ ಪ್ರಭಾಸ್ ಜೊತೆ ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ನಾಗ್ ಅಶ್ವಿನ್ ನಿರ್ದೇಶನ ಮಾಡಿದ್ದಾರೆ. ಅಶ್ವಿನಿ ದತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದಲ್ಲಿ 6000 ವರ್ಷದ ಕಥೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 8:55 am, Mon, 3 June 24