AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ವರ್ಷದ ಬಳಿಕ ಶುರುವಾಗುತ್ತಿದೆ ‘ಕಲ್ಕಿ 2’ ಶೂಟಿಂಗ್, ‘ಸಲಾರ್ 2’ ಯಾವಾಗ?

Prabhas movies: ಪ್ರಭಾಸ್ ಅವರು ಬಹಳ ಬ್ಯುಸಿ ಪ್ಯಾನ್ ಇಂಡಿಯಾ ಸ್ಟಾರ್ ನಟ. ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಎರಡು ಸೀಕ್ವೆಲ್ ಸಿನಿಮಾಗಳು ಸಹ ಇವೆ. ಅವುಗಳಲ್ಲಿ 2024 ರಲ್ಲಿ ಬಿಡುಗಡೆ ಆಗಿದ್ದ ‘ಕಲ್ಕಿ 2898 ಎಡಿ’ ಸಿನಿಮಾದ ಸೀಕ್ವೆಲ್​ನ ಶೂಟಿಂಗ್​ಗೆ ಪ್ರಭಾಸ್ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಅದಕ್ಕಿಂತಲೂ ಮುಂಚೆ ಬಿಡುಗಡೆ ಆಗಿದ್ದ ‘ಸಲಾರ್’ ಸಿನಿಮಾದ ಸೀಕ್ವೆಲ್ ಕತೆ ಏನು?

ಎರಡು ವರ್ಷದ ಬಳಿಕ ಶುರುವಾಗುತ್ತಿದೆ ‘ಕಲ್ಕಿ 2’ ಶೂಟಿಂಗ್, ‘ಸಲಾರ್ 2’ ಯಾವಾಗ?
Prabhas
ಮಂಜುನಾಥ ಸಿ.
|

Updated on: Jan 02, 2026 | 7:18 PM

Share

ಪ್ರಭಾಸ್ ಭಾರತದ ಸ್ಟಾರ್ ಪ್ಯಾನ್ ಇಂಡಿಯಾ (Pan Inda) ನಟ. ಅವರೆಷ್ಟು ಬ್ಯುಸಿ ಎಂದರೆ ಮುಂದಿನ ಮೂರು ನಾಲ್ಕು ವರ್ಷಗಳಿಗೆ ಈಗಲೇ ಡೇಟ್ಸ್ ಕೊಟ್ಟು ಕೂತಿದ್ದಾರೆ. ಒಟ್ಟಿಗೆ ಎರಡೆರಡು ಸಿನಿಮಾಗಳಲ್ಲಿ ನಟಿಸಿದರೂ ಈಗಿರುವ ಕಮಿಟ್​​ಮೆಂಟ್ ಮುಗಿಸಲು ಎರಡು ವರ್ಷವಾದರೂ ಬೇಕು. ಪ್ರಭಾಸ್ ಎಷ್ಟು ಬ್ಯುಸಿ ಎಂದರೆ ಈಗಾಗಲೇ ಬಿಡುಗಡೆ ಆಗಿ ಹಿಟ್ ಆಗಿರುವ ಸಿನಿಮಾಗಳ ಸೀಕ್ವೆಲ್​​ಗಳ ಭವಿಷ್ಯವೂ ಅತಂತ್ರದಲ್ಲಿದೆ. ಪ್ರಭಾಸ್ ಕೈಯಲ್ಲಿ ಪ್ರಸ್ತುತ ಎರಡು ಸೀಕ್ವೆಲ್ ಸಿನಿಮಾಗಳಿವೆ. ಒಂದು ‘ಕಲ್ಕಿ 2898 ಎಡಿ’ ಮತ್ತು ‘ಸಲಾರ್’ ಈ ಎರಡರಲ್ಲಿ ಮೊದಲಿಗೆ ‘ಕಲ್ಕಿ 2898 ಎಡಿ’ ಸಿನಿಮಾವನ್ನು ಪ್ರಭಾಸ್ ಪ್ರಾರಂಭಿಸುತ್ತಿದ್ದಾರೆ. ಆದರೆ ‘ಸಲಾರ್’ ಸೀಕ್ವೆಲ್ ಭವಿಷ್ಯ ಈಗಲೂ ಅತಂತ್ರದಲ್ಲಿಯೇ ಇದೆ.

ಪ್ರಶಾಂತ್ ನೀಲ್ ನಿರ್ದೇಶಿಸಿ, ಪ್ರಭಾಸ್ ನಟಿಸಿದ್ದ ‘ಸಲಾರ್’ ಸಿನಿಮಾ 2023 ರಲ್ಲಿ ಬಿಡುಗಡೆ ಆಗಿತ್ತು. ‘ಸಾಹೋ’, ‘ರಾಧೆ-ಶ್ಯಾಮ್’, ‘ಆದಿಪುರುಷ್’ ಸಿನಿಮಾಗಳ ಸತತ ಸೋಲಿನಿಂದ ಕಂಗೆಟ್ಟಿದ್ದ ಪ್ರಭಾಸ್ ಅವರನ್ನು ಸೋಲಿನ ಸುಳಿಯಿಂದ ಹೊರತಂಡ ಸಿನಿಮಾ ಅದಾಗಿತ್ತು. ಆದರೆ ‘ಸಲಾರ್’ ಬಿಡುಗಡೆ ಆಗಿ ಎರಡು ವರ್ಷಕ್ಕೂ ಹೆಚ್ಚು ಸಮಯವಾಗಿದೆ ಆದರೆ ಸಿನಿಮಾದ ಸೀಕ್ವೆಲ್ ಬಗ್ಗೆ ಯಾವುದೇ ಸುದ್ದಿ ಇಲ್ಲ. ಆದರೆ ‘ಸಲಾರ್’ ಬಿಡುಗಡೆ ಆಗಿ ಆರು ತಿಂಗಳ ಬಳಿಕ ಬಿಡುಗಡೆ ಆದ ‘ಕಲ್ಕಿ 2898 ಎಡಿ’ ಸಿನಿಮಾದ ಸೀಕ್ವೆಲ್​​ನ ಚಿತ್ರೀಕರಣಕ್ಕೆ ಓಕೆ ಹೇಳಿದ್ದಾರೆ ಪ್ರಭಾಸ್.

ಇದನ್ನೂ ಓದಿ:ಪ್ರಭಾಸ್ ಸಿನಿಮಾ ನಿರ್ದೇಶಕನ ಸಂಭಾವನೆ ಎಷ್ಟು ಕೋಟಿ ಗೊತ್ತೆ?

‘ಕಲ್ಕಿ 2898 ಎಡಿ’ ಸಿನಿಮಾ 2024ರ ಜೂನ್ ತಿಂಗಳಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾಧಾರಣ ಕಲೆಕ್ಷನ್ ಮಾಡಿತು. ಇದೀಗ ಈ ಸಿನಿಮಾದ ಸೀಕ್ವೆಲ್ ಚಿತ್ರೀಕರಣಕ್ಕೆ ಒಪ್ಪಿಗೆ ಸೂಚಿಸಿರುವ ಪ್ರಭಾಸ್, ಇದೇ ವರ್ಷ ಫೆಬ್ರವರಿ ತಿಂಗಳಲ್ಲಿ ಸಿನಿಮಾದ ಚಿತ್ರೀಕರಣ ಪ್ರಾರಂಭಿಸಲಿದ್ದಾರೆ. ಆದರೆ ಅದಕ್ಕೂ ಮುಂಚೆ ಬಿಡುಗಡೆ ಆಗಿದ್ದ ‘ಸಲಾರ್’ ಸಿನಿಮಾದ ಬಗ್ಗೆ ಯಾವುದೇ ಸದ್ದಿಲ್ಲ.

‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಜೊತೆಗೆ ದೀಪಿಕಾ ಪಡುಕೋಣೆ ಸಹ ಮಹತ್ವದ ಪಾತ್ರದಲ್ಲಿ ನಟಿಸಿದ್ದರು. ಆದರೆ ಸೀಕ್ವೆಲ್​​ನಲ್ಲಿ ದೀಪಿಕಾ ಪಡುಕೋಣೆ ಬದಲಿಗೆ ಬೇರೆ ನಟಿಯೊಬ್ಬರು ಅವರ ಪಾತ್ರದಲ್ಲಿ ನಟಿಸಲಿದ್ದಾರೆ. ದೀಪಿಕಾ ಪಡುಕೋಣೆ ಜೊತೆಗೆ ಭಿನ್ನಾಭಿಪ್ರಾಯ ಮೂಡಿದ ಕಾರಣ ಅವರನ್ನು ಸಿನಿಮಾದಿಂದ ಹೊರಗಿಡಲಾಗಿದೆ. ಫೆಬ್ರವರಿಯಲ್ಲಿ ಚಿತ್ರೀಕರಣ ಪ್ರಾರಂಭವಾಗಿ ಬಹುಷಃ 2027ರ ಆರಂಭದಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾದ ಸೀಕ್ವೆಲ್ ಬಿಡುಗಡೆ ಆಗಲಿದೆ. ಸೀಕ್ವೆಲ್​​ನಲ್ಲಿ ಕಮಲ್ ಹಾಸನ್ ಅವರು ಪ್ರಭಾಸ್ ಎದುರು ವಿಲನ್ ಆಗಿ ಅಬ್ಬರಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್