‘ಕಲ್ಕಿ 2898 ಎಡಿ’ ಸಿನಿಮಾಗೆ ಭರ್ಜರಿ ಆಫರ್; ಅತೀ ಕಡಿಮೆ ಮೊತ್ತಕ್ಕೆ ಟಿಕೆಟ್ ಮಾರಾಟ

‘ಕಲ್ಕಿ 2898 ಎಡಿ’ ಸಿನಿಮಾ 1200 ಕೋಟಿ ರೂಪಾಯಿ ಗಳಿಕೆ ಮಾಡುವ ಹಂತದಲ್ಲಿದೆ. ಈ ಚಿತ್ರದಿಂದ ಪ್ರಭಾಸ್, ಅಮಿತಾಭ್ ಬಚ್ಚನ್ ಖ್ಯಾತಿ ಹೆಚ್ಚಿದೆ. ಈಗ ಸಿನಿಮಾ ತಂಡ ಕಲೆಕ್ಷನ್ ಹೆಚ್ಚಿಸಿಕೊಳ್ಳಲು ಹೊಸ ಪ್ಲ್ಯಾನ್ ಮಾಡಿದೆ. ಚಿತ್ರದ ಟಿಕೆಟ್ ಬೆಲೆಯನ್ನು 100 ರೂಪಾಯಿಗೆ ಇಳಿಕೆ ಮಾಡಲಾಗಿದೆ.

‘ಕಲ್ಕಿ 2898 ಎಡಿ’ ಸಿನಿಮಾಗೆ ಭರ್ಜರಿ ಆಫರ್; ಅತೀ ಕಡಿಮೆ ಮೊತ್ತಕ್ಕೆ ಟಿಕೆಟ್ ಮಾರಾಟ
ಕಲ್ಕಿ 2898 ಎಡಿ
Follow us
ರಾಜೇಶ್ ದುಗ್ಗುಮನೆ
|

Updated on: Aug 02, 2024 | 6:59 AM

‘ಕಲ್ಕಿ 2898 ಎಡಿ’ ಸಿನಿಮಾ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿದೆ. ಈಗಾಗಲೇ ಸಿನಿಮಾದ ಗಳಿಕೆ 1200 ಕೋಟಿ ರೂಪಾಯಿ ಸಮೀಪಿಸಿದೆ. ಈಗ ಸಿನಿಮಾ ತಂಡದ ಕಲೆಕ್ಷನ್ ಹೆಚ್ಚಿಸಲು ದೊಡ್ಡ ಆಫರ್ ಘೋಷಣೆ ಮಾಡಿದೆ. ಈ ಚಿತ್ರದ ಟಿಕೆಟ್​ ಬೆಲೆಯನ್ನು ಇಳಿಕೆ ಮಾಡಲಾಗಿದೆ. ಈ ವಿಚಾರ ಪ್ರಭಾಸ್ ಫ್ಯಾನ್ಸ್​ಗೆ ಖುಷಿ ನೀಡಿದೆ. ದುಬಾರಿ ಟಿಕೆಟ್ ಎನ್ನುವ ಕಾರಣಕ್ಕೆ ಥಿಯೇಟರ್​ಗೆ ಹೋಗದೆ ಇದ್ದವರು, ‘ಕಲ್ಕಿ 2898 ಎಡಿ’ ಸಿನಿಮಾ ವೀಕ್ಷಣೆಗೆ ಈಗ ತೆರಳಬಹುದು.

‘ಕಲ್ಕಿ 2898 ಎಡಿ’ ಟಿಕೆಟ್ ದರವನ್ನು 100 ರೂಪಾಯಿಗೆ ಇಳಿಕೆ ಮಾಡಲಾಗಿದೆ. ಈ ಆಫರ್ ಆಗಸ್ಟ್ 2ರಿಂದ 9ರವರೆಗೆ ಇರಲಿದೆ. 100 ರೂಪಾಯಿ ಟಿಕೆಟ್ ದರದ ಜೊತೆಗೆ ಟ್ಯಾಕ್ಸ್ ಹಾಗೂ ಷರತ್ತುಗಳು ಅನ್ವಯ ಆಗುತ್ತವೆ ಎಂದು ತಂಡ ಹೇಳಿಕೊಂಡಿದೆ.

ಈಗಾಗಲೇ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳ ಮೇಲಾಗಿದೆ. ‘ಕಲ್ಕಿ 2898 ಎಡಿ’ ರಿಲೀಸ್ ಆದ ಬಳಿಕ ಹಲವು ಸಿನಿಮಾಗಳು ತೆರೆಗೆ ಅಪ್ಪಳಿಸಿವೆ. ಈ ಎಲ್ಲಾ ಕಾರಣದಿಂದ ಸಿನಿಮಾ ವೀಕ್ಷಣೆಗೆ ತೆರಳುವವರ ಸಂಖ್ಯೆ ಕಡಿಮೆ ಆಗುತ್ತಿದೆ. ಇದರ ಜೊತೆಗೆ ಶೋಗಳ ಸಂಖ್ಯೆ ಕೂಡ ಕಡಿಮೆ ಇರುತ್ತದೆ. ಆದರೆ, 100 ರೂಪಾಯಿ ಟಿಕೆಟ್ ದರ ಫಿಕ್ಸ್ ಮಾಡಿದರೆ ಜನರು ಹೆಚ್ಚೆಚ್ಚು ಥಿಯೇಟರ್​ನತ್ತ ಮುಖ ಮಾಡುತ್ತಾರೆ ಅನ್ನೋದು ಇವರ ಆಲೋಚನೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಲ್ಕಿ ಬುಜ್ಜಿ ಮೇನಿಯಾ; ಏಳು ಕೋಟಿ ವೆಚ್ಚದ ಬುಜ್ಜಿ ವಿಶೇಷತೆಗಳೇನು?

ಆದರೆ, ಈ ಆಫರ್ ಸಂಪೂರ್ಣವಾಗಿ ಅನ್ವಯ ಆಗುವ ರೀತಿ ಕಾಣುತ್ತಿಲ್ಲ. ವೀಕೆಂಡ್ ಎನ್ನುವ ಕಾರಣಕ್ಕೋ ಏನೋ ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾದ ಟಿಕೆಟ್ ದರಗಳು 150-200 ರೂಪಾಯಿಗೆ ಮಾರಾಟ ಆಗುತ್ತಿವೆ. ಹೀಗಿರುವಾಗ ಆಫರ್​ ಎಂದು ಹೇಳೋದು ಏಕೆ ಎನ್ನುವ ಪ್ರಶ್ನೆ ಅನೇಕರನ್ನು ಕಾಡಿದೆ. ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು