AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲ್ಕಿ’ ತಂಡದಿಂದ ರಾಮ್ ಚರಣ್ ಮಗಳು ಕ್ಲಿನ್​ಕಾರಾಗೆ ಸಿಕ್ತು ಸ್ಪೆಷಲ್ ಗಿಫ್ಟ್

‘ಕಲ್ಕಿ 2898 ಎಡಿ’ ಸಿನಿಮಾ ತಂಡದವರು ರಾಮ್ ಚರಣ್-ಉಪಾಸನಾ ಮಗಳು ಕ್ಲಿನ್​ಕಾರಾಗೆ ಸ್ಕೆಚ್ಚಸ್, ಸ್ಟಿಕ್ಕರ್ಸ್, ಗೊಂಬೆಗಳನ್ನು ಕಳುಹಿಸಿದ್ದಾರೆ. ಈ ಫೋಟೋನ ಉಪಾಸನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ತಂಡಕ್ಕೆ ಅವರು ಧನ್ಯವಾದ ಹೇಳಿದ್ದಾರೆ.

‘ಕಲ್ಕಿ’ ತಂಡದಿಂದ ರಾಮ್ ಚರಣ್ ಮಗಳು ಕ್ಲಿನ್​ಕಾರಾಗೆ ಸಿಕ್ತು ಸ್ಪೆಷಲ್ ಗಿಫ್ಟ್
ಕಲ್ಕಿ
ರಾಜೇಶ್ ದುಗ್ಗುಮನೆ
|

Updated on: Jun 03, 2024 | 2:35 PM

Share

‘ಕಲ್ಕಿ 2898 ಎಡಿ’ ಸಿನಿಮಾ (Kalki 2898 AD Movie) ಬಗ್ಗೆ ಫ್ಯಾನ್ಸ್ ಇಟ್ಟುಕೊಂಡಿರೋ ನಿರೀಕ್ಷೆ ತುಂಬಾನೇ ದೊಡ್ಡದು. ಈ ಚಿತ್ರಕ್ಕೆ ಸಾಕಷ್ಟು ಪ್ರಚಾರ ನೀಡುವ ಕೆಲಸ ಆಗುತ್ತಿದೆ. ನಿರ್ಮಾಪಕರು ಭರ್ಜರಿ ಹಣ ಸುರಿದು ಸಿನಿಮಾಗೆ ಪ್ರಚಾರ ಮಾಡುತ್ತಿದ್ದಾರೆ. ಸೆಲೆಬ್ರಿಟಿ ಮಕ್ಕಳನ್ನು ಕೂಡ ಇದರಲ್ಲಿ ಸೇರಿಸಿಕೊಳ್ಳಲಾಗುತ್ತಿದೆ. ಹೌದು, ರಾಮ್ ಚರಣ್ ಮಗಳಿಗೆ ‘ಕಲ್ಕಿ 2898 ಎಡಿ’ ತಂಡದಿಂದ ಗಿಫ್ಟ್ ಸಿಕ್ಕಿದೆ. ಈ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಚರ್ಚೆ ನಡೆಯುತ್ತಿದೆ.

‘ಕಲ್ಕಿ 2898 ಎಡಿ’ ಸಿನಿಮಾ ತಂಡದವರು ರಾಮ್ ಚರಣ್-ಉಪಾಸನಾ ಮಗಳು ಕ್ಲಿನ್​ಕಾರಾಗೆ ಸ್ಕೆಚ್ಚಸ್, ಸ್ಟಿಕ್ಕರ್ಸ್, ಗೊಂಬೆಗಳನ್ನು ಕಳುಹಿಸಿದ್ದಾರೆ. ಈ ಫೋಟೋನ ಉಪಾಸನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ತಂಡಕ್ಕೆ ಅವರು ಧನ್ಯವಾದ ಹೇಳಿದ್ದಾರೆ. ಇದು ಕೂಡ ಸಿನಿಮಾ ಪ್ರಚಾರದ ಒಂದು ಭಾಗ ಎಂದು ಕೆಲವರು ಊಹಿಸಿದ್ದಾರೆ.

ಸೆಲೆಬ್ರಿಟಿಗಳ ಮಕ್ಕಳಿಗೆ ಆಗಲೇ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿರುತ್ತದೆ. ಸೆಲೆಬ್ರಿಟಿಗಳನ್ನು ಪ್ರಚಾರಕ್ಕೆ ಸೇರಿಸಿಕೊಳ್ಳುವುದರ ಜೊತೆಗೆ ಮಕ್ಕಳನ್ನೂ ಸೇರಿಸಿಕೊಳ್ಳುತ್ತಿರುವುದರಿಂದ ಚಿತ್ರದ ಬಗ್ಗೆ ಮಕ್ಕಳಲ್ಲೂ ಕುತೂಹಲ ಮೂಡಲಿದೆ. ಈಗಾಗಲೇ ‘ಬುಜ್ಜಿ ಆ್ಯಂಡ್ ಭೈರವ’ ಅನಿಮೇಟೆಡ್ ಸೀರಿಸ್ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರಸಾರ ಕಾಣುತ್ತಿದೆ. ಅವುಗಳ ವೀಕ್ಷಣೆ ಕೂಡ ಇದರಿಂದ ಹೆಚ್ಚಲಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಸಿನಿಮಾ ಬುಕಿಂಗ್ ಓಪನ್ ಯಾವಾಗ? ಇದು ಸುದೀರ್ಘ ಅವಧಿಯ ಸಿನಿಮಾ

‘ಕಲ್ಕಿ 2898 ಎಡಿ’ ಚಿತ್ರಕ್ಕೆ ಭರ್ಜರಿ ಬೇಡಿಕೆ ಸೃಷ್ಟಿ ಆಗಿದೆ. ಜೂನ್ 27ರಂದು ತೆರೆಕಾಣಲಿರೋ ಸಿನಿಮಾಗೆ ಜೂನ್ 7ರಂದೇ ಅಡ್ವಾನ್ಸ್ ಟಿಕೆಟ್ ಬುಕಿಂಗ್ ಶುರುವಾಗಲಿದೆ. ಈ ಸಿನಿಮಾದ ಅವಧಿ 2 ಗಂಟೆ 50 ನಿಮಿಷ ಇರಲಿದೆ ಎಂದು ತಂಡ ಮಾಹಿತಿ ನೀಡಿದೆ. ಈ ಚಿತ್ರದಲ್ಲಿ 6000 ಸಾವಿರ ವರ್ಷಗಳ ಕಥೆ ಇರಲಿದೆ. ಈ ಚಿತ್ರಕ್ಕೆ ನಾಗ್ ಅಶ್ವಿನ್ ಅವರು ನಿರ್ದೇಶನ ಮಾಡುತ್ತಿದ್ದು, ಅಶ್ವಿನಿ ದತ್ ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್