ಸದ್ಯಕ್ಕಂತೂ ಒಟಿಟಿಗೆ ಬರಲ್ಲ ‘ಕಲ್ಕಿ 2898 ಎಡಿ’ ಸಿನಿಮಾ; ಎಷ್ಟು ತಿಂಗಳು ಕಾಯಬೇಕು?
ಸಿನಿಮಾ ಥಿಯೇಟರ್ನಲ್ಲಿ ರಿಲೀಸ್ ಆಗುತ್ತಿದ್ದಂತೆ ಒಟಿಟಿಯಲ್ಲಿ ಯಾವಾಗ ರಿಲೀಸ್ ಎನ್ನುವ ಚರ್ಚೆ ಆರಂಭ ಆಗುತ್ತದೆ. ‘ಕಲ್ಕಿ 2898 ಎಡಿ’ ಸಿನಿಮಾ ಒಟಿಟಿಯಲ್ಲಿ ಯಾವಾಗ ಬಿಡುಗಡೆ ಆಗಲಿದೆ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಕಾಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ.
‘ಕಲ್ಕಿ 2898 ಎಡಿ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಚಿತ್ರದಿಂದ ಪ್ರಭಾಸ್ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮೊದಲಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಟಿಕೆಟ್ ಬೆಲೆ ಹೆಚ್ಚಿರುವುದರಿಂದ ಕೆಲವರು ಒಟಿಟಿಯಲ್ಲಿ ಸಿನಿಮಾ ವೀಕ್ಷಿಸಬಹುದು ಎಂದು ಭಾವಿಸಿದ್ದರು. ಆದರೆ, ಇದಕ್ಕೆ ಮತ್ತಷ್ಟು ಸಮಯ ಹಿಡಿಯಲಿದೆ.
‘ಕಲ್ಕಿ 2898 ಎಡಿ’ ಸಿನಿಮಾ ದೊಡ್ಡ ಬಜೆಟ್ ಚಿತ್ರ. ಈ ಸಿನಿಮಾಗಾಗಿ ವೈಜಯಂತಿ ಮೂವಿಸ್ ಅವರು ಬರೋಬ್ಬರಿ 600 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ. ಇಷ್ಟೆಲ್ಲ ದೊಡ್ಡ ಮೊತ್ತ ಹಾಕಿ ಸಿನಿಮಾ ಮಾಡಿದಾಗ ಹೆಚ್ಚಿನ ಗಳಿಕೆಯನ್ನು ನಿರೀಕ್ಷಿಸಲಾಗುತ್ತದೆ. ಹೀಗಾಗಿ, ಹೆಚ್ಚು ದಿನ ಸಿನಿಮಾ ಥಿಯೇಟರ್ನಲ್ಲಿ ಓಡಬೇಕಾದ ಅನಿವಾರ್ಯತೆ ಇದೆ. ಈ ಕಾರಣದಿಂದ ಸದ್ಯಕ್ಕಂತೂ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಕಾಣುವುದಿಲ್ಲ. ಅಮೇಜಾನ್ ಪ್ರೈಮ್ ವಿಡಿಯೋ ಹಾಗೂ ನೆಟ್ಫ್ಲಿಕ್ಸ್ನವರು ಈ ಚಿತ್ರದ ಒಟಿಟಿ ಹಕ್ಕನ್ನು ಪಡೆದಿದ್ದಾರೆ.
Day 20 (3rd Tuesday) – EXTRAORDINARY
108.81k Tickets Booked in 24 Hours 💥💥
A Never Before Bookings Trend in recent years…#Prabhas #Kalki2898AD #1000CroresBlockbusterKalki2898AD #EpicBlockbusterKalki pic.twitter.com/dUKRQREMsL
— Prabhas Fan (@ivdsai) July 17, 2024
ಕೆಲವು ಸಿನಿಮಾಗಳು ಥಿಯೇಟರ್ನಲ್ಲಿ ರಿಲೀಸ್ ಆದ ಕೇವಲ 30 ದಿನಕ್ಕೆ ಒಟಿಟಿಯಲ್ಲಿ ರಿಲೀಸ್ ಆಗುತ್ತವೆ. ಥಿಯೇಟರ್ನಲ್ಲಿ ಬಿಸ್ನೆಸ್ ಇಲ್ಲದಾಗ ಈ ರೀತಿ ಒಟಿಟಿಯಲ್ಲಿ ರಿಲೀಸ್ ಮಾಡಲಾಗುತ್ತದೆ. ಆದರೆ, ‘ಕಲ್ಕಿ 2898 ಎಡಿ’ ವಿಚಾರದಲ್ಲಿ ಆ ರೀತಿ ಇಲ್ಲ. ನಿರ್ಮಾಪಕರು ಎರಡು ತಿಂಗಳ ಬಳಿಕ ‘ಕಲ್ಕಿ 2898’ ಚಿತ್ರವನ್ನು ರಿಲೀಸ್ ಮಾಡಲಿದ್ದಾರೆ ಎಂದು ವರದಿ ಆಗಿದೆ.
ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಶೋ ವೇಳೆ ಪಿವಿಆರ್ ಒಳಗೆ ಸುರಿಯಿತು ಮಳೆ ನೀರು; ವಿಡಿಯೋ ವೈರಲ್
‘ಕಲ್ಕಿ 2898 ಎಡಿ’ ಚಿತ್ರವನ್ನು ನಾಗ್ ಅಶ್ವಿನ್ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಅಶ್ವಿನಿ ದತ್ ಅವರು ಬಂಡವಾಳ ಹೂಡಿದ್ದಾರೆ. ಈ ಚಿತ್ ದೊಡ್ಡ ಪಾತ್ರವರ್ಗದ ಕಾರಣಕ್ಕೂ ಅನೇಕರಿಗೆ ಇಷ್ಟ ಆಗಿದೆ. ಈ ಸಿನಿಮಾದಲ್ಲಿ ಮಹಾಭಾರತಕ್ಕೂ ಕನೆಕ್ಷನ್ ನೀಡಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.