‘ಕಲ್ಕಿ 2898 ಎಡಿ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಚಿತ್ರದಿಂದ ಪ್ರಭಾಸ್ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮೊದಲಾದವರು ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಟಿಕೆಟ್ ಬೆಲೆ ಹೆಚ್ಚಿರುವುದರಿಂದ ಕೆಲವರು ಒಟಿಟಿಯಲ್ಲಿ ಸಿನಿಮಾ ವೀಕ್ಷಿಸಬಹುದು ಎಂದು ಭಾವಿಸಿದ್ದರು. ಆದರೆ, ಇದಕ್ಕೆ ಮತ್ತಷ್ಟು ಸಮಯ ಹಿಡಿಯಲಿದೆ.
‘ಕಲ್ಕಿ 2898 ಎಡಿ’ ಸಿನಿಮಾ ದೊಡ್ಡ ಬಜೆಟ್ ಚಿತ್ರ. ಈ ಸಿನಿಮಾಗಾಗಿ ವೈಜಯಂತಿ ಮೂವಿಸ್ ಅವರು ಬರೋಬ್ಬರಿ 600 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ. ಇಷ್ಟೆಲ್ಲ ದೊಡ್ಡ ಮೊತ್ತ ಹಾಕಿ ಸಿನಿಮಾ ಮಾಡಿದಾಗ ಹೆಚ್ಚಿನ ಗಳಿಕೆಯನ್ನು ನಿರೀಕ್ಷಿಸಲಾಗುತ್ತದೆ. ಹೀಗಾಗಿ, ಹೆಚ್ಚು ದಿನ ಸಿನಿಮಾ ಥಿಯೇಟರ್ನಲ್ಲಿ ಓಡಬೇಕಾದ ಅನಿವಾರ್ಯತೆ ಇದೆ. ಈ ಕಾರಣದಿಂದ ಸದ್ಯಕ್ಕಂತೂ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಕಾಣುವುದಿಲ್ಲ. ಅಮೇಜಾನ್ ಪ್ರೈಮ್ ವಿಡಿಯೋ ಹಾಗೂ ನೆಟ್ಫ್ಲಿಕ್ಸ್ನವರು ಈ ಚಿತ್ರದ ಒಟಿಟಿ ಹಕ್ಕನ್ನು ಪಡೆದಿದ್ದಾರೆ.
Day 20 (3rd Tuesday) – EXTRAORDINARY
108.81k Tickets Booked in 24 Hours 💥💥
A Never Before Bookings Trend in recent years…#Prabhas #Kalki2898AD #1000CroresBlockbusterKalki2898AD #EpicBlockbusterKalki pic.twitter.com/dUKRQREMsL
— Prabhas Fan (@ivdsai) July 17, 2024
ಕೆಲವು ಸಿನಿಮಾಗಳು ಥಿಯೇಟರ್ನಲ್ಲಿ ರಿಲೀಸ್ ಆದ ಕೇವಲ 30 ದಿನಕ್ಕೆ ಒಟಿಟಿಯಲ್ಲಿ ರಿಲೀಸ್ ಆಗುತ್ತವೆ. ಥಿಯೇಟರ್ನಲ್ಲಿ ಬಿಸ್ನೆಸ್ ಇಲ್ಲದಾಗ ಈ ರೀತಿ ಒಟಿಟಿಯಲ್ಲಿ ರಿಲೀಸ್ ಮಾಡಲಾಗುತ್ತದೆ. ಆದರೆ, ‘ಕಲ್ಕಿ 2898 ಎಡಿ’ ವಿಚಾರದಲ್ಲಿ ಆ ರೀತಿ ಇಲ್ಲ. ನಿರ್ಮಾಪಕರು ಎರಡು ತಿಂಗಳ ಬಳಿಕ ‘ಕಲ್ಕಿ 2898’ ಚಿತ್ರವನ್ನು ರಿಲೀಸ್ ಮಾಡಲಿದ್ದಾರೆ ಎಂದು ವರದಿ ಆಗಿದೆ.
ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಶೋ ವೇಳೆ ಪಿವಿಆರ್ ಒಳಗೆ ಸುರಿಯಿತು ಮಳೆ ನೀರು; ವಿಡಿಯೋ ವೈರಲ್
‘ಕಲ್ಕಿ 2898 ಎಡಿ’ ಚಿತ್ರವನ್ನು ನಾಗ್ ಅಶ್ವಿನ್ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಅಶ್ವಿನಿ ದತ್ ಅವರು ಬಂಡವಾಳ ಹೂಡಿದ್ದಾರೆ. ಈ ಚಿತ್ ದೊಡ್ಡ ಪಾತ್ರವರ್ಗದ ಕಾರಣಕ್ಕೂ ಅನೇಕರಿಗೆ ಇಷ್ಟ ಆಗಿದೆ. ಈ ಸಿನಿಮಾದಲ್ಲಿ ಮಹಾಭಾರತಕ್ಕೂ ಕನೆಕ್ಷನ್ ನೀಡಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.